Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಮನೆಯಲ್ಲಿ ಕೂಡಿಹಾಕಿದ್ದಕ್ಕೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ!

ಬೆಳಗಾವಿಯ ಹಿಡಕಲ್​ನಲ್ಲಿ ಒಬ್ಬ ವ್ಯಕ್ತಿ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡ ಘಟನೆ ನಡೆದಿದೆ. ಈ ವ್ಯಕ್ತಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ವರದಿಯಾಗಿದೆ. ಕುಟುಂಬಸ್ಥರು ಅವರನ್ನು ಕಟ್ಟಿ ಹಾಕಿದ್ದರಿಂದ ಅವರು ಕೋಪಗೊಂಡು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ: ಮನೆಯಲ್ಲಿ ಕೂಡಿಹಾಕಿದ್ದಕ್ಕೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ!
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆಂಪಣ್ಣ
Follow us
Sahadev Mane
| Updated By: Ganapathi Sharma

Updated on: Mar 28, 2025 | 2:13 PM

ಬೆಳಗಾವಿ, ಮಾರ್ಚ್ 28: ‘ಕೋಪದಲ್ಲಿ ಕೊಯ್ದ ಮೂಗು ಮತ್ತೆ ಬಂದೀತೇ’ ಎಂಬ ಗಾದೆಯನ್ನು ಕೇಳಿರುತ್ತೇವೆ. ಕೋಪದಲ್ಲಿ ನಮಗೆ ನಾವೇ ಏನಾದರೂ ಸಮಸ್ಯೆ ಮಾಡಿಕೊಂಡರೆ ಮತ್ತೆ ಕೋಪ ತಿಳಿಯಾದರೂ ಸಮಸ್ಯೆ ಸರಿಯಾಗದು ಎಂಬರ್ಥದಲ್ಲಿ ಈ ಗಾದೆಯನ್ನು ಆಗಾಗ್ಗೆ ಬಳಸುತ್ತಿರುವುದನ್ನು ಕೇಳಿರುತ್ತೇವೆ. ಆದರೆ, ಬೆಳಗಾವಿಯ (Belagavi) ಹಿಡಕಲ್​ನಲ್ಲಿ (Hidakal) ವ್ಯಕ್ತಿಯೊಬ್ಬರು, ಮನೆಯಲ್ಲಿ ಕೂಡಿ ಹಾಕಿದ್ದ ಕೋಪಕ್ಕೆ ತಮ್ಮದೇ ಮರ್ಮಾಂಗವನ್ನು (Male Genitals) ಕತ್ತರಿಸಿಕೊಂಡಿದ್ದಾರೆ. ಆದರೆ, ಆ ವ್ಯಕ್ತಿ ಕೇವಲ ಸಿಟ್ಟಿನಿಂದಷ್ಟೇ ಈ ಕೃತ್ಯ ಎಸಗಿಲ್ಲ. ಬದಲಿಗೆ ಅವರು ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್​ನಲ್ಲಿ ಕೆಲ ದಿನಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿದ್ದ ಕೆಂಪಣ್ಣ ಎಂಬವರನ್ನು ಮನೆಯಲ್ಲಿ ಕೂಡಿಹಾಕಲಾಗಿತ್ತು. ಕುಟುಂಬಸ್ಥರು ಅವರನ್ನು ಎಲ್ಲಿಗೂ ಹೋಗದಂತೆ ಸರಪಳಿಯಿಂದ ಕಟ್ಟಿ ಹಾಕಿದ್ದರು. ಇದರಿಂದ ಕೋಪಗೊಂಡ ಕೆಂಪಣ್ಣ ತನ್ನ ಮರ್ಮಾಂಗ ಕಟ್ ಮಾಡಿಕೊಂಡಿದ್ದಾರೆ.

ಕೆಂಪಣ್ಣ ಮಾನಸಿಕ ಅಸ್ವಸ್ಥನಾಗಿದ್ದಕ್ಕೆ ಕಟ್ಟಿ ಹಾಕಿದ್ದಾಗಿ ಕುಟುಂಬಸ್ಥರು ಹೇಳಿದ್ದಾರೆ. ಸದ್ಯ ಕೆಂಪಣ್ಣರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿದ್ಯಮಾನ ನಡೆದಿದೆ.

ಇದನ್ನೂ ಓದಿ
Image
ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿಟ್ಟ ಆರೋಪಿ ಸಿಕ್ಕಿಬಿದ್ದಿದ್ಹೇಗೆ?
Image
ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನಗಳ ಪ್ರಸಾದ!
Image
ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳಿಗೆ ಶಾಕ್: ಸಿಬ್ಬಂದಿಗೆ ಕೊಕ್
Image
ಬೆಂಗಳೂರು: ಫ್ಲೈಓವರ್​ಗಳಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ

ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿ

ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿಯಾದ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಡಿಯಾಂಗೋ ನಜರತ್ (83) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಪತ್ನಿ ಪ್ಲೇವಿಯಾನಾ ನಜರತ್ (79) ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕೊಲೆ ಮಾಡಿ ಸೂಟ್​ಕೇಸ್​ನಲ್ಲಿ ತುಂಬಿಟ್ಟ ಪ್ರಕರಣ: ಆರೋಪಿ ಸಿಕ್ಕಿಬಿದ್ದಿದ್ಹೇಗೆ? ಬೆಂಗಳೂರು ಪೊಲೀಸರು ಹೇಳಿದ್ದಿಷ್ಟು

ಕೆಲ ದಿನಗಳ ಹಿಂದೆ ದೆಹಲಿ ಕ್ರೈಂ ಬ್ರ್ಯಾಂಚ್​ನಿಂದ ಕರೆ ಮಾಡುತ್ತಿದ್ದೇವೆ, ನೀವು ಅಪರಾಧ ಕೃತ್ಯದಲ್ಲಿ ಶಾಮೀಲಾಗಿದ್ದೀರಿ ಎಂದು ವಿಡಿಯೋ ಕರೆ ಮಾಡಿ ದಂಪತಿಗೆ ಬೆದರಿಕೆ ಹಾಕಲಾಗಿತ್ತು. ಬಳಿಕ ಸೈಬರ್ ವಂಚಕರು ದಂಪತಿ ವಳಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಟ್ಟ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಧಮ್ಕಿ ಹಾಕಿದ್ದರು. ಹಣ ಕೊಡದಿದ್ದರೆ ಅರೆಸ್ಟ್​ ಮಾಡುವುದಾಗಿ ಹೆದರಿಸಿದ್ದರು. ಇದರಿಂದ ಮನನೊಂದ ದಂಪತಿ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ