ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ

ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಇದರಲ್ಲಿ ಬೆಳಗಾವಿ ವಿಜ್ಞಾನಿ ನೀಡಿದ್ದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್​ ಆದ ವಿಕ್ರಮ್​ ಲ್ಯಾಂಡರ್​ಗೆ ಸೆನ್ಸಾರ್​ ನೀಡಿದ್ದ ಬೆಳಗಾವಿ ವಿಜ್ಞಾನಿ
ಬೆಳಗಾವಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 6:51 PM

ಬೆಳಗಾವಿ, ಆ.23: ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ3ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಹೌದು, ಜುಲೈ 14 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಚಂದ್ರಯಾನ-3(Chandrayaan-3)ಯನ್ನು ಉಡಾವಣೆ ಮಾಡಿತ್ತು. ಇದೀಗ ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಹೌದು, ಚಂದ್ರನ ಕಡೆಗೆ 34 ದಿನಗಳ ಸುದೀರ್ಘ ಪ್ರಯಾಣದ ನಂತರ ಇದೀಗ ಲ್ಯಾಂಡ್​ ಆಗಿದ್ದು, ಇಡೀ ಭಾರತೀಯರು ಹೆಮ್ಮೆಪಡುವಂತೆ ಮಾಡಿದೆ. ಜೊತೆಗೆ ಇದರಲ್ಲಿ ಕರ್ನಾಟಕದ ಬೆಳಗಾವಿ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಅಳವಡಿಸಲಾಗಿದ್ದು, ಮತ್ತೊಂದು ಹೆಮ್ಮೆಯ ವಿಷಯವಾಗಿದೆ.

ಕ್ರಯೋಜನಿಕ್ ಸೆನ್ಸಾರ್ ಸಿದ್ದ ಪಡಿಸಿ ಚಂದ್ರಯಾನ-3ಗೆ ನೀಡಿದ್ದ ಬೆಳಗಾವಿಯ ವಿಜ್ಞಾನಿ ದೀಪಕ್ ಧಡೂತಿ

ಚಂದ್ರಯಾನ ಯಶಸ್ವಿ ಲ್ಯಾಂಡಿಗ್​ನಲ್ಲಿ ಬೆಳಗಾವಿಯ ವಿಜ್ಞಾನಿ ನೀಡಿದ ಸೆನ್ಸಾರ್​ ಕೂಡ ಪ್ರಮುಖ ಪಾತ್ರ ವಹಿಸಿದೆ. ಹೌದು, ಈ ಹಿಂದೆ ಅಮೇರಿಕಾದಲ್ಲಿದ್ದ ವಿಜ್ಞಾನಿ ದೀಪಕ್ ಧಡೂತಿ ಅವರು ಅಬ್ದುಲ್ ಕಲಾಂ ಅವರ ಪ್ರೇರಣೆಯಿಂದ ಭಾರತಕ್ಕೆ ಬಂದು, ಬೆಳಗಾವಿಯಲ್ಲಿ ತಮ್ಮದೇ ಆದ ಸರ್ವೋಕಂಟ್ರೊಲ್ಸ್ ಏರೋಸ್ಪೇಸ್ ಮತ್ತು ಟೆಕ್ನಾಲಜಿ ಪ್ರಾ.ಲಿ ಎಂಬ ಹೆಸರಿನ ಸ್ವಂತ ಕಂಪನಿಯನ್ನು ಸ್ಥಾಪಿಸಿ, ಎಂಡಿ ಕೂಡ ಆಗಿದ್ದಾರೆ.

ಇದನ್ನೂ ಓದಿ:Chandrayaan-3: ಯೂಟ್ಯೂಬ್​ನಲ್ಲಿ ದಾಖಲೆ ಧೂಳೀಪಟ; ಇಲ್ಲಿದೆ ಅತಿಹೆಚ್ಚು ನೇರ ವೀಕ್ಷಣೆ ಕಂಡ ಘಟನೆಗಳ ಪಟ್ಟಿ; ಚಂದ್ರಯಾನ ಯಶಸ್ಸು ಕಂಡು ರೋಮಾಂಚಿತಗೊಂಡ ವೀಕ್ಷಕರು

ಲ್ಯಾಂಡ್ ಆಗಿರುವ ವಿಕ್ರಂ ನಲ್ಲಿದೆ ಕ್ರಯೋಜನಿಕ್ ಸೆನ್ಸಾರ್

ಕಳೆದ ಇಪ್ಪತ್ತು ವರ್ಷದಿಂದ ಬೆಳಗಾವಿಯಲ್ಲಿ ತಮ್ಮದೆ ಕಂಪನಿ ನಡೆಸುತ್ತಿರುವ ವಿಜ್ಞಾನಿ ದೀಪಕ್ ಧಡೂತಿಯವರು ಸ್ಥಾಪಿಸಿದ ಈ ಕಂಪನಿಯಲ್ಲಿ ಸೆನ್ಸಾರ್​ಗಳನ್ನು ಸಿದ್ದಪಡಿಸುತ್ತಾರೆ. ಹೌದು, ಚಂದ್ರಯಾನ-3ಗೆ ಕ್ರಯೋಜನಿಕ್ ಸೆನ್ಸಾರ್ ಸ್ಪೇಸ್‌ ಹೆಸರಿನ ಸೆನ್ಸಾರ್ ಸಿದ್ದಪಡಿಸಿ ಎರಡು ವರ್ಷದ ಹಿಂದೆ ನೀಡಿದ್ದರು. ಇದನ್ನು ಸೊಲಾರ ಪ್ಯಾನಲ್ ಎನರ್ಜಿ ಸಲುವಾಗಿ ಮತ್ತು ವಿಕ್ರಮ್​ನ ಮೊಮೆಂಟ್ ಕಂಟ್ರೋಲ್ಸೆನ್​ನಲ್ಲಿ ಇದನ್ನು ಬಳಕೆ ಮಾಡುತ್ತಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us