AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಜಿಲ್ಲೆಯಲ್ಲಿ ಮತ್ತೊಂದು ಡಬಲ್ ಮರ್ಡರ್:​ ಮನೆಯಲ್ಲೇ ದಂಪತಿಯ ಭೀಕರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದೆ.

Belagavi News: ಜಿಲ್ಲೆಯಲ್ಲಿ ಮತ್ತೊಂದು ಡಬಲ್ ಮರ್ಡರ್:​ ಮನೆಯಲ್ಲೇ ದಂಪತಿಯ ಭೀಕರ ಹತ್ಯೆ
ಮೃತ ದಂಪತಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 09, 2023 | 8:08 PM

Share

ಚಿಕ್ಕೋಡಿ: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ (couple) ಬರ್ಬರ ಹತ್ಯೆ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದೆ. ಗಜೇಂದ್ರ ವಣ್ಣೂರೆ(60), ಪತಿ ದ್ರಾಕ್ಷಾಯಿಣಿ ವಣ್ಣೂರೆ(48) ಮೃತರು. ಜುಲೈ 7ರ ಮಧ್ಯರಾತ್ರಿ ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ನಿನ್ನೆಯಿಂದ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಇಂದು ಬಾಗಿಲು ತೆಗೆದು ನೋಡಿದಾಗ ದಂಪತಿ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿ ಕೊಲೆ ಆರೋಪಿಗಳಿಗಾಗಿ ಯಮಕನಮರಡಿ ಪೊಲೀಸ್​ರು ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬೈಕ್-ಸ್ಕೂಟಿಗೆ ಟೆಂಪೊ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಗೆ ಗಾಯ

ಪತ್ನಿಗೆ ಚಾಕುವಿನಿಂದ ಇರಿದ ಪತಿ

ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಪತಿಯಿಂದ ಚಾಕುವಿನಿಂದ ಇರಿದಿರುವಂತಹ ಘಟನೆ ಜಿಲ್ಲೆ ನಾಗಮಂಗಲ ತಾಲೂಕಿನ ಚೀಣ್ಯದಲ್ಲಿ ನಡೆದಿದೆ. ಕೃಷ್ಣಮೂರ್ತಿಯಿಂದ ಗೌರಮ್ಮಗೆ ಚಾಕು ಇರಿದಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗೌರಮ್ಮಳನ್ನ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪದೇ ಪದೇ ಇಬ್ಬರ ನಡುವೆ ಜಗಳವಾಗುತ್ತಿದ್ದು, ರಾಜಿ ಪಂಚಾಯಿತಿ ಕೂಡ ಮಾಡಲಾಗಿತ್ತು. ಚಾಕುವಿನಿಂದ ಇರಿದ ಪತಿರಾಯನನ್ನು ಪೊಲೀಸರ ವಶಕ್ಕೆ ನೀಡಲಾಗಿದ್ದು, ನಾಗಮಂಗಲ ಗ್ರಾಮಾಂತರ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

ಮೈಸೂರು: ಟಿ.ನರಸೀಪುರ ತಾಲೂಕಿನ ಕೊಡಗಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಾಕನಹಳ್ಳಿಯ ಕೆಂಪಶೆಟ್ಟಿ(55) ಚಿಕಿತ್ಸೆ ಫಲಿಸದೆ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Hassan News: ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್​, ತಪ್ಪಿದ ಅನಾಹುತ

ಬೆಳಗಾವಿ: 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್​ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಅನಾಹುತ ತಪ್ಪಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತೋರಗಲ್ಲ ಬಳಿ ಘಟನೆ ನಡೆದಿದೆ. ಆಕ್ಸಲ್​ ಕಟ್ ಆಗಿ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ ಕಂದಕಕ್ಕೆ ಜಾರಿದೆ. ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೋಚಬಾಳ ಗ್ರಾಮದಿಂದ ರಾಮದುರ್ಗಕ್ಕೆ ಹೊರಟ್ಟಿತ್ತು. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Sun, 9 July 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?