AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ, ಕಿರುಕುಳ, ಕೊಲೆ! ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನನ್ನೇ ಮುಗಿಸಿದ ಮಹಿಳೆ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿಯಲ್ಲಿ ಒಂದು ವಿಚಿತ್ರ, ಸಿನಿಮೀಯ ಪ್ರಕರಣ ವರದಿಯಾಗಿದೆ. ಮಹಿಳೆಯೊಬ್ಬರ ಹಾಲಿ ಪ್ರಿಯಕರನ ಕುಟುಂಬದವರು ಆಕೆಯ ಮಗಳನ್ನು ಸಂಬಂಧಿಗೆ ಮದುವೆ ಮಾಡಿಕೊಡುವಂತೆ ಕೇಳಿದ್ದರಿಂದ ಸಂಬಂಧ ಮುರಿದುಬಿದ್ದಿದ್ದು ಮಾತ್ರವಲ್ಲದೆ, ಕೊಲೆಯೂ ಸಂಭವಿಸಿದೆ. ಮಹಿಳೆ ತನ್ನ ಮಾಜಿ ಪ್ರಿಯಕರನ ಜತೆ ಸೇರಿ ಹಾಲಿ ಪ್ರಿಯಕರನನ್ನೇ ಕೊಲೆ ಮಾಡಿಸಿದ್ದಾಳೆ.

ಪ್ರೀತಿ, ಕಿರುಕುಳ, ಕೊಲೆ! ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನನ್ನೇ ಮುಗಿಸಿದ ಮಹಿಳೆ
ಸಾಂದರ್ಭಿಕ ಚಿತ್ರImage Credit source: TV9 Network
ಸಹದೇವ್​ ಮಾನೆ
| Edited By: |

Updated on: Oct 03, 2026 | 11:45 AM

Share

ಬೆಳಗಾವಿ, ಅಕ್ಟೋಬರ್ 3: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಮಹಿಳೆಯೊಬ್ಬಳು ಮಾಜಿ ಪ್ರಿಯಕರನ ಜೊತೆ ಸೇರಿ ಹಾಲಿ ಪ್ರಿಯಕರನನ್ನು ಹತ್ಯೆ ಮಾಡಿಸಿರುವ ಆರೋಪ ಕೇಳಿಬಂದಿದೆ. ಬಳ್ಳಿಗೇರಿಯ ರಣವೀರಸಿಂಗ್ ರಜಪೂತ (32) ಹತ್ಯೆಗೀಡಾದ ವ್ಯಕ್ತಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀದೇವಿ ರಜಪೂತ ಹಾಗೂ ವಿಜಯಪುರ ಜಿಲ್ಲೆಯ ರೋಣಿಹಾಳದ ಬೈರು ಪವಾರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

ಐದಾರು ವರ್ಷಗಳಿಂದ ಲವ್, ರಹಸ್ಯ ಸಂಬಂಧ

ಶ್ರೀದೇವಿ ರಜಪೂತ ಹಾಗೂ ರಣವೀರಸಿಂಗ್ ನಡುವೆ ಕಳೆದ ಐದಾರು ವರ್ಷಗಳಿಂದ ಅನೈತಿಕ ಸಂಬಂಧವಿತ್ತು. ಈ ವಿಚಾರ ಯಾರಿಗೂ ತಿಳಿಯದಂತೆ ಇಬ್ಬರೂ ನೋಡಿಕೊಂಡಿದ್ದರು. ಈ ಮಧ್ಯೆ ಶ್ರೀದೇವಿಯ ಪುತ್ರಿಯನ್ನು ರಣವೀರಸಿಂಗ್ ಸೋದರ ಸಂಬಂಧಿಗೆ ಮದುವೆ ಮಾಡಿ ಕೊಡುವಂತೆ ಬೇಡಿಕೆ ಆತನ ಕುಟುಂದವರು ಇಟ್ಟಿದ್ದರು. ರಣವೀರಸಿಂಗ್ ಅವರ ಸೋದರ ನಾರಾಯಣ್‌ಗೆ ಮದುವೆ ಮಾಡಿಕೊಡುವಂತೆ ಕೇಳಲಾಗಿತ್ತು.

ಮದುವೆ ಬೇಡಿಕೆಯಿಂದ ಮುರಿದುಬಿದ್ದ ಅನೈತಿಕ ಸಂಬಂಧ!

ಈ ಬೇಡಿಕೆಗೆ ಶ್ರೀದೇವಿ ಒಪ್ಪದ ಹಿನ್ನೆಲೆಯಲ್ಲಿ ರಣವೀರಸಿಂಗ್ ಜೊತೆಗಿನ ಸಂಬಂಧವನ್ನು ಮುರಿದುಕೊಂಡಿದ್ದಳು. ಆದರೆ, ಮಗಳನ್ನು ನೀಡುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಇದೇ ವೇಳೆ ರಣವೀರಸಿಂಗ್‌ನಿಂದ ತೀವ್ರ ಕಿರುಕುಳ ಅನುಭವಿಸುತ್ತಿದ್ದಾಗಿ ಶ್ರೀದೇವಿ ಆರೋಪಿಸಿದ್ದಾಳೆ.

20 ವರ್ಷಗಳ ಹಿಂದೆಯೇ ಮದುವೆ, ನಡುವೆ ಯುವಕನೊಂದಿಗೆ ಲವ್!

ಶ್ರೀದೇವಿ ಮೂಲತಃ ವಿಜಯಪುರ ಜಿಲ್ಲೆಯ ರೋಣಿಹಾಳದ ನಿವಾಸಿ. ಸುಮಾರು 20 ವರ್ಷಗಳ ಹಿಂದೆ ಬಳ್ಳಿಗೇರಿಯ ಯುವಕನೊಂದಿಗೆ ವಿವಾಹವಾಗಿದ್ದಳು. ಮದುವೆಗೂ ಮುನ್ನ ಶಾಲೆಯಲ್ಲಿದ್ದಾಗಲೇ ರೋಣಿಹಾಳದ ಬೈರು ಪವಾರ್ ಹಾಗೂ ಶ್ರೀದೇವಿ ಪರಸ್ಪರ ಪ್ರೀತಿಸುತ್ತಿದ್ದರು. ಏತನ್ಮಧ್ಯೆ, ಹಾಲಿ ಪ್ರಿಯಕರನಿಂದ ಕಿರುಕುಳವಾಗುತ್ತಿರುವ ವಿಷಯವನ್ನು ಶ್ರೀದೇವಿ ಮಾಜಿ ಪ್ರಿಯಕರ ಬೈರು ಪವಾರ್‌ಗೆ ತಿಳಿಸಿದ್ದಾಳೆ. ಬಳಿಕ ಇಬ್ಬರೂ ಭೇಟಿಯಾಗಿ ರಣವೀರಸಿಂಗ್ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದ ಅಮಲಲ್ಲಿ ಹೊಡೆದಾಡಿಕೊಂಡ ಕಾರ್ಮಿಕರು, 8 ಆರೋಪಿಗಳ ಬಂಧನ: ಉತ್ತರಹಳ್ಳಿಯಲ್ಲಿ ಪುಂಡಾಟ ಮೆರೆದಿದ್ದ 11 ಆರೋಪಿಗಳ ಸೆರೆ

ಯೋಜನೆಯಂತೆ ಬೈರು ಪವಾರ್ ಬಳ್ಳಿಗೇರಿಗೆ ಬಂದು ರಣವೀರಸಿಂಗ್‌ನ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು ಕಾಲ್ ಡಿಟೇಲ್ಸ್ ಹಿಸ್ಟರಿ ಆಧರಿಸಿ ಶ್ರೀದೇವಿ ರಜಪೂತ ಹಾಗೂ ಬೈರು ಪವಾರ್ ಅನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

LIVE TV

ಹಾಲಿ ಪ್ರಿಯಕರನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಹಾಗೂ ಆಕೆಯ ಮಾಜಿ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕಾಲ್ ಡಿಟೇಲ್ಸ್ ಹಿಸ್ಟರಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು