ಬೆಳಗಾವಿ: ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳ (guarantee scheme) ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿಯ (Belagavi) ಹಲವೆಡೆ ಜನ ಆಗ್ರಹಿಸಿದ್ದಾರೆ. ಜತೆಗೆ, ಸದಾಶಿವ ನಗರದಲ್ಲಿ ಜನರು ಈ ತಿಂಗಳ ವಿದ್ಯುತ್ ಶುಲ್ಕ ಪಾವತಿ ಮಾಡದೇ ಇರಲು ನಿರ್ಧರಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಚೌಗುಲೆ ಎಂಬವರು ಇನ್ನೂ ಒಂದು ಹೆಜ್ಜೆ ಮುಂದೆಹೋಗಿ, ಮನೆಯಲ್ಲಿನ ವಿದ್ಯುತ್ ಮೀಟರ್‌ಗೆ ‘ಫ್ರೀ ಕರೆಂಟ್, ನೋ ರೀಡಿಂಗ್’ ಎಂದು ಬರೆದು ಅಂಟಿಸಿದ್ದಾರೆ.
ಅಧಿಕಾರಕ್ಕೆ ಬಂದರೆ 200 ಯುನಿಟ್ ಫ್ರೀ ವಿದ್ಯುತ್ ನೀಡುವುದಾಗಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿತ್ತು. ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಹೆಸ್ಕಾಂ ಸಿಬ್ಬಂದಿ ರೀಡಿಂಗ್ ಪಡೆಯಬಾರದು, ನಾನು ವಿದ್ಯುತ್ ಪಾವತಿಸಲ್ಲ ಎಂದು ಪ್ರಸಾದ್ ಚೌಗುಲೆ ಹೇಳಿದ್ದಾರೆ.
ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ರಾಜ್ಯದ ಹಲವು ಕಡೆಗಳಲ್ಲಿ ಜನರು ಈಗಾಗಲೇ ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ, ಬೆಳಗಾವಿಯ ಜನರು ಒಗ್ಗಟ್ಟಿನಿಂದ ಶುಲ್ಕ ಪಾವತಿಸದೇ ಇರಲು ಮುಂದಾಗಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಈ ಮಧ್ಯೆ, ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಘೋಷಣೆ ಮಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ