ಬೆಳಗಾವಿ: ಕೌಟುಂಬಿಕ ಕಲಹ: ಭಾವನನ್ನೇ ಹತ್ಯೆಗೈದ ಬಾಮೈದ

ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಬಾಮೈದ ಹತ್ಯೆಗೈದಿರುವಂತಹ ಘಟನೆ ಜಿಲ್ಲೆಯ ಚಿಕ್ಕೋಡಿಯ ವಿದ್ಯಾನಗರದಲ್ಲಿ ಮನೆಯಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಕೌಟುಂಬಿಕ ಕಲಹ: ಭಾವನನ್ನೇ ಹತ್ಯೆಗೈದ ಬಾಮೈದ
ಈರಗೌಡ ಟೋಪಗೋಳ, ಸಂಜಯ್ ಭಾಕರೆ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 02, 2023 | 9:16 PM

ಬೆಳಗಾವಿ, ಸೆಪ್ಟೆಂಬರ್​ 2: ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಬಾಮೈದ ಹತ್ಯೆ (death) ಗೈದಿರುವಂತಹ ಘಟನೆ  ಜಿಲ್ಲೆಯ ಚಿಕ್ಕೋಡಿಯ ವಿದ್ಯಾನಗರದಲ್ಲಿ ಮನೆಯಲ್ಲಿ ನಡೆದಿದೆ. ನಿವೃತ್ತ ಯೋಧ ಈರಗೌಡ ಟೋಪಗೋಳ(45) ಮೃತ ಭಾವ. ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆಯಿಂದ ಕೃತ್ಯವೆಸಗಲಾಗಿದೆ. ಮೂಲತಃ ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ, ಸೇನೆಯಿಂದ ನಿವೃತ್ತಿ ಬಳಿಕ ಕ್ರಷರ್ ನಡೆಸುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈರಗೌಡ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಈರಗೌಡ ಶವ ಸ್ಥಳಾಂತರ ಮಾಡಿದ್ದು, ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಓರ್ವ ಮಹಿಳೆ ಸಾವು: ಮತ್ತೊಬ್ಬರ ಸ್ಥಿತಿ ಗಂಭೀರ

ಕಲಬುರಗಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ. ಸಿದನೂರ ಗ್ರಾಮದ ನಿವಾಸಿ ಕಲಾವತಿ (35) ಮೃತ ಮಹಿಳೆ. ಸವಿತಾ ಎನ್ನುವವರಿಗೆ ಗಂಭೀರ ಗಾಯವಾಗಿದ್ದು, ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿಜಯಪುರ: ಕೌಟುಂಬಿಕ ಕಲಹ, ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು

ಇಂದು ‌ಸಂಜೆ ಆರು ಗಂಟೆ ಸಮಯಕ್ಕೆ ಘಟನೆ ನಡೆದಿದ್ದು, ಸ್ಥಳಕ್ಕೆ ಅಫಜಲಪುರ ತಹಶಿಲ್ದಾರ ಸಂಜೀವ್​ ಕುಮಾರ್ ದಾಸರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜನನಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು ಆರೋಪ

ಚಾಮರಾಜನಗರ: ಅಪೆಂಡೆಕ್ಸ್ ಹಿನ್ನಲೆ, ಆಪರೇಷನ್​ಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪ ಕೇಳಿಬಂದಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಜನನಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ವಿಜಯ್ (10) ಮೃತ ಬಾಲಕ. ಆಪರೇಷನ್ ಯಶಸ್ವಿಯಾಗಿ ಎಂದು ವೈದ್ಯರು ತಿಳಿಸಿದ್ದು, ನಂತರ ಉಸಿರಾಟದ ತೊಂದರೆಯಿಂದ ಮಗು ಸಾವನ್ನಪ್ಪಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮನೆಯಲ್ಲಿದ್ದವರ ಕೈಕಾಲು ಕಟ್ಟಿ ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್

ವೈದ್ಯರು ಶಸ್ತ್ರ ಚಿಕಿತ್ಸೆಗೆ ಮೊದಲು ಸರಿಯಾದ ಅರವಳಿಕೆ ಚುಚ್ಚುಮದ್ದು ಕೊಟ್ಟಿಲ್ಲ, ವೈದ್ಯರ ನಿರ್ಲಕ್ಷ್ಯದಿಂದ ಬಾಲಕನ ಸಾವಾಗಿದೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಕೂಡಲೇ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದು, ಸ್ಥಳಕ್ಕೆ ಕೊಳ್ಳೆಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ