IPS ಅಧಿಕಾರಿಗಳ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿಯ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಅರ್ಬಾಜ್ ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ರೀತಿಯ ವಂಚನೆಗಳು ಮಂಗಳೂರಿನಲ್ಲೂ ನಡೆದಿವೆ. ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯವಾಗಿದೆ.

IPS ಅಧಿಕಾರಿಗಳ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿಯ ಬಂಧನ
ನಕಲಿ ಫೇಸ್​ಬುಕ್​ ಖಾತೆ, ಆರೋಪಿ ಅರ್ಬಾಜ್ ಖಾನ್
Updated By: ವಿವೇಕ ಬಿರಾದಾರ

Updated on: Nov 15, 2024 | 10:32 AM

ಬೆಳಗಾವಿ, ನವೆಂಬರ್​ 15: ಐಪಿಎಸ್ (IPS)​ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ (Facebook Account) ಸೃಷ್ಟಿ ಆರೋಪಿಯನ್ನು ಬೆಳಗಾವಿ (Belagavi) ಜಿಲ್ಲಾ ಸಿಇಎನ್ ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅರ್ಬಾಜ್ ಖಾನ್​ ಬಂಧಿತ ಆರೋಪಿ. ಆರೋಪಿ ಅರ್ಬಾಜ್ ಖಾನ್ ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್, ಗದಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನೇಮಗೌಡ, ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಸಿದ್ದನು.

ಅಧಿಕಾರಿಗಳ ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಸಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದನು. ಬಳಿಕ, ಹುಟ್ಟಿದ ಹಬ್ಬ ಇದೆ ಅಂತ ಪೋಸ್ಟ್ ಹಾಕುತ್ತಿದ್ದನು. ಶುಭಾಶಯ ತಿಳಿಸಿದವರನ್ನು ಟಾರ್ಗೆಟ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದನು. ಈ ವಿಚಾರ ತಿಳಿಯುತ್ತಿದ್ದಂತೆ ಬೆಳಗಾವಿ ಎಸ್​ಪಿ ಕೇಸ್ ದಾಖಲಿಸಿಕೊಂಡರು. ಬಳಿಕ, ಆರೋಪಿಯನ್ನು ಸೆರೆ ಹಿಡಿಯಲು ಸಿಪಿಐ ಸುನೀಲ್ ನಂದೇಶ್ವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದರು. ಪೊಲೀಸರು ತನಿಖೆ ನಡೆಸಿ, ಅರ್ಬಾಜ್ ಖಾನ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲಾಧಿಕಾರಿ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿ

ಮಂಗಳೂರು ಪೊಲೀಸ್​ ಆಯುಕ್ತ ಹೆಸರಿನಲ್ಲಿ ನಕಲಿ ಫೇಸ್​ಬುಕ್

ಸೈಬರ್​ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್​ ರಿಕ್ವೆಸ್ಟ್ ಕಳುಹಿಸುತ್ತಿದ್ದರು. ಬಳಿಕ, ಮೆಸೆಂಜರ್​ ಮುಖಾಂತ ಸಂದೇಶ ಕಳುಹಿಸಿ​ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು.

ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್​ ​ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಇತ್ತೀಚಿಗೆ ಸೈಬರ್​ ವಂಚಕರ ಹಾವಳಿ ಹೆಚ್ಚಾಗಿದೆ. ಫೇಸ್​ಬುಕ್​ ಮತ್ತು ಇನ್​​ಸ್ಟಾಗ್ರಾಮ್​​ನಲ್ಲಿ ನಕಲಿ ಖಾತೆ ತರೆದು ವಂಚಿಸುತ್ತಿದ್ದಾರೆ. ನಕಲಿ ಖಾತೆ ​ಸೃಷ್ಟಿಸಿ ಹಣಕ್ಕೆ ಆಮಿಷ ಒಡ್ಡುತ್ತಾರೆ. ಅಲ್ಲದೇ, ಬ್ಲಾಕ್​ ಮೇಲ್​ ಮಾಡುವ ಮೂಲಕ ವಂಚಿಸುತ್ತಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ