ಬೆಳಗಾವಿ ಆಗಸ್ಟ್ 11: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರಯಾಣದ ವೇಳೆ ಭದ್ರತಾ ಲೋಪ ಉಂಟಾಗಿರುವಂತಹ ಘಟನೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಶಾಸಕ ಲಕ್ಷ್ಮಣ್ ಸವದಿ ಮನೆಯಿಂದ ಬಸವೇಶ್ವರ ವೃತ್ತಕ್ಕೆ ಸಿದ್ಧರಾಮಯ್ಯ ತೆರಳುತ್ತಿದ್ದ ವೇಳೆ ಸಿಎಂ ಕಾರಿನ ಹಿಂದೆಯೇ ಬೆಂಗಾವಲು ವಾಹನದ ಮುಂಚೆಯೇ ಸವಾರರು ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದುಕೊಂಡು ಹೋಗಿದ್ದಾರೆ. ಆ ಮೂಲಕ ಮತ್ತೊಮ್ಮೆ ಸಿಎಂ ಭದ್ರತಾ ಲೋಪ ಉಂಟಾಗಿದೆ. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆ ಮೇಳೆ ವಿಧಾನಸಭೆಯಲ್ಲಿ ಭದ್ರತಾ ಲೋಪ ಉಂಟಾಗಿತ್ತು.
ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ಧರಾಮಯ್ಯ ಅವರು ಶುಕ್ರವಾರ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲೆಯ ಅಥಣಿ ನಗರದ ಬಸವೇಶ್ವರ ವೃತ್ತದಲ್ಲಿರುವ ಅಶ್ವಾರೂಢ ಜಗಜ್ಯೋತಿ ಬಸವೇಶ್ವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು. ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಲಕ್ಷ್ಮಣ್ ಸವದಿ, ರಾಜು ಕಾಗೆ, ಮಹೇಂದ್ರ ತಮ್ಮಣ್ಣವರ್ ಸೇರಿ ಹಲವರು ಸಾಥ್ ನೀಡಿದರು.
ಇದನ್ನೂ ಓದಿ: ಕೆಂಪಣ್ಣ ಕ್ಲೀನ್‌ಚಿಟ್ ಕೊಟ್ಟರೆ ಬಿಲ್ ಬಿಡುಗಡೆಯಾಗುತ್ತಾ? ಎಟಿಎಂ ಸರ್ಕಾರ ಎಂಬುದು ಮತ್ತೆ ನಿಜವಾಗುತ್ತಿದೆ; ಬೊಮ್ಮಾಯಿ ಆಕ್ರೋಶ
ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಲೋಕಾರ್ಪಣೆ ಹಾಗೂ 233 ಕೋಟಿಗೂ ಅಧಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಅಡಿಗಲ್ಲು ಸಮಾರಂಭ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗವಹಿಸಿದರು.
ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ ವೇಳೆ ಅಥಣಿಯಲ್ಲೇ ಇದ್ದರೂ ಸಚಿವ ಸತೀಶ್ ಜಾರಕಿಹೊಳಿ ಸ್ವಾಗತಕ್ಕೆ ಬಂದಿರಲಿಲ್ಲ. ಹಾಗಾಗಿ ಕಾಂಗ್ರೆಸ್‌ನಲ್ಲೂ ಜಾರಕಿಹೊಳಿ ವರ್ಸಸ್ ಅದರ್ಸ್ ಎನ್ನುವಂತಾಗಿದೆ. ಲಕ್ಷ್ಮಣ್ ಸವದಿ ನಿವಾಸಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಜಿಲ್ಲೆಯ ಬಹುತೇಕ ಕೈ ಶಾಸಕರೂ ಆಗಮಿಸದ್ದರೂ ಸತೀಶ್ ಜಾರಕಿಹೊಳಿ ಬಂದಿರಲಿಲ್ಲ. ಹಾಗಾಗಿ ಸದ್ಯ ಸತೀಶ್ ಜಾರಕಿಹೊಳಿ ನಡೆ ಕುರಿತು ಕಾಂಗ್ರೆಸ್ ಕಾರ್ಯಕರ್ತರಲ್ಲೇ ಗುಸುಗುಸು, ಪಿಸುಪಿಸು ಚರ್ಚೆ ಶುರುವಾಗಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ನನ್ನ ಬಳಿ ಪೆನ್ಡ್ರೈವ್ ಇರುವುದು ಸತ್ಯ, ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ಲಕ್ಷ್ಮಣ ಸವದಿ
ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಆರೋಪ ವಿಚಾರವಾಗಿ ನಗದರಲ್ಲಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದ್ದು, ಗುತ್ತಿಗೆದಾರರಲ್ಲೇ 2 ಗುಂಪುಗಳಿವೆ. ಒಂದು BJP ವಿರೋಧಿ ಗುಂಪು, ಇನ್ನೊಂದು ಕಾಂಗ್ರೆಸ್ ವಿರೋಧಿ ಗುಂಪು. ಲೋಕಸಭೆ ಚುನಾವಣೆ ಹಿನ್ನೆಲೆ ಅನವಶ್ಯಕ ಗೊಂದಲ ಮಾಡುತ್ತಿದ್ದಾರೆ. ರಾಜ್ಯದ ಜನರು ಸುಭದ್ರ ಸರ್ಕಾರದ ಪರ ತೀರ್ಪು ಕೊಟ್ಟಿದ್ದಾರೆ. ಸೋತು ಸುಣ್ಣವಾಗಿದ್ದರಿಂದ ಜನರ ದಿಕ್ಕು ಬದಲಿಸಲು ಯತ್ನಿಸಲಾಗಿತ್ತಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:10 pm, Fri, 11 August 23