ಪ್ರೀತಿಸುವಂತೆ ಯುವತಿ ಮನೆ ಮೇಲೆ ಕಲ್ಲು ತೂರಾಟ, ಹಿಂಬಾಗಿಲಿಗೆ ಬೆಂಕಿ

ಒಂದು ತಿಂಗಳ ಒಳಗಾಗಿ ಹುಬ್ಬಳ್ಳಿಯಲ್ಲಿ ಇಬ್ಬರು ಯುವತಿಯರ ಬರ್ಬರ ಕೊಲೆಗಳು ನಡೆದವು. ಈ ಎರಡು ಕೊಲೆಗಳು ಪ್ರೀತಿ ವಿಚಾರಕ್ಕೆ ನಡೆದಿವೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಎರಡು ಪ್ರಕರಣಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ ಮತ್ತೊಂದು ಕೇಸ್​ ಬೆಳಕಿಗೆ ಬಂದಿದೆ.

ಪ್ರೀತಿಸುವಂತೆ ಯುವತಿ ಮನೆ ಮೇಲೆ ಕಲ್ಲು ತೂರಾಟ, ಹಿಂಬಾಗಿಲಿಗೆ ಬೆಂಕಿ
ಆರೋಪಿ ತಿಪ್ಪಣ್ಣ, ಯುವತಿ ಮನೆ ಮೇಲೆ ಕಲ್ಲು
Follow us
Sahadev Mane
| Updated By: ವಿವೇಕ ಬಿರಾದಾರ

Updated on: May 25, 2024 | 7:52 AM

ಬೆಳಗಾವಿ, ಮೇ 25: ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ (Neha Hiremth), ಅಂಜಲಿ ಅಂಬಿಗೇರ (Anjali Ambiger) ಕೊಲೆ ಪ್ರಕರಣಗಳು ಮಾಸುವ ಮುನ್ನವೇ ಬೆಳಗಾವಿಯಲ್ಲಿ (Belagavi) ಮತ್ತೊಂದು ಕೇಸ್​ ಬೆಳಕಿಗೆ ಬಂದಿದ್ದು, ಪಾಗಲ್ ಪ್ರೇಮಿಯ ಕಾಟಕ್ಕೆ ಯುವತಿ ಮತ್ತು ಆಕೆಯ ಪೋಷಕರು ನಲುಗಿ ಹೋಗಿದ್ದಾರೆ. ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ಪಾಗಲ್​ಪ್ರೇಮಿ ತಿಪ್ಪಣ್ಣ ಡೋಕರೆ (27) ಇದೇ ಗ್ರಾಮದ ಓರ್ವ ಯುವತಿ ಮತ್ತು ಯುವತಿ ತಾಯಿಗೆ ಕೊಲೆ ಬೆದರಿಕೆ ಹಾಕಿದ್ದಾನೆ.

ಪ್ರೀತಿಸು, ಮದುವೆ ಆಗುವಂತೆ ‌ತಿಪ್ಪಣ್ಣ ಡೋಕರೆ ಮೂರು ವರ್ಷಗಳಿಂದ ಪೀಡಿಸುತ್ತಿದ್ದನು. ಬಿಕಾಂ ಓದುತ್ತಿರುವ ಯುವತಿ ನಿತ್ಯ ಕಾಲೇಜಿಗೆ ಹೋಗುವಾಗ ಫಾಲೋ ಮಾಡಿ ರೇಗಿಸುತ್ತಿದ್ದನು. ಇನ್ನು ಯುವತಿ ಕಿಣೈ ಗ್ರಾಮದಲ್ಲಿ ತಾಯಿಯ ಜೊತೆಗೆ ವಾಸವಾಗಿದ್ದು, ತಿಪ್ಪಣ್ಣ ಡೋಕರೆ ಕಾಟಕ್ಕೆ ಓದು ನಿಲ್ಲಿಸಿದ್ದಳು. “ನಿನ್ನ ಮಗಳನ್ನು ನನಗೆ ಮದುವೆ ಮಾಡಿಕೊಡು” ಎಂದು ಯುವತಿ ತಾಯಿಗೂ ಧಮ್ಕಿ ಹಾಕಿದ್ದನು. ಮದುವೆ ಮಾಡಿಕೊಡದಿದ್ದರೆ ಇಬ್ಬರನ್ನೂ ಕೊಲೆ ಮಾಡುವುದಾಗಿ ತಿಪ್ಪಣ್ಣ ಬೆದರಿಕೆ ಹಾಕಿದ್ದನು. ತಿಪ್ಪಣ್ಣ ಡೋಕರೆ ಯಾವುದೇ ಕೆಲಸ ಮಾಡದೆ ಕುಡಿದು ಊರಲ್ಲಿ ಸುತ್ತಾಡುತ್ತಿದ್ದನು.

ಇದನ್ನೂ ಓದಿ: ಬೆಳಗಾವಿ ಗುಂಪು ಘರ್ಷಣೆಯಲ್ಲಿ ಕಲ್ಲು ತೂರಾಟ, ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್​ಐಆರ್​​, 10 ಮಂದಿಯ ಬಂಧನ

ಅಲ್ಲದೆ ಇದೇ ವಿಚಾರಕ್ಕೆ ತಿಪ್ಪಣ್ಣ ಕೆಲ ತಿಂಗಳ ಹಿಂದೆ ಯುವತಿ ಮನೆ ಹಿಂಬಾಗಿಲಿಗೆ ಬೆಂಕಿ ಹಚ್ಚಿದ್ದನು. ತಿಪ್ಪಣ್ಣನ ಕಿರಿಕಿರಿಗೆ ಬೇಸತ್ತು 3 ವರ್ಷಗಳ ಹಿಂದೆಯೇ ಯುವತಿ ಪೊಲೀಸರಿಗೆ ದೂರು ಕೊಟ್ಟಿದ್ದಳು. ಆಗ ತಿಪ್ಪಣ್ಣ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತಿಪ್ಪಣ್ಣನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆಗ ತಿಪ್ಪಣ್ಣ ಯುವತಿ ತಂಟೆಗೆ ಹೋಗದೆ ಸುಮ್ಮನಿದ್ದನು.

ಈಗ ತಿಪ್ಪಣ್ಣ ಹಳೆ ಚಾಳಿ ಮತ್ತೆ ಆರಂಭಿಸಿದ್ದು, ಯುವತಿ ಮನೆ ಮೇಲೆ ಕಲ್ಲು ತೂರಿ ಅಟ್ಟಹಾಸ ಮೆರೆದಿದ್ದಾನೆ. ಇದಕ್ಕೆ ಯುವತಿ ಮತ್ತು ಆಕೆಯ ತಾಯಿ ರಕ್ಷಣೆ ಕೋರಿ ಬೆಳಗಾವಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಆಯುಕ್ತರ ಸೂಚನೆ ಮೇರೆಗೆ ಯುವತಿ ಮನೆಗೆ ಓರ್ವ ಪೊಲೀಸ್​ ಪೇದೆಯನ್ನು ​ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ