Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಬೆಳಗಾವಿಯಲ್ಲಿ ನಾಡದ್ರೋಹಿ ಘೋಷಣೆ ಕೂಗಿದ MES ಪುಂಡರು

ಹಿಂಡಲಗಾದ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಅರ್ಪಿಸುವ ವೇಳೆ MES ಪುಂಡರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಇನ್ನು MES ಆಯೋಜಿಸಿದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ರಾಜೇಶ್ ಪಾಟೀಲ್ ಭಾಗಿಯಾಗಿದ್ದರು.

Belagavi News: ಬೆಳಗಾವಿಯಲ್ಲಿ ನಾಡದ್ರೋಹಿ ಘೋಷಣೆ ಕೂಗಿದ MES ಪುಂಡರು
ಬೆಳಗಾವಿಯಲ್ಲಿ ನಾಡದ್ರೋಹಿ ಘೋಷಣೆ
Follow us
ಆಯೇಷಾ ಬಾನು
|

Updated on: Jun 01, 2023 | 2:15 PM

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಹೇಳಿ ಬಂದಿದೆ. 1986ರಲ್ಲಿ ಗಡಿ ಗಲಾಟೆಯಲ್ಲಿ ಮೃತಪಟ್ಟ ಮರಾಠಿ ಭಾಷಿಕರಿಗೆ ಬೆಳಗಾವಿ ತಾಲೂಕಿನ ಹಿಂಡಲಗಾದ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಅರ್ಪಿಸುವ ವೇಳೆ MES ಪುಂಡರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಇನ್ನು MES ಆಯೋಜಿಸಿದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ರಾಜೇಶ್ ಪಾಟೀಲ್ ಭಾಗಿಯಾಗಿದ್ದರು. ಎನ್‌ಸಿಪಿ ಶಾಸಕ ಉರಿಯೋ ಬೆಂಕಿಗೆ ತುಪ್ಪಸುರಿಯುವ ಕೆಲಸ ಮಾಡಿದ್ದಾರೆ.

ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಪುಂಡರು

‘ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಲೇಬೇಕು’ ಎಂದು ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಮತ್ತೊಂದೆಡೆ MES ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ರಾಜೇಶ್ ಪಾಟೀಲ್, ಎನ್‌ಸಿಪಿ ಮುಖಂಡರಾದ ಶರದ್ ಪವಾರ್, ಜಯಂತ್ ಪಾಟೀಲ್ ಸೂಚನೆ ಮೇರೆಗೆ ಇಲ್ಲಿ ಆಗಮಿಸಿದ್ದೇನೆ. ಗಡಿವಿವಾದ ಜೊತೆ ನನ್ನ ಹಾಗೂ ಚಂದಗಡ, ಆಜರಾ, ಗಡಹಿಂಗ್ಲಜ್ ತಾಲೂಕಿನ ಸಂಬಂಧ ಹಲವು ವರ್ಷಗಳಿಂದ ಇದೆ, ಇರುತ್ತೆ. ಗಡಿಹೋರಾಟದಲ್ಲಿ ಮಾಜಿ ಶಾಸಕ ದಿ.ನರಸಿಂಗ್ ಗುರುನಾಥ್ ಪಾಟೀಲ್ ಕೊಡುಗೆ ನಿಮಗೆಲ್ಲ ಗೊತ್ತು. ಈ ಬಾರಿ ಕರ್ನಾಟಕದ ಚುನಾವಣೆ ವೇಳೆ ಶರದ್ ಪವಾರ್ ಮತ್ತು ನಾವು ಎಲ್ಲರೂ ಸೇರಿ ನಿರ್ಣಯ ಮಾಡಿದ್ದೆವು. 2023ರ ಚುನಾವಣೆಯಲ್ಲಿ ಎಂಇಎಸ್ ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸದಂತೆ ನಿರ್ಧರಿಸಿದ್ದೆವು. ಶರದ್ ಪವಾರ್, ಉದ್ಧವ್ ಠಾಕ್ರೆ ಎಲ್ಲರೂ ಸೇರಿ ನಿರ್ಣಯ ಮಾಡಿದ್ದೇವು. ಐದು ಕ್ಷೇತ್ರಗಳಲ್ಲಿ ಎಂಇಎಸ್ ಪರ ಒಳ್ಳೆಯ ವಾತಾವರಣ ಇತ್ತು, ಎರಡ್ಮೂರು ಕ್ಷೇತ್ರಗಳಲ್ಲಿ ಗೆಲ್ಲುತ್ತೆವೆಂಬ ಆಶಾವಾದ ಇತ್ತು. ಆದ್ರೆ ರಾಜಕೀಯ ಜೀವನದಲ್ಲಿ ಸೋಲು, ಗೆಲುವು ಇದ್ದೆ ಇರುತ್ತೆ. ಹೀಗಾಗಿ ಎದೆಗುಂದದೆ ಅದೇ ಭರವಸೆ, ಅದೇ ಶಕ್ತಿ ಇಟ್ಟುಕೊಂಡು ಮುನ್ನಡೆಯಬೇಕು.

ಇದನ್ನೂ ಓದಿ: ಕುಣಿಗಲ್ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಶಾಸಕರ ವಿರುದ್ಧ ಹೈಕೋರ್ಟ್​ಗೆ ಹೋಗಲು ತೀರ್ಮಾನಿಸಿದ ಪರಿಷತ್ ಸದಸ್ಯ

ಗಡಿವಿವಾದ ಸದ್ಯ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಮಹಾರಾಷ್ಟ್ರ ಸರ್ಕಾರಕ್ಕೆ ನಿಮ್ಮ ಪ್ರತಿನಿಧಿಯಾಗಿ ನಾನು ಮನವಿ ಮಾಡುವೆ. ಆದಷ್ಟು ಬೇಗ ಈ ವಿವಾದ ಬಗೆಹರಿಸಿ ನಿಮಗೆ ನ್ಯಾಯ ದೊರಕಿಸಿಕೊಡಲು ಸೂಕ್ತ ಕ್ರಮಕ್ಕೆ ಮನವಿ ಮಾಡುವೆ. ನಮ್ಮ ನಾಯಕರಾದ ಶರದ್ ಪವಾರ್, ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಎಲ್ಲ ಸಂಸದರು, ಶಾಸಕರು ಗಡಿವಿವಾದ ಗಂಭೀರವಾಗಿ ಪರಿಗಣಿಸಿ ಕೇಂದ್ರದ ಮೇಲೆ ಒತ್ತಡ ಹಾಕುತ್ತಾರೆ. ಮಹಾರಾಷ್ಟ್ರ ಸರ್ಕಾರ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕು. ಸುಪ್ರೀಂಕೋರ್ಟ್ ನಲ್ಲಿ ಒಳ್ಳೆಯ ವಕೀಲರ ನೇಮಿಸಿ ಅವರು ಕೇಳಿದ ಸಾಕ್ಷ್ಯಗಳನ್ನು ಆದಷ್ಟು ಬೇಗ ಒದಗಿಸಬೇಕು. ಸುಪ್ರೀಂಕೋರ್ಟ್ ಯೋಗ್ಯ ನಿರ್ಣಯ ಕೈಗೊಳ್ಳುತ್ತೆ ಎಂಬ ಭರವಸೆ ಇದೆ. 66 ವರ್ಷಗಳಿಂದ ಸರ್ವಾಧಿಕಾರ ಧೋರಣೆ ವಿರುದ್ಧ ನೀವು ಹೋರಾಡುತ್ತಿದ್ದೀರಿ. ನಿಮ್ಮೆಲ್ಲರ ಭಾವನೆಗಳನ್ನು ಪರಿಗಣಿಸಿ ಸುಪ್ರೀಂಕೋರ್ಟ್ ಯೋಗ್ಯ ನಿರ್ಣಯ ಕೈಗೊಳ್ಳುವ ಭರವಸೆ ಇದೆ. ಮಹಾರಾಷ್ಟ್ರ ಸರ್ಕಾರದ ವತಿಯಿಂದಲೂ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವೆ ಎಂದರು.

ಬೆಳಗಾವಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ