10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಬೆಳಗಾವಿಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ 10 ವರ್ಷಗಳ ಹಳೆಯ ದ್ವೇಷಕ್ಕೆ ಭೀಕರ ಕೊಲೆಯಾಗಿದೆ. ತಾಯಿ ಜೊತೆ ಓಡಿಹೋಗಿದ್ದವನನ್ನು ಮಚ್ಚಿನಿಂದ 16 ಬಾರಿ ಕೊಚ್ಚಿ ವ್ಯಕ್ತಿಯೋರ್ವ ಹತ್ಯೆ ಮಾಡಿದ್ದಾನೆ. ತಾನು 18 ವರ್ಷವಿದ್ದಾಗ ತಾಯಿಯನ್ನು ತನ್ನಿಂದ ದೂರ ಮಾಡಿದ ದ್ವೇಷಕ್ಕೆ ಈ ಕೃತ್ಯ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ
ಮೃತ ಬಸಪ್ಪ
Image Credit source: Tv9 Kannada
Edited By:

Updated on: Feb 03, 2026 | 2:04 PM

ಬೆಳಗಾವಿ, ಫೆಬ್ರವರಿ 03: ಅನೈತಿಕ ಸಂಬಂಧ ವಿಚಾರವಾಗಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿದೆ.

10 ವರ್ಷಗಳ ಹಿಂದೆ ಈರಯ್ಯ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಬಸಪ್ಪ ಹೊಸಮನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಸಿನಿಮಾ ಸ್ಟೈಲ್​ನಲ್ಲಿ ಶವದ ಮೇಲೆ ಕಾಲಿಟ್ಟು ಆರೋಪಿ ಈರಯ್ಯನೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ. ನಿನ್ನೆ ಸಂಜೆ ಬಸಪ್ಪನ ಅಡ್ಡಗಟ್ಟಿ 16 ಬಾರಿ ಮಚ್ಚಿನಿಂದ ಕೊಚ್ಚಿ ಕೊಂದಿದ್ದ ಈತ, ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತಿದ್ದ ಎನ್ನಲಾಗಿದೆ. ಪ್ರಕರಣ ಸಂಬಂಧ ಆರೋಪಿ ಈರಯ್ಯನ ಬಂಧಿಸಿರುವ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ; ಮದ್ಯ ಕುಡಿಸಿ ಸ್ನೇಹಿತನ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಯುವಕ

ಕೌಟುಂಬಿಕ ಕಲಹಕ್ಕೆ ಯುವತಿ ಬಲಿ

ಕೌಟುಂಬಿಕ ಕಲಹಕ್ಕೆ ಯುವತಿ ಬಲಿಯಾಗಿರುವ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ತೂಮಿನಾಡಿನಲ್ಲಿ ನಡೆದಿದೆ.  ಜುಮೈಲ(18) ಮೃತ ಯುವತಿಯಾಗಿದ್ದು, ಆರೋಪಿ ಉಮರ್ ಫಾರೂಕ್​​ನ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಫಾರೂಕ್​ ಹಾಗೂ ಪತ್ನಿ ತಾಹಿರ ನಡುವೆ ಕೌಟುಂಬಿಕ ಕಲಹ ಇತ್ತು ಎನ್ನಲಾಗಿದ್ದು, ಫಾರೂಕ್​ನ‌ ನಾದಿನಿ ಮನೆಯಲ್ಲಿ ಪತ್ನಿ ತಾಹಿತ ಮತ್ತು ಪುತ್ರಿ ಜುಮೈಲ ವಾಸವಿದ್ದರು. ಕೌಟುಂಬಿಕ ಕಲಹ ತಾರಕಕ್ಕೇರಿ ವಿಚ್ಛೇದನದ ಮಾತುಕತೆ ಕೂಡ ನಡೆದಿತ್ತು. ಈ ವೇಳೆ ತನ್ನ ಹೆಸರಿಗೆ ಆಸ್ತಿ ಮಾಡಿಕೊಡುವಂತೆ ಫಾರೂಕ್​ ಬೇಡಿಕೆ ಇಟ್ಟಿದ್ದ. ಇದೇ ವಿಚಾರವಾಗಿ ನಿನ್ನೆ ಉಮರ್ ಫಾರೂಕ್​ ಹಾಗೂ ಜುಮೈಲ ಚಿಕ್ಕಪ್ಪನ ನಡುವೆ ಜಗಳ ನಡೆದಿದೆ. ಜಗಳ ಬಿಡಿಸುವ ವೇಳೆ ಕತ್ತಿ ತಗುಲಿ ಜುಮೈಲ ಮೃತಪಟ್ಟಿದ್ದಾಳೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:11 pm, Tue, 3 February 26