ಬೆಳಗಾವಿ: ಸತೀಶ್ ಜಾರಕಿಹೊಳಿ vs ಅಭಯ ಪಾಟೀಲ್​; ಬಿಜೆಪಿ ಶಾಸಕನ ಕಾಮಗಾರಿಯಲ್ಲಿ ಅಕ್ರಮ; ತನಿಖೆಗೆ ಆದೇಶಿಸಿದ ಪಿಡಬ್ಲೂಡಿ ಸಚಿವ

ಬೆಳಗಾವಿ ಬಿಜೆಪಿ ಶಾಸಕ ನಿರ್ಮಿಸಿದ ತಿನಿಸು ಕಟ್ಟೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತನಿಖೆಗೆ ಆಗಮಿಸಿದ್ದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಹೈಡ್ರಾಮಾ ಸೃಷ್ಟಿಸಿದ್ದಾರೆ.

ಬೆಳಗಾವಿ: ಸತೀಶ್ ಜಾರಕಿಹೊಳಿ vs ಅಭಯ ಪಾಟೀಲ್​; ಬಿಜೆಪಿ ಶಾಸಕನ ಕಾಮಗಾರಿಯಲ್ಲಿ ಅಕ್ರಮ; ತನಿಖೆಗೆ ಆದೇಶಿಸಿದ ಪಿಡಬ್ಲೂಡಿ ಸಚಿವ
ಬೆಳಗಾವಿ ತಿನಿಸು ಕಟ್ಟೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ
Follow us
Sahadev Mane
| Updated By: ವಿವೇಕ ಬಿರಾದಾರ

Updated on: Nov 20, 2023 | 1:48 PM

ಬೆಳಗಾವಿ ನ.20: ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಬಿಜೆಪಿ ಶಾಸಕ ಅಭಯ ಪಾಟೀಲ್ (Abhay Patil) ನಡುವೆ ಬೆಳಗಾವಿ ಮಹಾನಗರ ಪಾಲಿಕೆ (Belagavi Municipal Corporation) ವಿಚಾರವಾಗಿ ಆರಂಭವಾದ ಫೈಟ್​ ಮತ್ತೊಂದು ಹಂತಕ್ಕೆ ತಲುಪಿದೆ. ಶಾಸಕ ಅಭಯ್ ಪಾಟೀಲ್ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ತಿನಿಸು ಕಟ್ಟೆಯಲ್ಲಿ ಅಕ್ರಮ ನಡೆದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ತಮ್ಮ ಇಲಾಖೆಯಿಂದಲೇ ತನಿಖೆ ಶರುಮಾಡಿಸಿದ್ದಾರೆ.

ಬಿಜೆಪಿ ಶಾಸಕ ಅಭಯ ಪಾಟೀಲ್ 2019-2020ರ‌ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ 13 ಗುಂಟೆ ಜಾಗದಲ್ಲಿ ತಿನಿಸು ಕಟ್ಟೆ ನಿರ್ಮಾಣ ಮಾಡಿಸಿದ್ದರು. ಈ ತಿನಿಸು ಕಟ್ಟೆ ಮಳಿಗೆಗಳನ್ನು ಶಾಸಕ ಅಭಯ ಪಾಟೀಲ್​ ಅಕ್ರಮವಾಗಿ ತಮ್ಮ ಬೆಂಬಲಿಗರಿಗೆ ಹಂಚಿದ್ದಾರೆ ಮತ್ತು ನಾಲಾ ಮೇಲೆ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ಇದರಿಂದ ಸರ್ಕಾರ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಮಾಜಿ ಪಾಲಿಕೆ ಸದಸ್ಯ ದೀಪಕ ಜಮಖಂಡಿ ಲೋಕೋಪಯೋಗಿ ಇಲಾಖೆಗೆ ದೂರು ನೀಡಿದ್ದರು.

ಅಕ್ರಮದ ತನಿಖೆಗೆ ರಾಜ್ಯ ಲೋಕೋಪಯೋಗಿ ಇಲಾಖೆಯ 6 ಜನ ಹಿರಿಯ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿದೆ. ಬೆಂಗಳೂರಿನ ದಕ್ಷಿಣ ಲೋಕೊಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ದುರ್ಗಪ್ಪ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ. ಅಧಿಕಾರಿಗಳು ಎಲ್ಲಾ ಮಳಿಗೆಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಒಬ್ಬರ ಹೆಸರಿನಲ್ಲಿ ಮಳಿಗೆ ಹರಾಜಾಗಿದ್ದು, ಅವರು ಮತ್ತೊಬ್ಬರಿಗೆ ಬಾಡಿಗೆಗೆ ನೀಡಿದ್ದಾರೆ. ಮಳಿಗೆಗಳಿಂದ ಸರ್ಕಾರಿ ಮೊತ್ತಕ್ಕಿಂತ ಹೆಚ್ಚು ಬಾಡಿಗೆ ಸಂಗ್ರಹಿಸಲಾಗುತ್ತಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಬೆಳಗಾವಿ ರಾಜಕಾರಣದಲ್ಲಿ ಮತ್ತೆ ತಳಮಳ: ಸಚಿವ ಸತೀಶ್ ಜಾರಕಿಹೊಳಿ

ತನಿಖೆಗೆ ಆಗಮಿಸಿದ ಅಧಿಕಾರಿಗಳ ಎದುರು ಸಚಿವ ಸತೀಶ್ ಜಾರಕಿಹೊಳಿ ಬೆಂಬಲಿಗರು ಮತ್ತು ಶಾಸಕ ಅಭಯ್ ಪಾಟೀಲ್ ಬೆಂಬಲಿಗರು ಹೈಡ್ರಾಮಾ ಸೃಷ್ಟಿಸಿದ್ದಾರೆ. ಅಧಿಕಾರಿಗಳ ತನಿಖೆ ವೇಳೆ ಉಭಯ ನಾಯಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಅಧಿಕಾರಿಗಳು ತನಿಖೆ ನಡೆಸುತ್ತಾರೆ ನೀವು ಯಾಕೆ ಇಲ್ಲಿ ಬಂದಿರಿ? ಎಂದು ಸಚಿವ ಸತೀಶ್ ಜಾರಕಿಹೊಳಿ​ ಬೆಂಬಲಿಗರಿಗೆ ಅಭಯ್ ಪಾಟೀಲ್ ಬೆಂಬಲಿಗರು ಪ್ರಶ್ನಿಸಿದ್ದಾರೆ.

ಇದರಿಂದ ಇಬ್ಬರು ನಾಯಕರ ಬೆಂಬಲಿಗರ ನಡುವೆ ಗಲಾಟೆ, ವಾಗ್ವಾದ ನಡೆಯಿತು. ಇದನ್ನು ಕಂಡ ಪೊಲೀಸರು ಇಬ್ಬರು ಬೆಂಬಲಿಗರನ್ನು ಹೊರ ಕಳುಹಿಸಿದರು. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್