ಸವದಿ ಸಹಭಾಗಿತ್ವದ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: May 21, 2024 | 7:46 PM

ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.

ಸವದಿ ಸಹಭಾಗಿತ್ವದ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ
ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಓರ್ವ ಮಹಿಳೆ ಸಾವು
Follow us on

ಬೆಳಗಾವಿ, ಮೇ.21: ಜಿಲ್ಲೆಯ ಅಥಣಿ(Athani) ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆ (Priya Export Factory)ಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಶೋಭಾ ತೇಲಿ ಮೃತ ರ್ದುದೈವಿ. ಇಬ್ಬರ ಸ್ಥಿತಿ ಚಿಂತಾಜನಿಕವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಪ್ರಿಯಾ ಎಕ್ಸ್‌ಪೋರ್ಟ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಾಗಿದ್ದು, ಹೈ ಪ್ರೆಶರ್​ನಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗುಜ್ಜಾಗಿದ್ದು, ಕೆಲ ಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಸ್ಥಳಕ್ಕಾಗಮಿಸಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಸಾವು; ಐವರಿಗೆ ಮುಂದುವರೆದ ಚಿಕಿತ್ಸೆ

 ಘಟನೆ ಕುರಿತು ಪ್ರಭಾರ ಎಸ್‌ಪಿ ಹೇಳಿದ್ದಿಷ್ಟು

ಈ ಘಟನೆ ಕುರಿತು ಮಾತನಾಡಿದ ಪ್ರಭಾರ ಎಸ್‌ಪಿ ಬಿ.ಎಸ್ ನೇಮಗೌಡ, ‘ಇಂದು ಮಧ್ಯಾಹ್ನ ಅಥಣಿ ತಾಲೂಕಿನ ಸತ್ತಿ ರೋಡ್ ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟವಾಗಿದೆ. ಉಪ್ಪಿನಕಾಯಿ ತಯಾರು ಮಾಡುವ ಕಂಪನಿ ಇದಾಗಿದೆ.
ಬಾಯ್ಲರ್ ಬ್ಲಾಸ್ಟ್ ಆಗಿ ಶೋಭಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲ್ನೊಟಕ್ಕೆ ವಾಟರ್ ಸಪ್ಲೈ ಸರಿಯಾಗಿ ಆಗದೆ ಹಿಟ್ ಆಗಿ ಬ್ಲಾಸ್ಟ್ ಆಗಿದೆ. ರಂಜಿತ್ ಕುಮಾರ್ ಎಂಬುವವರು ಕಾರ್ಖಾನೆ ನೋಡಿಕೊಳ್ಳುತ್ತಿದ್ದರು. ಯಾವ ಕಾರಣಕ್ಕೆ ಬ್ಲಾಸ್ಟ್ ಆಗಿದೆ ಅನ್ನೋದರ ಕುರಿತು ತನಿಖೆ ಮಾಡಲಾಗುತ್ತಿದೆ ಎಂದರು.

ತಲೆ‌ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ: ತಾಲೂಕಿನ ಅಬ್ಬೇತುಕುರ ಗ್ರಾಮದಲ್ಲಿ ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ಸಿದ್ದಪ್ಪ(45) ಎಂಬುವವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೂಡಲೇ ಕುಟುಂಬದವರು ಗಾಯಾಳುವನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ್ದಕ್ಕೆ ಕುಟುಂಬದವರು ಆಕ್ರೋಶ ಹೊರಹಾಕಿದ್ದಾರೆ. ಕೇವಲ ವೈದ್ಯಕೀಯ ಸಿಬ್ಬಂದಿಯಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾವು ಬದುಕಿನ ಮದ್ಯೆ ವ್ಯಕ್ತಿ ಹೋರಾಟ ನಡೆಸುತ್ತಿದ್ದಾರೆ.  ಜಿಲ್ಲಾಸ್ಪತ್ರೆ ವಿರುದ್ಧ ಜನರು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:30 pm, Tue, 21 May 24