ಚಿಕ್ಕೋಡಿ: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ (couple) ಬರ್ಬರ ಹತ್ಯೆ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದೆ. ಗಜೇಂದ್ರ ವಣ್ಣೂರೆ(60), ಪತಿ ದ್ರಾಕ್ಷಾಯಿಣಿ ವಣ್ಣೂರೆ(48) ಮೃತರು. ಜುಲೈ 7ರ ಮಧ್ಯರಾತ್ರಿ ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ನಿನ್ನೆಯಿಂದ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದು, ಇಂದು ಬಾಗಿಲು ತೆಗೆದು ನೋಡಿದಾಗ ದಂಪತಿ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿ ಕೊಲೆ ಆರೋಪಿಗಳಿಗಾಗಿ ಯಮಕನಮರಡಿ ಪೊಲೀಸ್ರು ಹುಡುಕಾಟ ಆರಂಭಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬೈಕ್-ಸ್ಕೂಟಿಗೆ ಟೆಂಪೊ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಗೆ ಗಾಯ
ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಪತಿಯಿಂದ ಚಾಕುವಿನಿಂದ ಇರಿದಿರುವಂತಹ ಘಟನೆ ಜಿಲ್ಲೆ ನಾಗಮಂಗಲ ತಾಲೂಕಿನ ಚೀಣ್ಯದಲ್ಲಿ ನಡೆದಿದೆ. ಕೃಷ್ಣಮೂರ್ತಿಯಿಂದ ಗೌರಮ್ಮಗೆ ಚಾಕು ಇರಿದಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗೌರಮ್ಮಳನ್ನ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪದೇ ಪದೇ ಇಬ್ಬರ ನಡುವೆ ಜಗಳವಾಗುತ್ತಿದ್ದು, ರಾಜಿ ಪಂಚಾಯಿತಿ ಕೂಡ ಮಾಡಲಾಗಿತ್ತು. ಚಾಕುವಿನಿಂದ ಇರಿದ ಪತಿರಾಯನನ್ನು ಪೊಲೀಸರ ವಶಕ್ಕೆ ನೀಡಲಾಗಿದ್ದು, ನಾಗಮಂಗಲ ಗ್ರಾಮಾಂತರ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಟಿ.ನರಸೀಪುರ ತಾಲೂಕಿನ ಕೊಡಗಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಾಕನಹಳ್ಳಿಯ ಕೆಂಪಶೆಟ್ಟಿ(55) ಚಿಕಿತ್ಸೆ ಫಲಿಸದೆ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Hassan News: ಅರಣ್ಯಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಬೆಳಗಾವಿ: 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಅನಾಹುತ ತಪ್ಪಿದೆ. ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತೋರಗಲ್ಲ ಬಳಿ ಘಟನೆ ನಡೆದಿದೆ. ಆಕ್ಸಲ್ ಕಟ್ ಆಗಿ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಕಂದಕಕ್ಕೆ ಜಾರಿದೆ. ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೋಚಬಾಳ ಗ್ರಾಮದಿಂದ ರಾಮದುರ್ಗಕ್ಕೆ ಹೊರಟ್ಟಿತ್ತು. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:07 pm, Sun, 9 July 23