ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ಕೊನೆಗೂ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ರು

| Updated By: ಗಂಗಾಧರ​ ಬ. ಸಾಬೋಜಿ

Updated on: Dec 02, 2022 | 3:44 PM

ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 2 ದಿನಗಳ ಬಳಿಕ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ: ಕೊನೆಗೂ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ರು
ಆರೋಪಿ ಸುಮೀತ್ ಕಾಂಬ್ಳೆ
Follow us on

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀ ಕೋರ್ಟ್​ ಅಂಗಳದಲ್ಲಿದೆ. ಇದರ ಮಧ್ಯೆ ಕನ್ನಡ ಬಾವುಟ (Kannada Flag) ಹಾರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆದಿರುವ ಘಟನೆ ಬೆಳಗಾವಿಯ ಕಾಲೇಜೊಂದರಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಮೀತ್ ಕಾಂಬ್ಳೆ ಸೇರಿ ನಾಲ್ವರನ್ನು ಅರೆಸ್ಟ್​ ಮಾಡಲಾಗಿದೆ. ಬಂಧಿತರ ಪೈಕಿ ಮೂರು ಜನ ವಿದ್ಯಾರ್ಥಿಗಳು ಅಪ್ರಾಪ್ತರಿದ್ರೇ, ಓರ್ವ ಪ್ರಾಪ್ತ ವಿದ್ಯಾರ್ಥಿ ಆಗಿದ್ದಾನೆ.

ಘಟನೆ ಹಿನ್ನೆಲೆ

ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಜೆ 7.30ರ ಸುಮಾರಿಗೆ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೆಸ್ಟ್ ನಡೆಯುತ್ತಿತ್ತು. ಈ ವೇಳೆ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಮೂರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ಹೊಡೆದರು, ಠಾಣೆಗೆ ಕರೆದೊಯ್ದ ಡಿಸಿಪಿ ಬೂಟಗಾಲಿಂದ ಒದ್ದರು ಎಂದ ವಿದ್ಯಾರ್ಥಿ

ಈ ಕುರಿತಾಗಿ ಡಿಸಿಪಿ ರವೀಂದ್ರ ಗಡಾದಿ ಪ್ರತಿಕಿಯೆ ನೀಡಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿಯಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಯಾರು ಹಲ್ಲೆ ಮಾಡಿದ್ದಾರೆ ಅವರ ಗುರುತು ಪತ್ತೆ ಹಚ್ಚಿ ವಿಚಾರಣೆ ಮಾಡುತ್ತೇವೆ. ಈ ವರೆಗೂ ಪ್ರಕರಣದ ಕುರಿತು ದೂರು ದಾಖಲಾಗಿಲ್ಲ. ಎಲ್ಲರೂ ಅಪ್ರಾಪ್ತರಾಗಿದ್ದು ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆಯಾಗಿದೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಹೇಳಿದರು.

ಎಸಿಪಿ, ಡಿಸಿಪಿ ನನ್ನ ಮೇಲೆ ಹಲ್ಲೆ ಮಾಡಿದ್ರು

ಮತ್ತೊಂದೆಡೆ ಘಟನೆ ಬಗ್ಗೆ ಹಲ್ಲೆಗೊಳಗಾದ ವಿದ್ಯಾರ್ಥಿ ಮಾತನಾಡಿದ್ದು, ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದಾಗ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಪೈಕಿ ಓರ್ವ ನನ್ನ ಕ್ಲಾಸ್‌ಮೇಟ್ ಇದ್ದ. ಬಳಿಕ ನಾನು ಕನ್ನಡ ಸಂಘಟನೆಯ ಮುಖಂಡರ ಜೊತೆಗೆ ಸಂಪರ್ಕ ಮಾಡಿದೆ. ನಾನು ದೂರು ಕೊಡಲು ಸಿದ್ದವಿದ್ಧೆ. ಠಾಣೆಗೆ ಕರೆದುಕೊಂಡು ಹೋಗಿ ಹೆದರಿಸಿ ಡಿಸಿಪಿ ರವೀಂದ್ರ ಗಡಾದಿ ಮತ್ತು ಎಸಿಪಿ ನಾರಾಯಣ್ ಭರಮನಿ ನನ್ನ ಮೇಲೆ ಹಲ್ಲೆ ಮಾಡಿದ್ರು. ಡಿಸಿಪಿ ನನ್ನ ವಿರುದ್ಧ ಅವಾಚ್ಯ ಶಬ್ದ ಬಳಸಿ ಬೈದು ಬೂಟಗಾಲಿಂದ ಒದ್ದರು. ಅಶ್ಲೀಲ ಪದ ಬಳಸಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು ಎಂದು ಬೆಳಗಾವಿಯಲ್ಲಿ ಹಲ್ಲೆಗೊಳಗಾದ ಅಪ್ರಾಪ್ತ ವಿದ್ಯಾರ್ಥಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ವಿದ್ಯಾರ್ಥಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಎಂಎಲ್‌ಸಿ(ಮೆಡಿಕೋ ಲಿಗಲ್ ಕೇಸ್) ಮಾಡಿದ್ದಾನೆ. ಟೀಳಕವಾಡಿ ಪೊಲೀಸರ ವಿರುದ್ಧ ಜಿಲ್ಲಾಸ್ಪತ್ರೆಯಲ್ಲಿ ಎಂಎಲ್‌ಸಿ ಮಾಡಿಸಿದ್ದಾನೆ.

ಘಟನೆಗೆ ಕರುನಾಡ ವಿಜಯ ಸೇನೆ ಯುವಘಟಕ ಖಂಡನೆ

ಈ ಘಟನೆಗೆ ಕರುನಾಡ ವಿಜಯ ಸೇನೆ ಯುವಘಟಕ ಖಂಡನೆ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದರೆ ಪಡೆಯುತ್ತಿಲ್ಲ. ದೂರು ಪಡೆಯದೆ ಪೊಲೀಸರು ನಮ್ಮನ್ನೇ ಹೆದರಿಸುತ್ತಿದ್ದಾರೆ. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:37 pm, Fri, 2 December 22