ಪೊಲೀಸ್​ ಠಾಣೆಯಲ್ಲೇ ಎಣ್ಣೆ ಪಾರ್ಟಿ; ಹೆಡ್ ಕಾನ್ಸ್‌ಟೇಬಲ್ ಅಮಾನತು

ಇದೇ ಮೇ.22 ರಂದು ನೀತಿ‌ಸಂಹಿತೆ ಮಧ್ಯೆಯೇ ಜಮಖಂಡಿ ಸರಕಾರಿ ಐಬಿಯಲ್ಲೇ ಅಧಿಕಾರಿಗಳು ಎಣ್ಣೆ ಪಾರ್ಟಿ ಮಾಡಿದ ಘಟನೆ ನಡೆದಿತ್ತು. ಈ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆ(Ankali police station)ಯಲ್ಲಿ ತಡರಾತ್ರಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಓರ್ವ ಹೆಡ್​ ಕಾನ್ಸ್​ಟೇಬಲ್​​ನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ.

ಪೊಲೀಸ್​ ಠಾಣೆಯಲ್ಲೇ ಎಣ್ಣೆ ಪಾರ್ಟಿ; ಹೆಡ್ ಕಾನ್ಸ್‌ಟೇಬಲ್ ಅಮಾನತು
ಅಂಕಲಿ ಪೊಲೀಸ್​ ಠಾಣೆಯಲ್ಲೇ ಎಣ್ಣೆ ಪಾರ್ಟಿ; ಸಿಬ್ಬಂದಿ ಅಮಾನತು
Edited By: ಕಿರಣ್ ಹನುಮಂತ್​ ಮಾದಾರ್

Updated on: May 28, 2024 | 7:08 PM

ಬೆಳಗಾವಿ, ಮೇ.28: ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆ(Ankali police station)ಯಲ್ಲಿ ತಡರಾತ್ರಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿಬಂದಿತ್ತು. ಜೊತೆಗೆ ಠಾಣೆ ಮುಂಭಾಗದಲ್ಲಿ ಮದ್ಯದ ಖಾಲಿ ಬಾಟಲ್, ವಾಟರ್ ಬಾಟಲ್ ಟೇಬಲ್ ಮೇಲೆ ಇರುವ ಫೋಟೋಗಳು ವೈರಲ್ ಆಗಿತ್ತು. ಪೊಲೀಸರ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ  ವ್ಯಕ್ತವಾಗಿತ್ತು. ಈ ಹಿನ್ನಲೆ ಅಂಕಲಿ ಠಾಣೆ ಹೆಡ್ ಕಾನ್ಸ್‌ಟೇಬಲ್ ರಾಮಚಂದ್ರ ಖೋತ ಎಂಬುವವರನ್ನು ಅಮಾನತುಗೊಳಿಸಿ ಎಸ್​ಪಿ ಭೀಮಾಶಂಕರ ಗುಳೇದ್ ಆದೇಶಿಸಿದ್ದಾರೆ.

ಸರಕಾರಿ ವಸತಿ ಗೃಹದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಅಧಿಕಾರಿಗಳು

ಇದೇ ಮೇ.22 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಸರಕಾರಿ ವಸತಿ ಗೃಹದಲ್ಲಿ ಜಿಲ್ಲಾ ಪಂಚಾಯತಿ ವಿಭಾಗದ ಜಮಖಂಡಿ ಎಇಇ ಎಮ್​ಎಸ್​ ನಾಯಕ, ಇಂಜಿನಿಯರ್​ಗಳಾದ ರಾಮಪ್ಪ ರಾಠೋಡ್, ಜಗದೀಶ್ ನಾಡಗೌಡ, ಗಜಾನನ ಪಾಟೀಲ್, ಶ್ರೀಶೈಲ್ ಹೂಗಾರ ಹಾಗೂ ಗುತ್ತಿಗೆದಾರರಾದ ಸಾಗರ, ಶೀತಲ ಹರಿಜನ ಸೇರಿದಂತೆ ಆರು ಜನ ಗುತ್ತಿಗೆದಾರರು ಸೇರಿಕೊಂಡು ಮದ್ಯಸೇವನೆ ಮಾಡಿದ್ದರು.

ಇದನ್ನೂ ಓದಿ:ಸರಕಾರಿ ಐಬಿಯಲ್ಲೇ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣ; ಶೋಕಾಸ್ ನೋಟಿಸ್ ಜಾರಿ

ಶೋಕಾಸ್​ ನೋಟಿಸ್​ ಜಾರಿಯಾಗಿತ್ತು

ನೀತಿಸಂಹಿತೆ ನಡುವೆಯೋ ಜಮಖಂಡಿ ವಿಭಾಗದ ಜಿಲ್ಲಾ ಪಂಚಾಯತಿ ಇಂಜಿನಿಯರ್​ಗಳು ಕಚೇರಿಗೆ ಚಕ್ಕರ್ ಹೊಡೆದು ಗುತ್ತಿಗೆದಾರರೊಂದಿಗೆ ಸೇರಿಕೊಂಡು ಹಾಡಹಗಲೇ ಮದ್ಯಸೇವಿಸಿ ಮೋಜು ಮಸ್ತಿ ಮಾಡಿದ್ದ ಹಿನ್ನಲೆ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಅವರು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ನೋಟಿಸ್​​ ತಲುಪಿದ 24 ತಾಸಿನೊಳಗೆ ಉತ್ತರ ನೀಡಿ. ತಪ್ಪಿದ್ದಲ್ಲಿ ನಿಮ್ಮ ಮೇಲೆ‌ ಶಿಸ್ತು ಕ್ರಮ‌ಕೈಗೊಳ್ಳುವುದಾಗಿ ಎಂದು ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಅಂಕಲಿ ಪೊಲೀಸ್ ಠಾಣೆಯಲ್ಲಿ ಇಂತಹ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us