ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್

ಶನಿವಾರ(ಅಕ್ಟೋಬರ್ 19) ಒಂದೇ ದಿನ ದೇಶದ ವಿವಿಧ ವಿಮಾನಯಾನ ಸಂಸ್ಥೆಗೆ ಸೇರಿದ ಸುಮಾರು 30 ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ. ಅದರಂತೆ ವಿಮಾನವೊಂದಕ್ಕೆ ಬಾಂಬ್​ ಇಟ್ಟಿರುವುದಾಗಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆದರಿಕೆ ಇಮೇಲ್​ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಮಾನಕ್ಕೆ ಬಾಂಬ್ ಬೆದರಿಕೆ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇ ಮೇಲ್
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on: Oct 20, 2024 | 1:53 PM

ಬೆಳಗಾವಿ, (ಅಕ್ಟೋಬರ್ 20): ಶಾಲೆ, ಹೋಟೆಲ್​ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಅದರಲ್ಲೂ ನಿನ್ನೆ (ಅಕ್ಟೋಬರ್ 19) ಒಂದೇ ದಿನ ವಿವಿಧ ವಿಮಾನ ಸಂಸ್ಥೆಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಇದರಲ್ಲಿ ಚೆನ್ನೈ-ಬೆಳಗಾವಿ ವಿಮಾನವು ಸಹ ಸೇರಿದೆ. ಹೌದು… ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್​ ಬಂದಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು, ಇ-ಮೇಲ್​ ಎಲ್ಲಿಂದ ಬಂದಿದೆ ಎನ್ನುವುದನ್ನು ತನಿಖೆ ನಡೆಸಿದ್ದಾರೆ.

ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿ ಏರ್​ಪೋರ್ಟ್​ ಅಥಾರಿಟಿಗೆ ಮೇಲ್ ಬಂದಿದೆ. ಹೀಗಾಗಿ ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಕಡಿತಗೊಳಸಲಾಗಿದೆ. ಇನ್ನು ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇ ಮೇಲ್ ಎಲ್ಲಿಂದ ಬಂದಿದೆ? ಯಾರು ಮಾಡಿದ್ದಾರೆ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚೆಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಹೋಟೆಲ್​ಗಳಿಗೆ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಇದೀಗ ವಿಮಾನಯಾನ ಸಂಸ್ಥೆಗಳಿಗೂ ಕಾಲಿಟ್ಟಿದೆ.  ಕೇವಲ ಹುಸಿಬಾಂಬ್ ಬೆದರಿಕೆಯಾಗಿದ್ದು, ವಿಮಾನಯಾನ ಸಂಸ್ಥೆಗಳು ಹಾಗೂ ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ