AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿಕೋಪಕ್ಕೆ ಹೋದ ಕ್ರಿಕೆಟ್ ಜಗಳ, ಹಿಂದೂ ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ

ಕ್ರಿಕೆಟ್ ವಿಚಾರಕ್ಕೆ ಶುರುವಾದ ಸಣ್ಣ ಗಲಾಟೆ ಇದೀಗ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ. ಹಿಂದೂ ಸಮುದಾಯದ ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ ಮಾಡಲಾಗಿದೆ. ಇದರಿಂದ ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದ್ದು, ಶಹಾಪುರ ಠಾಣೆಗೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.

ಬೆಳಗಾವಿ: ವಿಕೋಪಕ್ಕೆ ಹೋದ ಕ್ರಿಕೆಟ್ ಜಗಳ, ಹಿಂದೂ ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಪ್ರದರ್ಶನ
ಪ್ರಾತಿನಿಧಿಕ ಚಿತ್ರ
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 23, 2024 | 10:37 PM

Share

ಬೆಳಗಾವಿ, ಮೇ.23: ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಬಳಿಕ ಹಿಂದೂ (Hindu) ಸಮುದಾಯದ ಮನೆಗಳ ಮೇಲೆ ಕಲ್ಲು ತೂರಿ, ತಲ್ವಾರ್ ಪ್ರದರ್ಶನ ಮಾಡಿದ ಘಟನೆ ಬೆಳಗಾವಿ(Belagavi) ನಗರದ ಅಳ್ವಾನ್ ಗಲ್ಲಿಯಲ್ಲಿ ನಡೆದಿದೆ. ಸಧ್ಯ ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಮೂರು ಕೆಎಸ್ಆರ್‌ಪಿ, ಮೂರು ಜನ ಸಿಪಿಐ ನಿಯೋಜನೆ ಮಾಡಲಾಗಿದೆ.

ಘಟನೆ ವಿವರ

ಘರ್ಷಣೆಯಲ್ಲಿ 8 ಜನರಿಗೆ ಗಾಯ

ಸಂಜೆ ಐದು ಗಂಟೆ ಸುಮಾರಿಗೆ ಚಿಕ್ಕ‌ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆಯಾಗಿದೆ. ಬಳಿಕ ಇದರಲ್ಲಿ ಎರಡು ಗುಂಪಿನ ಯುವಕರು ಮಧ್ಯಪ್ರವೇಶಿಸಿದ್ದು, ದೊಡ್ಡಮಟ್ಟದ ಘರ್ಷಣೆ ಉಂಟಾಗಿದೆ. ಈ ನಡುವೆ ಅಬ್ದುಲ್ ಎಂಬಾತ ನಡು ರಸ್ತೆಯಲ್ಲಿ ತಲ್ವಾರ್ ಪ್ರದರ್ಶನ ಮಾಡಿದ್ದು, ಯುವಕರ‌ ನಡುವಿನ ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಎಂಟು ಜನರಿಗೆ ಗಾಯವಾಗಿದ್ದು, ಎರಡು ಕಡೆಯ ಗಾಯಾಳುಗಳಿಗೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ಹಿಂದೂಗಳ ಬಗ್ಗೆ ಅವಹೇಳನ ಆರೋಪ ಕೇಸ್​: ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಅಮಾನತ್ತು

ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ ನಗರ ಪೊಲೀಸ್ ಆಯುಕ್ತ

ಇನ್ನು ವಿಷಯ ತಿಳಿಯುತ್ತಿದ್ದಂತೆ ಶಹಾಪುರ ಠಾಣೆಗೆ ಆಗಮಿಸಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್,  ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ. ಜೊತೆಗೆ ಘಟನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆಯುತ್ತಿದ್ದು,  ಎಲ್ಲ ಸಿಬ್ಬಂದಿಗಳಿಗೂ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ನಗರದ ತುಂಬೆಲ್ಲಾ ರೌಂಡ್ಸ್, ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾ ಇಡಲು ತಿಳಿಸಿದ್ದಾರೆ.

ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ

ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹೇಳಿದ್ದಾರೆ. ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದ್ದು ಬಳಿಕ ದೊಡ್ಡದಾಗಿದೆ. ತಲ್ವಾರ್ ಝಳಪಿಸಿದರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಯಾರು ಕೂಡ ಈ ಕುರಿತು ಸುಳ್ಳು ವದಂತಿ ಹರಡಿಸಬಾರದು, ಅಂತವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 pm, Thu, 23 May 24