ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧ ಏಳು ಜನರನ್ನ ಕಾಕತಿ ಪೊಲೀಸರು ನಿನ್ನೆಯೇ ಬಂಧಿಸಿದ್ದರು. ಸದ್ಯ ತಡರಾತ್ರಿ 4 ಜನ ಮಹಿಳಾ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಬೆಳಗಾವಿ, ಡಿ.12: ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋದ ಕಾರಣ ಯುವಕನ ತಾಯಿಯನ್ನ (Woman) ಬೆತ್ತಲೆಗೊಳಿಸಿ ಥಳಿಸಿ (Assault) ಮೃಗೀಯ ವರ್ತನೆ ತೋರಿದ ಘಟನೆ ಇಡೀ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧ ಏಳು ಜನರನ್ನ ಕಾಕತಿ ಪೊಲೀಸರು ನಿನ್ನೆಯೇ ಬಂಧಿಸಿದ್ದರು. ಸದ್ಯ ತಡರಾತ್ರಿ 4 ಜನ ಮಹಿಳಾ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಆರೋಪಿಗಳನ್ನು ಹಿಂಡಲಗಾ ಜೈಲಿಗೆ (Hindalaga Jail) ಶಿಫ್ಟ್ ಮಾಡಲಾಗಿದೆ.
ಬಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಬಳಿಕ ನ್ಯಾಯಾಧೀಶರ ಮುಂದೆ ಮಹಿಳಾ ಆರೋಪಿಗಳನ್ನ ಹಾಜರು ಪಡಿಸಲಾಗಿದ್ದು ನಾಲ್ಕು ಜನ ಮಹಿಳಾ ಆರೋಪಿಗಳನ್ನು ತಡ ರಾತ್ರಿಯೇ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸ ಮಾಡಿದ ಆರೋಪಿಗಳು ಮಾಧ್ಯಮಗಳ ಕ್ಯಾಮರಾ ನೋಡ್ತಿದ್ದಂತೆ ತಲೆ ತಗ್ಗಿಸಿ ಜೈಲು ಒಳಗೆ ಹೋಗಿದ್ದಾರೆ. ಇನ್ನು ಬಸಪ್ಪ ನಾಯಕ್, ರಾಜು ನಾಯಕ್, ಕೆಂಪಣ್ಣ ಎಂಬ ಆರೋಪಿಗಳನ್ನ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈ ಆರೋಪಿಗಳನ್ನ ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿ, ಪೊಲೀಸ್ ಕಸ್ಟಡಿ ಪಡೆಯಲು ಸಿದ್ಧತೆ ನಡೆದಿದೆ.
ಇದನ್ನೂ ಓದಿ: ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, 7 ಜನ ಅರೆಸ್ಟ್
ಇನ್ನು ನಿನ್ನೆ ಸಂಜೆಯೇ ಅಮಾನವೀಯವಾಗಿ ನಡೆದುಕೊಂಡ ಯುವತಿ ತಂದೆ-ತಾಯಿ ಸೇರಿ 12 ಜನರ ಮೇಲೆ ಕಾಕತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹಲ್ಲೆಗೊಳಗಾದ ಮಹಿಳೆಯ ದೂರಿನ ಹಿನ್ನೆಲೆ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದರು. ಐಪಿಸಿ 1860ರ ಅಡಿಯಲ್ಲಿ ಸೆಕ್ಷನ್ 143, 147, 148, 341, 342, 327, 324, 323, 307, 452, 427, 352(B) 149 ಮತ್ತು ಆಸ್ತಿ ಹಾನಿ ತಡೆಗಟ್ಟುವ ಕಾಯ್ದೆ 1981 ಅಡಿಯಲ್ಲಿ ಕೇಸ್ ದಾಖಲಾಗಿದೆ.
ಯುವತಿಯ ತಂದೆ ಬಸಪ್ಪ ನಾಯಕ್, ಚಿಕ್ಕಪ್ಪರಾದ ರಾಜು ನಾಯಕ್, ಯಲ್ಲಪ್ಪ ನಾಯಕ್, ಯುವತಿ ಸಹೋದರರಾದ ಕೆಂಪಣ್ಣ, ಲಕ್ಕಪ್ಪ, ತಾಯಿ ಪಾರ್ವತಿ, ಗಂಗವ್ವ ವಾಲಿಕಾರ್, ಸಂಗೀತಾ ಹೆಗ್ಗನಾಯಕ್, ಶೋಭಾ ನಾಯಕ್, ಲಕ್ಕವ್ವ ನಾಯಕ್, ಇಬ್ಬರು ಬಾಲಾಪರಾಧಿ ಸೇರಿ 12 ಜನರ ವಿರುದ್ಧ ದೂರು ದಾಖಲಾಗಿದೆ. ಈಗಾಗಲೇ ಯುವತಿ ತಂದೆ ತಾಯಿ ಸೇರಿ ಏಳು ಜನರನ್ನ ಪೊಲೀಸರು ಬಂಧಿಸಿದ್ದು ಇನ್ನೂಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ನಾಲ್ಕು ಮಹಿಳಾ ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಘಟನೆ ಹಿನ್ನೆಲೆ
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ದುಂಡಪ್ಪ ನಾಯಕ್ ಅನ್ನೋ ಯುವಕ ಮತ್ತು ಪ್ರಿಯಾಂಕ್ ಅನ್ನೋ ಯುವತಿ ಪರಸ್ಪರ ಪ್ರೀತಿಸ್ತಿದ್ರು. ಇದಕ್ಕೆ ಯುವತಿ ಕುಟುಂಬಸ್ಥರ ವಿರೋಧವಿತ್ತು. ಇಂದು ಯುವತಿ ಪ್ರಿಯಾಂಕಾಗೆ ಬೇರೊಂದು ಯುವಕನ ಜೊತೆ ಮದುವೆ ಮಾಡಿಸಲು ಮುಂದಾಗಿದ್ರು. ಆದ್ರೆ, ನಿನ್ನೆ ರಾತ್ರಿಯೇ ದುಂಡಪ್ಪ ಮತ್ತು ಪ್ರಿಯಾಂಕ್ ಇಬ್ಬರೂ ಊರು ಬಿಟ್ಟು ಓಡಿ ಹೋಗಿದ್ದಾರೆ. ಇದ್ರಿಂದ ಕೆರಳಿದ ಪ್ರಿಯಾಂಕಾ ಕುಟುಂಬಸ್ಥರು, ದುಂಡಪ್ಪನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಕಲ್ಲು ತೂರಿ ಹೆಂಚುಗಳನ್ನ ಧ್ವಂಸ ಮಾಡಿದ್ದಾರೆ. ಅಲ್ದೆ, ದುಂಡಪ್ಪ ತಾಯಿಯ ಬಟ್ಟೆ ಬಿಚ್ಚಿ, ಮೆರವಣಿಗೆ ನಡೆಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ.
ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:16 am, Tue, 12 December 23