ಹೆಚ್ಚಾಯ್ತು ಸವದಿ – ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ

ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಈಗ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರು ಫೈಟ್ ಶುರುವಾಗಿದೆ. ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕೆರಳಿರುವ ಸವದಿ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಿದ್ದು, ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಹಾಗಾದರೆ ಸತೀಶ್ ಜಾರಕಿಹೊಳಿ ಹೇಳಿದ್ದೇನು? ಸವದಿ ಬೆಂಬಲಿಗರು ಸಿಟ್ಟಾಗಿದ್ದೇಕೆ? ಇಲ್ಲಿದೆ ವಿವರ.

ಹೆಚ್ಚಾಯ್ತು ಸವದಿ - ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ
ಲಕ್ಷ್ಮಣ್ ಸವದಿ & ಸತೀಶ್ ಜಾರಕಿಹೊಳಿ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Ganapathi Sharma

Updated on: Jun 08, 2024 | 2:40 PM

ಚಿಕ್ಕೋಡಿ, ಜೂನ್ 8: ಲೋಕಸಭೆ ಚುನಾವಣೆ ವಿಚಾರವಾಗಿ ಶಾಸಕ ಲಕ್ಷ್ಮಣ್ (Laxman Savadi) ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಕ್ಕೆ ಇದೀಗ ಸವದಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ಲಕ್ಷ್ಮಣ್ ಸವದಿ ಬೆಂಬಲಿಗರು ಸುದ್ದಿಗೋಷ್ಠಿ ನಡೆಸಿದ್ದು, ಸಚಿವ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇದರೊಂದಿಗೆ ಉಭಯ ನಾಯಕರ ನಡುವಣ ವಾಕ್ಸಮರ ಮತ್ತಷ್ಟು ಹೆಚ್ಚಾದಂತಾಗಿದೆ.

ಅಥಣಿಯಲ್ಲಿ ಪ್ರಾಮಾಣಿಕವಾಗಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾಗಿದೆ. ಅಥಣಿ ಶಾಸಕರ ಬಗ್ಗೆ ಸಚಿವರು ತಪ್ಪು ಕಲ್ಪನೆ ಹೊಂದಿದ್ದಾರೆ. ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಹಿಂಪಡೆಯಬೇಕು ಎಂದು ಸವದಿ ಬೆಂಬಲಿಗರು ಆಗ್ರಹಿಸಿದ್ದಾರೆ.

ಅಥಣಿಯಲ್ಲಿ ಮೂಲ ಕಾಂಗ್ರೆಸ್ಸಿಗರು ವಲಸಿಗರು ಎಂಬುದು ಇಲ್ಲ. ಸಚಿವರಿಗೆ ಕೆಲವರು ತಪ್ಪು ಮಾಹಿತಿ ನೀಡಿದ್ದಾರೆ. ಆ ತಪ್ಪು ತಿಳುಕೆಯಿಂದ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ನಾವು ಒಂದು ವೇಳೆ ಬಿಜೆಪಿಗೆ ಬೆಂಬಲ ಮಾಡಿದ್ದರೆ, ಐವತ್ತು ಸಾವಿರ ಬಿಜೆಪಿಗೆ ಹೆಚ್ಚುವರಿ ಲೀಡ್ ಆಗುತಿತ್ತು. ಸಚಿವರು ಈ ಮಾತನ್ನು ವಾಪಸ್ ಪಡೆಯಬೇಕೆಂದು ಸವದಿ ಬೆಂಬಲಿಗರು ಆಗ್ರಹಿಸಿದ್ದಾರೆ.

ಏನು ಹೇಳಿದ್ದರು ಸವದಿ?

ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಲೋಕಸಭೆ ಚುನಾವಣೆಯಲ್ಲಿ ಕೊನೆಯ ವರೆಗೂ ಸಮಸ್ಯೆಯಾಯಿತು ಎಂದು ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಶುಕ್ರವಾರ ಅಸಮಾಧಾನ ಹೊರಹಾಕಿದ್ದರು. ಅಥಣಿಯಲ್ಲಿ ಮಾತನಾಡಿದ್ದ ಅವರು, ಈಗ ಕಾಂಗ್ರೆಸ್​ಗೆ ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮುಖಂಡರು ಬದಲಾದರೂ ಕಾರ್ಯಕರ್ತರು ಬದಲಾಗಲಿಲ್ಲ. ಅಥಣಿಯಲ್ಲಿ 20-30 ಸಾವಿರ ಲೀಡ್ ಸಿಗುತ್ತೆ ಅಂದುಕೊಂಡಿದ್ದೆವು. ಆದರೆ ಏನೋ ಮಾಡಲು ಹೋಗಿ ಇನ್ನೇನೋ ಆಯಿತು ಎಂದು ಹೇಳಿದ್ದರು.

ಇದನ್ನೂ ಓದಿ: ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಕೊನೆಯ ವರೆಗೂ ಸಮಸ್ಯೆ: ಸವದಿ ವಿರುದ್ಧ ಸತೀಶ್ ಜಾರಕಿಹೊಳಿ‌ ಬಹಿರಂಗ ಅಸಮಾಧಾನ

ಈ ವಿಚಾರವಾಗಿ ಇಂದೂ ಸಹ ಪತ್ರಿಕಾಗೋಷ್ಠಿ ನಡೆಸಿದ್ದ ಸತೀಶ್ ಜಾರಕಿಹೊಳಿ, ಸವದಿ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸವದಿ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ