AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ; ಬೈಕ್​ನಲ್ಲಿ ತೆರಲುವಾಗ ಮರಬಿದ್ದು ಇಬ್ಬರ ಸಾವು, ಮತ್ತೋರ್ವನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಭಾರೀ ಮಳೆಯಿಂದಾಗಿ ಬೈಕ್ ಮೇಲೆ ಮರವೊಂದು ಬಿದ್ದಿದ್ದು ಬೈಕ್​ನಲ್ಲಿದ್ದ ಮೂವರು ಯುವಕರಿಗೆ ಗಂಭೀರ ಗಾಯಗಳಾಗಿದ್ದವು. ನಿನ್ನೆ ಓರ್ವ, ನಿನ್ನೆ ರಾತ್ರಿ ಮತ್ತೋರ್ವ ಸೇರಿದಂತೆ ಇಬ್ಬರು ಯುವಕರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಬೆಳಗಾವಿ; ಬೈಕ್​ನಲ್ಲಿ ತೆರಲುವಾಗ ಮರಬಿದ್ದು ಇಬ್ಬರ ಸಾವು, ಮತ್ತೋರ್ವನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೈಕ್​ನಲ್ಲಿ ತೆರಲುವಾಗ ಮರಬಿದ್ದು ಇಬ್ಬರ ಸಾವು, ಮತ್ತೋರ್ವನಿಗೆ ಚಿಕಿತ್ಸೆ
Sahadev Mane
| Edited By: |

Updated on: Jun 10, 2024 | 7:32 AM

Share

ಬೆಳಗಾವಿ, ಜೂನ್.10: ಬೆಳಗಾವಿಯಲ್ಲಿ ಬೃಹತ್ ಮರ ಬಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಯುವಕ ಮೃತಪಟ್ಟಿದ್ದಾನೆ (Death). ನಿನ್ನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದು ಬೈಕ್​ನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೂವರ ಪೈಕಿ ಇಬ್ಬರು ಮೃತಪಟ್ಟಿದ್ದು ಮತ್ತೋರ್ವ ಗಾಯಾಳುವಿಗೆ ಚಿಕಿತ್ಸೆ ಮುಂದುವರೆದಿದೆ.

ನಿನ್ನೆ ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್(21) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ರಾತ್ರಿ ವಿಠ್ಠಲ್ ತಳವಾರ (20) ಕೂಡ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಇನ್ನೋರ್ವ ಯುವಕ ಸ್ವಪ್ನಿಲ್ ದೇಸಾಯಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮೂವರು ಒಂದೇ ಬೈಕ್​ನಲ್ಲಿ ಬರುತ್ತಿದ್ದಾಗ ಇವರ ಮೇಲೆ ಬೃಹತ್ ಮರ ಬಿದ್ದಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್​ ಶೋ ರೂಮ್​ಗೆ ಬೆಂಕಿ, 5 ಟ್ರ್ಯಾಕ್ಟರ್​ ಸುಟ್ಟು ಭಸ್ಮ

ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದ ಜುಲೈ ನಗರದಲ್ಲಿ ವಿದ್ಯುತ್​ ಶಾರ್ಟ್​ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು ವಸಂತ್​​ ಪಾಟೀಲ್ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್​ ಶೋ ರೂಮ್​ ಬೆಂಕಿಗೆ ಆಹುತಿಯಾಗಿದೆ. ಶೋ ರೂಮ್​ಗೆ ಬೆಂಕಿ ತಗುಲಿ 5 ಟ್ರ್ಯಾಕ್ಟರ್​ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಟ್ರ್ಯಾಕ್ಟರ್​ಗಳು ಸುಟ್ಟು ಕರಕಲಾಗಿದ್ದವು. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕಪಾಳಮೋಕ್ಷ ಬೆಂಬಲಿಸಿದ ವಿಕೃತ ಮನಸ್ಸುಗಳಿಗೆ ತಿರುಗೇಟು ನೀಡಿದ ಕಂಗನಾ

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಟೋಲ್ ಬಳಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿ-ಗದಗ ರಸ್ತೆಯ ಭದ್ರಾಪುರ ಸಮೀಪದ ಟೋಲ್ ಬಳಿ ಕಾರು ಬರುತ್ತಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಇಡೀ ಕಾರಿಗೆ ಬೆಂಕಿ ಆವರಿಸಿಕೊಂಡಿದೆ.

ಟಿಟಿ & ಕಾರು ಡಿಕ್ಕಿ.. 10 ಜನರಿಗೆ ಗಾಯ

ಟೆಂಪೋ ಟ್ರಾವೆಲರ್​ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಸೀತನಾಯಕನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಗಾಯಾಳುಗಳು ಮಾಲೂರು ಸರ್ಕಾರಿ ಆಸ್ಪತ್ರೆ ಹಾಗೂ ಹೊಸಕೋಟೆ ಎಂವಿಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗ್ತಿದೆ. ಸೀಮಂತ ಕಾರ್ಯಕ್ರಮ ಮುಗಿಸಿಕೊ‌ಡು ಹೋಗುವ ವೇಳೆ ದುರ್ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ