ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧ ಏಳು ಜನರನ್ನ ಕಾಕತಿ ಪೊಲೀಸರು ನಿನ್ನೆಯೇ ಬಂಧಿಸಿದ್ದರು. ಸದ್ಯ ತಡರಾತ್ರಿ 4 ಜನ ಮಹಿಳಾ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್
ಹಿಂಡಲಗಾ ಜೈಲು
Edited By:

Updated on: Dec 13, 2023 | 3:07 PM

ಬೆಳಗಾವಿ, ಡಿ.12: ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋದ ಕಾರಣ ಯುವಕನ ತಾಯಿಯನ್ನ (Woman) ಬೆತ್ತಲೆಗೊಳಿಸಿ ಥಳಿಸಿ (Assault) ಮೃಗೀಯ ವರ್ತನೆ ತೋರಿದ ಘಟನೆ ಇಡೀ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಸಂಬಂಧ ಏಳು ಜನರನ್ನ ಕಾಕತಿ ಪೊಲೀಸರು ನಿನ್ನೆಯೇ ಬಂಧಿಸಿದ್ದರು. ಸದ್ಯ ತಡರಾತ್ರಿ 4 ಜನ ಮಹಿಳಾ ಆರೋಪಿಗಳನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು ಆರೋಪಿಗಳನ್ನು ಹಿಂಡಲಗಾ ಜೈಲಿಗೆ (Hindalaga Jail) ಶಿಫ್ಟ್ ಮಾಡಲಾಗಿದೆ.

ಬಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಬಳಿಕ ನ್ಯಾಯಾಧೀಶರ ಮುಂದೆ ಮಹಿಳಾ ಆರೋಪಿಗಳನ್ನ ಹಾಜರು ಪಡಿಸಲಾಗಿದ್ದು ನಾಲ್ಕು ಜನ ಮಹಿಳಾ ಆರೋಪಿಗಳನ್ನು ತಡ ರಾತ್ರಿಯೇ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್​ ಮಾಡಲಾಗಿದೆ. ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸ ಮಾಡಿದ ಆರೋಪಿಗಳು ಮಾಧ್ಯಮಗಳ ಕ್ಯಾಮರಾ ನೋಡ್ತಿದ್ದಂತೆ ತಲೆ ತಗ್ಗಿಸಿ ಜೈಲು ಒಳಗೆ ಹೋಗಿದ್ದಾರೆ. ಇನ್ನು ಬಸಪ್ಪ ನಾಯಕ್, ರಾಜು ನಾಯಕ್, ಕೆಂಪಣ್ಣ ಎಂಬ ಆರೋಪಿಗಳನ್ನ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈ ಆರೋಪಿಗಳನ್ನ ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿ, ಪೊಲೀಸ್ ಕಸ್ಟಡಿ ಪಡೆಯಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, 7 ಜನ ಅರೆಸ್ಟ್

ಇನ್ನು ನಿನ್ನೆ ಸಂಜೆಯೇ ಅಮಾನವೀಯವಾಗಿ ನಡೆದುಕೊಂಡ ಯುವತಿ ತಂದೆ-ತಾಯಿ ಸೇರಿ 12 ಜನರ ಮೇಲೆ ಕಾಕತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಹಲ್ಲೆಗೊಳಗಾದ ಮಹಿಳೆಯ ದೂರಿನ ಹಿನ್ನೆಲೆ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದರು. ಐಪಿಸಿ 1860ರ ಅಡಿಯಲ್ಲಿ ಸೆಕ್ಷನ್ 143, 147, 148, 341, 342, 327, 324, 323, 307, 452, 427, 352(B) 149 ಮತ್ತು ಆಸ್ತಿ ಹಾನಿ ತಡೆಗಟ್ಟುವ ಕಾಯ್ದೆ 1981 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಯುವತಿಯ ತಂದೆ ಬಸಪ್ಪ ನಾಯಕ್, ಚಿಕ್ಕಪ್ಪರಾದ ರಾಜು ನಾಯಕ್, ಯಲ್ಲಪ್ಪ ನಾಯಕ್, ಯುವತಿ ಸಹೋದರರಾದ ಕೆಂಪಣ್ಣ, ಲಕ್ಕಪ್ಪ, ತಾಯಿ ಪಾರ್ವತಿ, ಗಂಗವ್ವ ವಾಲಿಕಾರ್, ಸಂಗೀತಾ ಹೆಗ್ಗನಾಯಕ್, ಶೋಭಾ ನಾಯಕ್, ಲಕ್ಕವ್ವ ನಾಯಕ್, ಇಬ್ಬರು ಬಾಲಾಪರಾಧಿ ಸೇರಿ 12 ಜನರ ವಿರುದ್ಧ ದೂರು ದಾಖಲಾಗಿದೆ. ಈಗಾಗಲೇ ಯುವತಿ ತಂದೆ ತಾಯಿ ಸೇರಿ ಏಳು ಜನರನ್ನ ಪೊಲೀಸರು ಬಂಧಿಸಿದ್ದು ಇನ್ನೂಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಜೊತೆಗೆ ನಾಲ್ಕು ಮಹಿಳಾ ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಘಟನೆ ಹಿನ್ನೆಲೆ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ದುಂಡಪ್ಪ ನಾಯಕ್ ಅನ್ನೋ ಯುವಕ ಮತ್ತು ಪ್ರಿಯಾಂಕ್ ಅನ್ನೋ ಯುವತಿ ಪರಸ್ಪರ ಪ್ರೀತಿಸ್ತಿದ್ರು. ಇದಕ್ಕೆ ಯುವತಿ ಕುಟುಂಬಸ್ಥರ ವಿರೋಧವಿತ್ತು. ಇಂದು ಯುವತಿ ಪ್ರಿಯಾಂಕಾಗೆ ಬೇರೊಂದು ಯುವಕನ ಜೊತೆ ಮದುವೆ ಮಾಡಿಸಲು ಮುಂದಾಗಿದ್ರು. ಆದ್ರೆ, ನಿನ್ನೆ ರಾತ್ರಿಯೇ ದುಂಡಪ್ಪ ಮತ್ತು ಪ್ರಿಯಾಂಕ್ ಇಬ್ಬರೂ ಊರು ಬಿಟ್ಟು ಓಡಿ ಹೋಗಿದ್ದಾರೆ. ಇದ್ರಿಂದ ಕೆರಳಿದ ಪ್ರಿಯಾಂಕಾ ಕುಟುಂಬಸ್ಥರು, ದುಂಡಪ್ಪನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಕಲ್ಲು ತೂರಿ ಹೆಂಚುಗಳನ್ನ ಧ್ವಂಸ ಮಾಡಿದ್ದಾರೆ. ಅಲ್ದೆ, ದುಂಡಪ್ಪ ತಾಯಿಯ ಬಟ್ಟೆ ಬಿಚ್ಚಿ, ಮೆರವಣಿಗೆ ನಡೆಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:16 am, Tue, 12 December 23

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us