AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ

Belagavi News; ಇಂಡಿಗೋ ಏರ್‌ಲೈನ್ಸ್ ಎರಡು ನಗರಗಳ ನಡುವೆ ವಿಮಾನ ಸೇವೆ ನೀಡಲಿದ್ದು, ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ ಮಧ್ಯಾಹ್ನ 3.45 ಕ್ಕೆ ಟೇಕ್ ಆಫ್ ಆಗಲಿದ್ದು, ಸಂಜೆ 6.05 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35 ಕ್ಕೆ ಹೊರಟು ದೆಹಲಿಯನ್ನು ರಾತ್ರಿ 9 ಕ್ಕೆ ತಲುಪಲಿದೆ.

IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ
ಇಂಡಿಗೋ ವಿಮಾನ
ಗಣಪತಿ ಶರ್ಮಾ
|

Updated on: Aug 28, 2023 | 7:17 AM

Share

ಬೆಳಗಾವಿ, ಆಗಸ್ಟ್ 28: ಹಲವು ಕಾರಣಗಳಿಂದ ಬೆಳಗಾವಿ ವಿಮಾನ (Belagavi Airport) ನಿಲ್ದಾಣದಿಂದ ಕೆಲವು ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದೆ. ಬೆಳಗಾವಿಯಿಂದ ವಿಮಾನ ಸಂಚಾರಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿರುವ ಹೊರತಾಗಿಯೂ ಕೆಲವು ಕಡೆಗಳಿಗೆ ವಿಮಾನ ಹಾರಾಟ ಸ್ಥಗಿತಗೊಂಡಿತ್ತು. ಕೆಲವು ತಿಂಗಳುಗಳ ಹಿಂದೆ ಬೆಳಗಾವಿ ಮತ್ತು ದೆಹಲಿ (Belagavi Delhi Flight) ನಡುವಣ ವಿಮಾನ ಕೂಡ ಸ್ಥಗಿತಗೊಂಡಿತ್ತು. ಇದರಿಂದ ರಾಷ್ಟ್ರ ರಾಜಧಾನಿಗೆ ತೆರಳುವ ಹೆಚ್ಚಿನ ಸಂಖ್ಯೆಯ ವಿಮಾನ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು. ದೀರ್ಘಾವಧಿಯ ನಂತರ ಇದೀಗ, ಬೆಳಗಾವಿ ಮತ್ತು ದೆಹಲಿ ನಡುವಿನ ದೈನಂದಿನ ವಿಮಾನ ಸಂಚಾರ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿವೆ.

ಮೂಲಗಳ ಪ್ರಕಾರ, ಬೆಳಗಾವಿ-ದೆಹಲಿ ವಿಮಾನ ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಇಂಡಿಗೋ ಏರ್‌ಲೈನ್ಸ್ ಎರಡು ನಗರಗಳ ನಡುವೆ ವಿಮಾನ ಸೇವೆ ನೀಡಲಿದ್ದು, ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ ಮಧ್ಯಾಹ್ನ 3.45 ಕ್ಕೆ ಟೇಕ್ ಆಫ್ ಆಗಲಿದ್ದು, ಸಂಜೆ 6.05 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35 ಕ್ಕೆ ಹೊರಟು ದೆಹಲಿಯನ್ನು ರಾತ್ರಿ 9 ಕ್ಕೆ ತಲುಪಲಿದೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್; ತುಂಬಿ ತುಳುಕುತ್ತಿವೆ ದೇವಾಲಯಗಳು, ಭಕ್ತರ ಮತ್ತಷ್ಟು ಅನುಕೂಲಕ್ಕೆ ಮುಜರಾಯಿ ಹೊಸ ಪ್ಲಾನ್

ಹಲವು ತಿಂಗಳುಗಳ ಹಿಂದೆ ಬಿಕ್ಕಟ್ಟಿನ ಪರಿಸ್ಥಿತಿಯಿಂದಾಗಿ ವಿಮಾನಯಾನ ಸಂಸ್ಥೆಗಳು ಕೆಲವು ಮಾರ್ಗಗಳ ನಡುವಣ ಸೇವೆಯನ್ನು ಹಠಾತ್ತನೆ ಸ್ಥಗಿತಗೊಳಿಸಿದ್ದವು. ಬೆಳಗಾವಿ ದೆಹಲಿ ನಡುವೆ ಈ ಹಿಂದೆ ಸ್ಪೈಸ್​ಜೆಟ್ ವಿಮಾನಯಾನ ಸಂಸ್ಥೆ ಸೇವೆ ಒದಗಿಸುತ್ತಿತ್ತು. ಅದು ಸ್ಥಗಿತಗೊಂಡ ನಂತರ ಹೆಚ್ಚಿನ ಸಂಖ್ಯೆಯ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ರಕ್ಷಣಾ ಅಧಿಕಾರಿಗಳು ಮತ್ತು ರಾಜಕಾರಣಿಗಳು ಬೆಳಗಾವಿ-ದೆಹಲಿ ನಡುವಣ ಪ್ರಯಾಣಕ್ಕಾಗಿ ಗೋವಾ ಅಥವಾ ಬೆಂಗಳೂರಿಗೆ ತೆರಳಬೇಕಾಗಿತ್ತು.

ಬೆಳಗಾವಿ ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಂದ ವಿವಿಧ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಹೆಚ್ಚಿನ ವಿಮಾನಗಳಿಗೆ ಪ್ರಯಾಣಿಕರಿಂದ ಸ್ಪಂದನೆ ದೊರೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?