Belagavi News: ಆಸ್ತಿ ವಿವಾದ: ಚಾಕು ಇರಿದು ಚಿಕ್ಕಪ್ಪನ ಮಗನ ಹತ್ಯೆ, ಆರೋಪಿ ಬಂಧನ

ಕುಟುಂಬಗಳ ಮಧ್ಯೆ ಇದ್ದ ಆಸ್ತಿ ವಿವಾದ ಭಾನುವಾರ ಮಧ್ಯಾಹ್ನ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ನಗರದ ಹೊಸೂರು ಬಸವಣ ಗಲ್ಲಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Belagavi News: ಆಸ್ತಿ ವಿವಾದ: ಚಾಕು ಇರಿದು ಚಿಕ್ಕಪ್ಪನ ಮಗನ ಹತ್ಯೆ, ಆರೋಪಿ ಬಂಧನ
ಮಿಲಿಂದ್ ಜಾಧವ್​​ ಹತ್ಯೆಗೊಳಗಾದ ವ್ಯಕ್ತಿ
Follow us
ಗಂಗಾಧರ​ ಬ. ಸಾಬೋಜಿ
|

Updated on: May 29, 2023 | 5:15 PM

ಬೆಳಗಾವಿ: ಕುಟುಂಬಗಳ ಮಧ್ಯೆ ಇದ್ದ ಆಸ್ತಿ ವಿವಾದ (Property dispute) ಭಾನುವಾರ ಮಧ್ಯಾಹ್ನ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ನಗರದ ಹೊಸೂರು ಬಸವಣ ಗಲ್ಲಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಸ್ತಿ ವಿಚಾರವಾಗಿ ಚಿಕ್ಕಪ್ಪನ ಮಗನನ್ನೇ ಹತ್ಯೆಗೈಯಲಾಗಿದೆ. ಮಿಲಿಂದ್ ಜಾಧವ್(31) ಮೃತ ವ್ಯಕ್ತಿ. ಕೊಲೆಯಾದ ಮಿಲಿಂದ್ ದೊಡ್ಡಪ್ಪನ ಮಗ ಅಭಿಜಿತ್ ಜಾಧವ್‌ನಿಂದ ಕೃತ್ಯವೆಸಗಲಾಗಿದೆ. ಸದ್ಯ ಆರೋಪಿ ಅಭಿಜಿತ್ ಜಾಧವ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಿಲಿಂದ್​ ಮತ್ತು ಅಭಿಜಿತ್ ಕುಟುಂಬ ಮಧ್ಯೆ ಆಸ್ತಿ ವಿವಾದವಿತ್ತು.

ಕುಟುಂಬದ ಆಸ್ತಿಯಲ್ಲಿ ಒಂದು ಮಳಿಗೆಯನ್ನು ಸ್ವೀಟ್ ಮಾರ್ಟ್ ನಡೆಸಲು ಬಾಡಿಗೆ ನೀಡಲಾಗಿತ್ತು. ಬಾಡಿಗೆ ಪಡೆಯುವ ವಿಚಾರಕ್ಕೆ ಮಿಲಿಂದ್, ಅಭಿಜಿತ್ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ಮನೆಯಲ್ಲಿದ್ದ ಮಿಲಿಂದ್‌ ತೊಡೆಗೆ ಅಭಿಜಿತ್ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮಿಲಿಂದ್ ಮೃತಪಟ್ಟಿದ್ದಾನೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ ಕೇಸ್: ಸಿಕ್ಕಿಬಿದ್ದ 6 ಆರೋಪಿಗಳು

ಹಣಕಾಸು ವಿಚಾರದಲ್ಲಿ ಕಿರಿಕ್, ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ರಾಮನಗರ: ಹಣಕಾಸು ವಿಚಾರದಲ್ಲಿ ಕಿರಿಕ್​ ಆಗಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವಂತಹ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಕಿರಣ್​ ಹಲ್ಲೆಗೊಳಗಾಗಿದ್ದು, ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಬೆಂಗಳೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೈದು ಪರಮೇಶ್‌ ಹಾಗೂ ಬೆಂಬಲಿಗರು ಎಸ್ಕೇಪ್ ಆಗಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ಈಜಲು ಹೋಗಿ ನಾಲ್ವರು ನೀರುಪಾಲು, ಸ್ನೇಹಿತರ ಮೃತದೇಹಗಳು ಪತ್ತೆ

ಪ್ಯಾನಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪ್ಯಾನಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಇಟ್ಟಮಡುವಿನ ಬಾಡಿಗೆ ಮನೆಯಲ್ಲಿ ನಡೆದಿದೆ. ಶಿವರುದ್ರ(40) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೆಟರಿಂಗ್ ಕೆಲಸ ಮಾಡುತ್ತಿದ್ದ ಶಿವರುದ್ರ, ಮನೆಯಲ್ಲಿ ಯಾರು ಇಲ್ಲದ ವೇಳೆ ವೇಲಿನಿಂದ ನೇಣುಬಿಗಿದುಕೊಂಡು ಸುಸೈಡ್ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ