AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಸಹಾಯಕ ಕುಲಸಚಿವ ಸೇರಿ ಮೂವರು ಅರೆಸ್ಟ್

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಸಹಾಯಕ ಕುಲಸಚಿವರು ಸೇರಿದಂತೆ ಅವರ ತಂಡದಿಂದ ವಿವಿ ನೌಕರರು ಹಾಗೂ ಸಿಬ್ಬಂದಿಯ ಪಿಎಫ್, ಎನ್‌ಪಿಎಸ್ ಹಣವನ್ನು ಗುಳುಂ ಮಾಡಿದ್ದಾರೆ. ಸದ್ಯ ಕಾಕತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.

ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಸಹಾಯಕ ಕುಲಸಚಿವ ಸೇರಿ ಮೂವರು ಅರೆಸ್ಟ್
ಬಂಧಿತರು Image Credit source: tv9 kannada
ಸಹದೇವ್​ ಮಾನೆ
| Edited By: |

Updated on: Sep 28, 2026 | 6:41 PM

Share

ಬೆಳಗಾವಿ, ಸೆಪ್ಟೆಂಬರ್​​​ 28: ಇಲ್ಲಿನ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು, ವಿಶ್ವವಿದ್ಯಾಲಯದ ನೌಕರರು ಹಾಗೂ ಸಿಬ್ಬಂದಿಯ ಭವಿಷ್ಯ ನಿಧಿ (ಪಿಎಫ್) ಮತ್ತು ಎನ್‌ಪಿಎಸ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸಹಾಯಕ ಕುಲಸಚಿವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

32 ಲಕ್ಷ ರೂ. ಹಣ ದುರ್ಬಳಕೆ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಹೆಚ್.ಎಂ. ಮುರುಗೇಶ್ ಹಾಗೂ ತಂಡ 2020ರಿಂದ 2023ರ ವರೆಗಿನ ನೌಕರರ ಪಿಎಫ್ ಹಾಗೂ ಎನ್‌ಪಿಎಸ್ ಹಣಕ್ಕೆ ಕನ್ನ ಹಾಕಿದೆ. ವಿಶ್ವವಿದ್ಯಾಲಯದ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 32 ಲಕ್ಷ ರೂ ಹಣವನ್ನು ತಮ್ಮ ಸ್ವಂತ ಹಾಗೂ ಇತರ ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ದುರ್ಬಳಕೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಬೆಳಗಾವಿ ವಿಟಿಯು ಖಜಾನೆ ಮೇಲೆ ಸರ್ಕಾರ ಕಣ್ಣು: 610 ಪೈಕಿ 250 ಕೋಟಿ ರೂ ನೀಡುವಂತೆ ಪತ್ರ

ಅಷ್ಟೇ ಅಲ್ಲದೆ, ವಿವಿ ಖಾತೆಯಿಂದ ಫರ್ನಿಚರ್ ಶಾಪ್‌ಗೂ ಹಣ ವರ್ಗಾವಣೆ ಮಾಡಿ ಸ್ವಂತಕ್ಕೆ ಬಳಸಿಕೊಂಡಿರುವುದು ಪತ್ತೆಯಾಗಿದೆ.

ಅಕೌಂಟ್ ಕ್ಲೋಸ್ ಆದಾಗ ಬಯಲಾಯ್ತು ಅಕ್ರಮ

ಇನ್ನು 2024ರಲ್ಲಿ ಆರೋಪಿಗಳು ವಿವಿಯ ಆನ್‌ಲೈನ್ ಬ್ಯಾಂಕ್ ಖಾತೆಯನ್ನು ಕ್ಲೋಸ್ ಮಾಡಿಸಿದ್ದರು.  ಖಾತೆಯನ್ನು ಏಕೆ ಕ್ಲೋಸ್ ಮಾಡಲಾಗಿದೆ ಎಂದು ಪರಿಶೀಲನೆ ನಡೆಸಿದಾಗ, ಕಳೆದ ಮೂರು ವರ್ಷಗಳಿಂದ ನೌಕರರ ಪಿಎಫ್ ಹಣವನ್ನು ಅಕ್ರಮವಾಗಿ ಡ್ರಾ ಮಾಡಿ ಸ್ವಂತಕ್ಕೆ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಅಕ್ರಮ ಪತ್ತೆಯಾಗುತ್ತಿದ್ದಂತೆ ವಿವಿ ಆಡಳಿತ ಮಂಡಳಿ ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದೆ.

LIVE TV

ಮೂವರ ಬಂಧನ: ಪೊಲೀಸ್ ಕಮಿಷನರ್ ಹೇಳಿದ್ದಿಷ್ಟು 

ದೂರಿನನ್ವಯ ತನಿಖೆ ಆರಂಭಿಸಿರುವ ಪೊಲೀಸರು ಈಗಾಗಲೇ ಸಹಾಯಕ ಕುಲಸಚಿವ ಹೆಚ್.ಎಂ. ಮುರುಗೇಶ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ‘ಪ್ರಕರಣ ಸಂಬಂಧ ಕಾಕತಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈಗಾಗಲೇ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಇನ್ನು ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ