AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolhapur Violence: ಕೊಲ್ಹಾಪುರದಲ್ಲಿ ಹಿಂಸಾಚಾರ, 36 ಜನರ ಬಂಧನ, ಜೂ.19ರವರೆಗೆ ನಿಷೇಧಾಜ್ಞೆ ಮುಂದುವರಿಕೆ

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 36 ಜನರನ್ನು ಅರೆಸ್ಟ್ ಮಾಡಲಾಗಿದೆ. ಸ್ಟೇಟಸ್ ಹಾಕಿದ್ದ ಇಬ್ಬರು ಬಾಲಕರು ಸೇರಿ ಐವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕೊಲ್ಹಾಪುರ ಪೊಲೀಸರು ಹುಡುಗರ ಬಳಿ ಇದ್ದ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

Kolhapur Violence: ಕೊಲ್ಹಾಪುರದಲ್ಲಿ ಹಿಂಸಾಚಾರ, 36 ಜನರ ಬಂಧನ, ಜೂ.19ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಕೊಲ್ಹಾಪುರದಲ್ಲಿ ಸಂಘರ್ಷ
Follow us
ಆಯೇಷಾ ಬಾನು
|

Updated on:Jun 09, 2023 | 7:04 AM

ಬೆಳಗಾವಿ: ವಿವಾದಿತ ವಾಟ್ಸಪ್ ಸ್ಟೇಟಸ್‌ ವೈರಲ್ ಬೆನ್ನಲ್ಲೇ ಉದ್ವಿಘ್ನಗೊಂಡಿದ್ದ ಮಹಾರಾಷ್ಟ್ರದ ಕೊಲ್ಹಾಪುರ(Kolhapur Violence) ಜಿಲ್ಲೆಯಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 36 ಜನರನ್ನು ಅರೆಸ್ಟ್(Arrest) ಮಾಡಲಾಗಿದೆ. ಸ್ಟೇಟಸ್ ಹಾಕಿದ್ದ ಇಬ್ಬರು ಬಾಲಕರು ಸೇರಿ ಐವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಕೊಲ್ಹಾಪುರ ಪೊಲೀಸರು ಹುಡುಗರ ಬಳಿ ಇದ್ದ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಸದ್ಯ ಸಹಜ ಸ್ಥಿತಿಯತ್ತ ಮರಳಿದ ಕೊಲ್ಹಾಪುರದಲ್ಲಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಆದ್ರೆ ಕೊಲ್ಹಾಪುರ ನಗರದಲ್ಲಿ ಜೂ.19ರವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ.

ಬೆಳಗಾವಿಯಲ್ಲಿ ಕಟ್ಟೆಚ್ಚರ

ಇತ್ತ ಮಹಾರಾಷ್ಟ್ರದ ಕೊಲ್ಹಾಪುರದೊಂದಿಗೆ ಗಡಿ ಹಂಚಿಕೊಂಡ ಗಡಿಜಿಲ್ಲೆ ಬೆಳಗಾವಿಯಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡ ಬೆಳಗಾವಿ ಜಿಲ್ಲೆಗೆ ವಾಟ್ಸಪ್ ವಿವಾದ ಕಾಲಿಟ್ಟಿದ್ದು ಛತ್ರಪತಿ ಶಿವಾಜಿ ಮಹಾರಾಜರಿಗೆ ಅಪಮಾನ ಮಾಡುವ ರೀತಿ ಬೆಳಗಾವಿಯ ಇಬ್ಬರು ಯುವಕರು ವಾಟ್ಸಪ್ ಸ್ಟೇಟಸ್ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿವಾದಿತ ವಾಟ್ಸಪ್ ಸ್ಟೇಟಸ್ ಇಟ್ಟಿದ್ದ ಇಬ್ಬರು ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಳಗಾವಿ ಎಪಿಎಂಸಿ ಠಾಣೆಗೆ ಆಗಮಿಸಿ ಹಿಂದೂಪರ ಸಂಘಟನೆಗಳ ಮುಖಂಡರು ಮನವಿ ಮಾಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಪಕ್ಷೇತರ ಸದಸ್ಯ ಶಂಕರ್ ಪಾಟೀಲ್, ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ನೇತೃತ್ವದಲ್ಲಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮಣಿಗೆ ಮನವಿ ಸಲ್ಲಿಸಿದ್ದಾರೆ.

ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸಿಪಿ ನಾರಾಯಣ ಭರಮಣಿ ಭರವಸೆ ನೀಡಿದ್ದು ನಿಮ್ಮ ಹುಡುಗರಿಗೂ ಕಾನೂನು ಕೈಗೆತ್ತಿಕೊಳ್ಳದಂತೆ ತಿಳಿ ಹೇಳಿ‌. ಏನೇ ಸಮಸ್ಯೆ ಇದ್ದರೂ ನಮ್ಮ ಗಮನಕ್ಕೆ ತನ್ನಿ, ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಎಸಿಪಿ ನಾರಾಯಣ್ ಭರಮಣಿ ಹಿಂದೂಪರ ಸಂಘಟನೆಗಳ ಮುಖಂಡರಿಗೆ ಸೂಚನೆ ನೀಡಿದ್ದಾರೆ. ಕೋಮುಸೌಹಾರ್ದತೆ ಕದಡುವ, ಬೆಳಗಾವಿ ನಗರದಲ್ಲಿ ಶಾಂತಿಭಂಗಕ್ಕೆ ಯತ್ನಿಸುವ ಆರೋಪಿಗಳ ವಿರುದ್ಧ ಕ್ರಮಕ್ಕೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ಓದಿ:Kolhapur Violence: ಕೊಲ್ಹಾಪುರದಲ್ಲಿ ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್ 

ಇನ್ನು ಕೊಲ್ಹಾಪುರ ಜಿಲ್ಲೆಯಲ್ಲಿ ಘರ್ಷಣೆ ಪ್ರಕರಣ ಸಂಬಂಧ 50ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು 36 ಜನರನ್ನು ವಶಕ್ಕೆ ಪಡೆಯಲಾಗಿದೆ.‌ ಕೊಲ್ಹಾಪುರದಲ್ಲಿ ನಿನ್ನೆ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ದೀಪಕ್ ಕೇಸರ್‌ಕರ್ ಶಾಂತಿ ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಗಡಿ ಜಿಲ್ಲೆ ಬೆಳಗಾವಿಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ‌.‌ ವಿವಾದಿತ ವಾಟ್ಸಪ್ ಸ್ಟೇಟಸ್ ಹಾಕಿದ್ದ ಓರ್ವ ಅಪ್ರಾಪ್ತನ ವಿರುದ್ಧ ನಿಪ್ಪಾಣಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ರೆ, ಬೆಳಗಾವಿ ನಗರದ ಎಪಿಎಂಸಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ನಿಪ್ಪಾಣಿಯಲ್ಲಿಯೇ ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಬೀಡುಬಿಟ್ಟಿದ್ದು ಬೆಳಗಾವಿ ಜಿಲ್ಲೆ ಗಡಿ ಗ್ರಾಮಗಳಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ನಿಪ್ಪಾಣಿ, ಕೊಗನೊಳ್ಳಿ, ಬೋರಗಾಂವ, ಅಕ್ಕೋಲ, ಎಕ್ಸಂಬಾ, ಬೇಡಕಿಹಾಳ, ಮಣಕಪುರ, ಸಿದ್ನಾಳ, ಮಂಗೂರ, ಚಂದೂರ ಗ್ರಾಮಗಳಲ್ಲಿ ತೀವ್ರ ಮುಂಜಾಗ್ರತೆ ವಹಿಸಿರುವ ಪೊಲೀಸರು ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೋಸ್ಟ್ ಹಾಕಿದ್ರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪ್ರಮುಖ ಸುದ್ದಿಗಳನ್ನು  ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 am, Fri, 9 June 23

ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ