ಬೆಳಗಾವಿ ಅಧಿವೇಶನ: ಇಂಗ್ಲಿಷ್ ಬ್ಯಾನರ್​ಗಳಿಗೆ ಮಸಿ ಬಳಿದ ಕರವೇ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಇದಕ್ಕಾಗಿ ಇಂಗ್ಲಿಷ್ ಅಕ್ಷರಗಳಲ್ಲಿಯೂ ಬ್ಯಾನರ್​ಗಳನ್ನು ಹಾಕಲಾಗಿದೆ. ಇದನ್ನು ನೋಡಿದ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು, ಬ್ಯಾನರ್​ಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೆ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಅಧಿವೇಶನ: ಇಂಗ್ಲಿಷ್ ಬ್ಯಾನರ್​ಗಳಿಗೆ ಮಸಿ ಬಳಿದ ಕರವೇ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ
ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರ ಹೈಡ್ರಾಮ
Follow us
Sahadev Mane
| Updated By: Rakesh Nayak Manchi

Updated on: Nov 30, 2023 | 1:05 PM

ಬೆಳಗಾವಿ, ನ.30: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Belagavi Session) ಇಂಗ್ಲಿಷ್ ಭಾಷೆಗಳಲ್ಲಿ ಹಾಕಲಾದ ಬ್ಯಾನರ್​ಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ ಬಣದ ಕಾರ್ಯಕರ್ತರು ಬಣ್ಣ ಬಲಿದಿದ್ದಲ್ಲದೆ, ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಜಾಹೀರಾತು ಫಲಕಗಳಲ್ಲಿ ಕನ್ನಡ ಭಾಷೆ ಬಳಸದೇ ಇರುವ ಹಿನ್ನೆಲೆ ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರು ಬ್ಯಾನರ್​ಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೆ, ಅಂತಹ ಜಾಹೀರಾತು ಬ್ಯಾನರ್​ಗಳನ್ನು ಹರಿದು ಹಾಕಿದ್ದಾರೆ. ನಂತರ ಎಂಇಎಸ್ ಮಹಾಮೇಳ ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ 4 ಜರ್ಮನ್ ಟೆಂಟ್, ಹೇಗಿದೆ? ಏನೆಲ್ಲಾ ವ್ಯವಸ್ಥೆ? ಇಲ್ಲಿದೆ ವಿವರ

ಈ ವೇಳೆ ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆಯಿತು. ಕಾರ್ಯಕರ್ತರ ಕೈಯಲ್ಲಿದ್ದ ಮಸಿ ಬಳಿಯುವ ಕಪ್ಪು ಬಾಟಲಿಯನ್ನು ಪೊಲೀಸರು ಕಸಿದುಕೊಂಡರು. ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳ ಬಟ್ಟೆ ಮೇಲೆ ಚೆಲ್ಲಿದೆ. ಪೊಲೀಸರ ನಡೆಯನ್ನು ಖಂಡಿಸಿ ಕಾರ್ಯಕರ್ತರು ರಸ್ತೆ ತಡೆದು ಆಕ್ರೋಶ ಹೊರಹಾಕಿದರು.

ಪೊಲೀಸರ ಸಮ್ಮುಖದಲ್ಲಿಯೇ ಜಾಹೀರಾತು ಫಲಕ ಹರಿದುಹಾಕಿದ ಕರವೇ ಕಾರ್ಯಕರ್ತರು, ಜಿಲ್ಲಾಡಳಿತ, ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ