ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಗ್ರಾಮ ಪಂಚಾಯತಿ ಸದಸ್ಯ ತಮ್ಮ ಹುಟ್ಟುಹಬ್ಬ ಆಚರಣೆ ವೇಳೆ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದು ಜೊತೆಗೆ ಗೂಂಡಾವರ್ತನೆ ತೋರಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದು, ವೈರಲ್ ಆಗಿತ್ತು.
ಬೆಳಗಾವಿ, ಜೂನ್ 29: ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ (birthday) ಸಂಭ್ರಮಾಚರಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯನಿಂದ (Gram Panchayat Member) ಗೂಂಡಾವರ್ತನೆ ತೋರಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ನನ್ನು ಬಂಧಿಸಿದ್ದಾರೆ.
ನಗರದಲ್ಲಿ ಎರಡು ದಿನಗಳ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ, ಕೈಯಲ್ಲಿ ಚಾಕು ಹಿಡಿದು ನಡುರಸ್ತೆಯಲ್ಲೇ ಸಂಭ್ರಮಾಚರಣೆ ಮಾಡಿದ್ದಾರೆ. ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ಡೋಂಟ್ಕೇರ್. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಬಾಜಾನ್ರನ್ನು ಪೊಲೀಸರು ಬಂಧಿಸಿದ್ದಾರೆ.
ಚಲಿಸುತ್ತಿದ್ದ ಬಸ್ನಲ್ಲಿ ಹುಟ್ಟುಹಬ್ಬ ಆಚರಣೆ
ಇನ್ನು ಶುಕ್ರವಾರದಂದ ಚಲಿಸುತ್ತಿದ್ದ ಸಾರಿಗೆ ಬಸ್ನಲ್ಲಿ ಕಂಡಕ್ಟರ್ ಹುಟ್ಟುಹಬ್ಬವನ್ನು ಮಹಿಳಾ ಪ್ರಯಾಣಿಕರು ಆಚರಿಸಿದ್ದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಹುಟ್ಟುಹಬ್ಬ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ: ಇದರ ಉಪಯೋಗವೇನು?
ನಂಜನಗೂಡಿ ತಾಲೂಕಿನ ಹುಲ್ಲಹಳ್ಳಿ, ಕಣೇನೂರು ಮಾರ್ಗವಾಗಿ ಹೆಚ್ಡಿ ಕೋಟೆಯ ಕಾರಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ನಲ್ಲಿ ಹುಟ್ಟುಹಬ್ಬ ಆಚರಿಸಲಾಗಿದೆ. ಶುಕ್ರವಾರ ರಾತ್ರಿ ಎಂಟು ಗಂಟೆಗೆ ಕಣೇನೂರು ಗ್ರಾಮದ ಬಳಿ ಚಲಿಸುತ್ತಿದ್ದ ಬಸ್ನಲ್ಲಿ ಕೇಕ್ ಕತ್ತರಿಸಲಾಗಿದ್ದು, ಆ ಮೂಲಕ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರ ಕೆಂಗಣ್ಣುಗೆ ಗುರಿಯಾಗಿದ್ದಾರೆ.
ಇದನ್ನೂ ಓದಿ: ಸೆಡೆಂಟರಿ ಜೀವನಶೈಲಿ ಮತ್ತು ಒತ್ತಡ ಹೃದಯಾಘಾತಗಳಿಗೆ ಕಾರಣವಾಗುತ್ತಿವೆ: ಡಾ ಕೆಎಸ್ ಸದಾನಂದ, ಹೃದ್ರೋಗ ತಜ್ಞ
ಹುಟ್ಟುಹಬ್ಬ ಆಚರಣೆ ವೇಳೆ ಚಾಲಕನ ಬಸ್ ಅನ್ನು ಅಡ್ಡದಿಡ್ಡಿ ಚಲಾಯಿಸಿದ್ದು, ಪ್ರಯಾಣಿಕರು ಗಾಬರಿಯಾಗಿದ್ದಾರೆ. ನಿರ್ವಾಹಕ ಮತ್ತು ಚಾಲಕನ ಹುಚ್ಚಾಟಕ್ಕೆ ಪ್ರಯಾಣಿಕರು ಬೆಚ್ಚಿಬಿದ್ದು, ಸರಿಯಾಗಿ ಬಸ್ ಓಡಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:08 am, Sun, 29 June 25







