ಬೆಳಗಾವಿ: ರಾ.ಹೆ 4ರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್​, 3 ಸಾವು

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್​ನಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭಾನುವಾರ ಸಂಭವಿಸಿದ ಟ್ಯಾಂಕರ್ ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಕಲಬುರಗಿ ಮೂಲದ ಕಾರ್ಮಿಕರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು. ಟ್ಯಾಂಕರ್ ಚಾಲಕನಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ: ರಾ.ಹೆ 4ರಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್​, 3 ಸಾವು
ಕಾರ್ಮಿಕರ ಮೇಲೆ ಹರಿದು ಸರ್ವಿಸ್​ ರಸ್ತೆಯಲ್ಲಿ ಪಲ್ಟಿಯಾದ ಟ್ಯಾಂಕರ್​
Edited By:

Updated on: Jun 01, 2025 | 3:05 PM

ಬೆಳಗಾವಿ, ಜೂನ್​ 1: ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಾಲೂಕಿನ ಇಟಗಿ ಕ್ರಾಸ್​ನ ರಾಷ್ಟ್ರೀಯ ಹೆದ್ದಾರಿ 4ರ ಪುಣೆ-ಬೆಂಗಳೂರು (National Highway 4 Pune-Bengaluru) ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆದ್ದಾರಿ ಗಸ್ತು ಸಿಬ್ಬಂದಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಲಬುರಗಿ ಜಿಲ್ಲಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದ ರಾಮಚಂದ್ರ ಜಾಧವ್ (45),  ಮಗ ಮಹೇಶ್ ರಾಮಚಂದ್ರ ಜಾಧವ್ (18), ರಾಮಣ್ಣ ಅಲಿಯಾಸ್ ರಮೇಶ್ (38) ಮೃತ ದುರ್ದೈವಿಗಳು.

ಮೃತ ರಾಮಚಂದ್ರ ಪತ್ನಿ  ಲಕ್ಷ್ಮೀಬಾಯಿ, ಅನುಶ್ರೀ,  ಮೃತ ರಾಮಣ್ಣನ ಪತ್ನಿ ಭೀಮವ್ವ (55) ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಾಳು ಭೀಮವ್ವ ಅವರ ಎರಡೂ ಕಾಲುಗಳು ಕಟ್ ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಮಿಕರು ಎನ್​ಹೆಚ್ಎಐನಲ್ಲಿ ದಿನಗೂಲಿ ಕೆಲಸಕ್ಕಾಗಿ ಕಲಬುರಗಿಯ ಕಲಬುರಗಿಯ ಶಹಬಾದ್, ಸೇಡಂ, ಚಿಂಚೋಳಿಯಿಂದ ಬಂದಿದ್ದರು. ರವಿವಾರ (ಜೂ.01) ಬೆಳಿಗ್ಗೆ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾರ್ಮಿಕರ ಮೇಲೆ ಆಯಿಲ್ ತುಂಬಿದ್ದ ಟ್ಯಾಂಕರ್ ಏಕಾಏಕಿ ಹರಿದು, ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್​ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸರು ಹೊರ ತೆಗೆದಿದ್ದಾರೆ. ಟ್ಯಾಂಕರ್​ ಚಾಲಕ ದಿನೇಶ್ ಶೆಟ್ಟಿ ಅವರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ
ಬೆಳಗಾವಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ: 6 ಜನರಿಂದ ಕೃತ್ಯ
ವೀರಣ್ಣ ಮಡಿವಾಳ ಅಮಾನತು: ಸರ್ಕಾರದ ವಿರುದ್ಧ ನೆಟ್ಟಿಗರ ಆಕ್ರೋಶ
ಬೆಳಗಾವಿ: ಲೋಕೇಶ್ವರ ಸ್ವಾಮೀಜಿ ಮೇಲೆ ಅತ್ಯಾಚಾರ ಕೇಸ್ ಬೆನ್ನಲ್ಲೇ ಮಠ ಧ್ವಂಸ
ಬೆಳಗಾವಿ: ಪತ್ನಿ ಕಾಟಕ್ಕೆ ಬೆಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಇದನ್ನೂ ಓದಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು

ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಆರ್.ಬಿ ಬಸರಗಿ ಕೂಡ ಭೇಟಿ ನೀಡಿ ಮಾಹಿತಿ ಪಡೆದರು. ಆಯಿಲ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ  ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಕಾರ್ಮಿಕರು ರಸ್ತೆ ಸ್ವಚ್ಛ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Sun, 1 June 25