AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲೂ ಪುರುಷೋತ್ತಮ ಬಿಳಿಮಲೆ ಹೇಳಿಕೆ ಸದ್ದು: ಕ್ರಮಕ್ಕೆ BJP ಶಾಸಕರ ಆಗ್ರಹ

ಪುರುಷೋತ್ತಮ ಬಿಳಿಮಲೆ ಅವರ ಯಕ್ಷಗಾನ ಕಲಾವಿದರ ಸಲಿಂಗಕಾಮ ಕುರಿತ ಹೇಳಿಕೆ ವಿಧಾನಸಭೆಯಲ್ಲಿಯೂ ಪ್ರತಿಧ್ವನಿಸಿದೆ. ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಶಾಸಕರು, ಬಿಳಿಮಲೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಹಿನ್ನಲೆ ಬಿಳಿಮಲೆ ಅವರಿಗೆ ನೋಟಿಸ್​​ ನೀಡಿ ಸ್ಪಷ್ಟನೆ ಕೇಳಲು ಸರ್ಕಾರಕ್ಕೆ ಸ್ಪೀಕರ್​​ ಸೂಚಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಆಡಿದ್ದ ಮಾತುಗಳು ಭಾರಿ ವಿವಾದ ಸೃಷ್ಟಿಸಿದ್ದವು.

ಸದನದಲ್ಲೂ ಪುರುಷೋತ್ತಮ ಬಿಳಿಮಲೆ ಹೇಳಿಕೆ ಸದ್ದು: ಕ್ರಮಕ್ಕೆ BJP ಶಾಸಕರ ಆಗ್ರಹ
ಸದನದಲ್ಲಿ ಪುರುಷೋತ್ತಮ ಬಿಳಿಮಲೆ ಹೇಳಿಕೆ ಪ್ರಸ್ತಾಪ
ಕಿರಣ್​ ಹನಿಯಡ್ಕ
| Edited By: |

Updated on: Dec 10, 2025 | 7:10 PM

Share

ಬೆಳಗಾವಿ, ಡಿಸೆಂಬರ್​ 10: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಹೇಳಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ವಿಧಾನ ಸಭೆಯಲ್ಲೂ ಪ್ರತಿಧ್ವನಿಸಿದೆ. ಗಮನ ಸೆಳೆಯುವ ಸೂಚನೆ ವೇಳೆ ಈ ಬಗ್ಗೆ ಕಾರ್ಕಳ ಶಾಸಕ ಸುನಿಲ್​​ ಕುಮಾರ್​​ ಪ್ರಸ್ತಾಪಿಸಿದ್ದು, ಬಿಳಿಮಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಜೊತೆಗೆ ನೋಟಿಸ್​​ ಕೊಟ್ಟು ಸ್ಪಷ್ಟನೆ ಪಡೆಯಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದಿಂದ ಪುರುಷೋತ್ತಮ ಬಿಳಿಮಲೆ ಅವರನ್ನು ವಜಾ ಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಈ ವೇಳೆ ನೋಟಿಸ್ ಕೊಟ್ಟು ವಿವರಣೆ ಕೇಳುವಂತೆ ಸರ್ಕಾರಕ್ಕೆ ಸ್ಪೀಕರ್ ಯು.ಟಿ. ಖಾದರ್​​ ಸೂಚನೆ ನೀಡಿದ್ದು, ಮುಂದೆ ಯಾರೂ ಆಕ್ಷೇಪಾರ್ಹ ಹೇಳಿಕೆ ಕೊಡದಂತೆ ಕ್ರಮ ಕೈಗೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು; ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ

ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸತ್ಯವನ್ನು ಹೇಳಲು ಹಿಂಜರಿಯಬಾರದು. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಆ ಮೂಲಕ ರಂಗಭೂಮಿ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗ್ತಿತ್ತು ಎಂದಿದ್ದರು.

ತಮ್ಮ ಹೇಳಿಕೆ ವಿವಾದ ರೂಪ ಪಡೆದುಕೊಳ್ಳುತ್ತಿದ್ದಂತೆ ಆ ಬಗ್ಗೆ ಬಿಳಿಮಲೆ ಅವರು ಕ್ಷಮೆ ಕೇಳಿದ್ದರು. ಜೊತೆಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದ ಅವರು, ಕೆಲ ಯಕ್ಷಗಾನ ಕಲಾವಿದರು ಸಲಿಂಗಿಗಳು ಹೌದು. ಈ ವಿಚಾರವನ್ನು ನಾನು ಹೊಸದಾಗಿ ಹೇಳುತ್ತಿಲ್ಲ. ನನ್ನ ಉದ್ದೇಶ ಕಲಾವಿದರ ಬದುಕು ಉಜ್ವಲಗೊಳಿಸುವುದು. ಹೀಗಾಗಿ ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳಲ್ಲಿ ವಿಷಾದ ವ್ಯಕ್ತಪಡಿಸುವೆ ಎಂದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!