ಬೆಳಗಾವಿ: ಹುಕ್ಕಾ ಬಾರ್ & ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ; 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ

ಬೆಳಗಾವಿ (Belagavi) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಹುಕ್ಕಾ ಬಾರ್(Hookah Bar) ಮತ್ತು ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 5.53 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದರೆ, ಹುಕ್ಕಾ, ರೋಲ್ ಪೇಪರ್, ಚಾರ್ಕಕೋಲ್, ವಿದೇಶಿ ಸಿಗರೆಟ್, ತಂಬಾಕಿನ ಪಾಕೇಟ್​ಗಳನ್ನು ಜಪ್ತಿ ಪಡೆಯಲಾಗಿದೆ.

ಬೆಳಗಾವಿ: ಹುಕ್ಕಾ ಬಾರ್ & ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ; 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶಕ್ಕೆ
ಪ್ರಾತಿನಿಧಿಕ ಚಿತ್ರ
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 13, 2024 | 2:52 PM

ಬೆಳಗಾವಿ, ಮಾ.13: ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸ್​ ಇಲಾಖೆ ಪಣತೊಟ್ಟಿದೆ. ಅದರಂತೆ ಇದೀಗ ಬೆಳಗಾವಿ (Belagavi) ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಹುಕ್ಕಾ ಬಾರ್(Hookah Bar) ಮತ್ತು ತಂಬಾಕಿನ ಉತ್ಪನ್ನ ಮಾರಾಟ ಮಳಿಗೆ ಮೇಲೆ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ದೇಶದಲ್ಲಿ ನಿಷೇಧಿತ ಇ-ಸಿಗರೆಟ್ ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಸೀಜ್ ಮಾಡಲಾಗಿದೆ. ಜೊತೆಗೆ ಮಂಗಳೂರು ಮೂಲದ ಅಬುಬ್ಕರ್ ಸಿದ್ದಿಕ್, ಶಬಾಬ್ ಅಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ.

ಕೇಂದ್ರ ಸರ್ಕಾರದ ನಿಷೇಧ ಇದ್ರು ಮಾದಕ ವಸ್ತುಗಳ ಮಾರಾಟ

ಟಿಳಕವಾಡಿಯ ಗ್ಯಾಲರಿ ಸ್ಮೋಕ್ & ಚಾಕಲೇಟ್ ಗಿಫ್ಟ್ & ಮೋರ್ ಮೇಲೆ ದಾಳಿ ನಡೆಸಲಾಗಿದ್ದು, ಯಾವುದೇ ಲೈಸೆನ್ಸ್ ಇಲ್ಲದೇ ಅನಧಿಕೃತವಾಗಿ ಮಳಿಗೆಯಲ್ಲಿ ಸುರಂಗ ಮಾರ್ಗ ನಿರ್ಮಿಸಿ ಹುಕ್ಕಾ ಮಾರಾಟ ಮಾಡಲಾಗುತ್ತಿತ್ತು. ಮಾದಕ ವಸ್ತುಗಳ ಮಾರಾಟಕ್ಕೆ ಕೇಂದ್ರ ಸರ್ಕಾರದ ನಿಷೇಧವಿದ್ದರೂ ಕೂಡ ಮಾರಾಟ ಮಾಡಲಾಗಿತ್ತು. ಇನ್ನು ದಾಳಿ ವೇಳೆ 5.53 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದರೆ, ಹುಕ್ಕಾ, ರೋಲ್ ಪೇಪರ್, ಚಾರ್ಕಕೋಲ್, ವಿದೇಶಿ ಸಿಗರೆಟ್, ತಂಬಾಕಿನ ಪಾಕೇಟ್​ಗಳನ್ನು ಜಪ್ತಿ ಪಡೆಯಲಾಗಿದೆ. ಇನ್ನು ಕಾಲೇಜು ವಿದ್ಯಾರ್ಥಿಗಳಿಗೆ ಈ ಹುಕ್ಕಾ, ವಿದೇಶಿ ಸಿಗರೆಟ್ ಮರಾಟವಾಗುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ:ಕೋಲಾರದಲ್ಲಿ ಪುಟಾಣಿ‌ ‌ಮಕ್ಕಳಿಂದ ಸ್ಕೇಟಿಂಗ್‌ ಮಾಡುವ ಮೂಲಕ‌ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನ

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್​ನಲ್ಲಿ ಗ್ಯಾಸ್​ ಟ್ಯಾಂಕರ್ ಪಲ್ಟಿ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್​ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದೆ. ಈ ಹಿನ್ನಲೆ ಗ್ಯಾಸ್ ಸೋರಿಕೆಯಾಗುತ್ತಿದ್ದು, ವಾಹನಗಳ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ. ಇದರಿಂದ ಸವಾರರು ಮಾರ್ಗ ಮಧ್ಯೆಯೇ ವಾಹನಗಳನ್ನು ನಿಲ್ಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Wed, 13 March 24

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ