ಚಿಕ್ಕೋಡಿ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು

| Updated By: ವಿವೇಕ ಬಿರಾದಾರ

Updated on: May 18, 2024 | 11:04 AM

ತೀರ್ಥಯಾತ್ರೆಗೆಂದು ತೆರಳುತ್ತಿದ್ದವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿನ ಅತಿಥಿ ಗೃಹದಲ್ಲಿ ತಂಗಿದ್ದರು. ಬೆಳಿಗ್ಗೆ ಬಟ್ಟೆ ತೊಳೆಯಲು ವೇದಗಂಗಾ ನದಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಚಿಕ್ಕೋಡಿ: ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು
ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು
Follow us on

ಚಿಕ್ಕೋಡಿ, ಮೇ 18: ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲಾಗಿರುವ (Drowned) ಘಟನೆ ಮಹಾರಾಷ್ಟ್ರದ (Maharashtra) ಕೊಲ್ಹಾಪುರ (Kolhapur) ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ ಅಮರ್ ಕಾಂಬಳೆ (27), ಬೆಳಗಾವಿಯ ಅಥಣಿಯ ರೇಷ್ಮಾ ದಿಲೀಪ್ (34) ಮತ್ತು ಯಶ್ ದಿಲೀಪ್ (17) ಮೃತ ದುರ್ದೈವಿಗಳು.

ಜಿತೇಂದ್ರ ವಿಲಾಸ್ ಲೋಕ್ರೆ, ಸವಿತಾ ಅಮರ್ ಕಾಂಬಳೆ, ರೇಷ್ಮಾ ದಿಲೀಪ್​​ ಮೃತದೇಹಗಳು ಪತ್ತೆಯಾಗಿದ್ದು, ಯಶ್ ದಿಲೀಪ್ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ನಾಲ್ವರು ತೀರ್ಥಯಾತ್ರೆಗೆ ತೆರಳುತಿದ್ದರು. ಶುಕ್ರವಾರ (ಮೇ 17)ರ ರಾತ್ರಿ ಆನೂರು ಗ್ರಾಮದಲ್ಲಿನ ಅತಿಥಿ ಗೃಹದಲ್ಲಿ ತಂಗಿದ್ದರು. ಬೆಳಿಗ್ಗೆ ಪಕ್ಕದ ಗ್ರಾಮ ಬಸ್ತೆವಾಡದಲ್ಲಿನ ವೇದಗಂಗಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ ಇಬ್ಬರು ಕಾಲು ಜಾರಿ ನದಿಯಲ್ಲಿ ಬಿದ್ದಿದ್ದಾರೆ. ಇವರನ್ನು ಕಾಪಾಡಲು ಹೋಗಿದ್ದಾರೆ. ಈ ವೇಳೆ ನಾಲ್ವರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕಾಗಲ್ ಪುರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ ಅಪಘಾತ, ಓರ್ವ ಸಾವು

ಮೈಸೂರು: ರಿಂಗ್ ರಸ್ತೆಯ ದೇವೇಗೌಡ ವೃತ್ತದ ಬಳಿ ಎರಡು ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ. ಬನ್ನೂರು ನಿವಾಸಿ ಜಮೀರ್ (45) ಮೃತ ದುರ್ದೈವಿಗಳು. ಮುಬಾರಕ್, ಅವೇಶ್ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಾರ್ಥ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೌಚಾಲಯ ಕಟ್ಟಡ ಕುಸಿತ; ಮತ್ತೋರ್ವ ಮಹಿಳೆ ಸಾವು

ಕೊಪ್ಪಳ: ತಾವರಗೇರಾ ಸಾರ್ವಜನಿಕ ಶೌಚಾಲಯ ಕಟ್ಟಡ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಉಮಾಬಾಯಿ ಬಪ್ಪರಗಿ (35) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಶುಕ್ರವಾರ (ಮೇ 17) ರಾತ್ರಿ ಘಟನೆ ನಡೆದಿತ್ತು. ಈ ವೇಳೆ ಸ್ಥಳದಲ್ಲಿಯೇ ಬಾನು ಬೇಗಂ (40) ಎಂಬುವರು ಮೃತಪಟ್ಟಿದ್ದರು.

ಇದನ್ನೂ ಓದಿ: ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಭೀಕರ ಅಪಘಾತ: ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಕೊಪ್ಪಳ: ತಾಲೂಕಿನ ಹೊಸಳ್ಳಿ ಬಳಿ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಯಲಬುರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿ ದುರುಗಮ್ಮ ಹನುಮಪ್ಪ (65) ಎಂಬುವರು ಘಟನೆಯಲ್ಲಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಖಾಸಗಿ ಬಸ್​, ಟ್ರ್ಯಾಕ್ಟರ್​ ನಡುವೆ ಅಪಘಾತ ಆಗಿತ್ತು. ಅಪಘಾತದಲ್ಲಿ ಟ್ರ್ಯಾಕ್ಟರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ