Belagavi session: ಕಲಾಪದಲ್ಲಿ ಬಿಜೆಪಿ ಸದಸ್ಯರ ಗದ್ದಲ: ಜಮೀರ್​​ಗೆ ಮುಖ ತೋರಿಸಲು ಹೇಳಿ ಎಂದ ಹೊರಟ್ಟಿ

ಬೆಳಗಾವಿ ಅಧಿವೇಶನ 2023: ಸಚಿವ ಜಮೀರ್​ ಅಹ್ಮದ್​ ಇತ್ತೀಚೆಗೆ ತೆಲಂಗಾಣದಲ್ಲಿ ಸ್ಪೀಕರ್​ ವಿಚಾರವಾಗಿ ಕೊಟ್ಟಂತಹ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಬೆಳಗಾವಿ ಅಧಿವೇಶನದಲ್ಲಿ ಕೂಡ ಈ ವಿಚಾರ ಪ್ರಸ್ತಾಪವಾಗಿದೆ. ಸಚಿವ ಜಮೀರ್ ಅಹ್ಮದ್​ ಖಾನ್​ ಹೆಸರು ಪ್ರಸ್ತಾಪ ಆಗುತ್ತಿದ್ದಂತೆ ಇತ್ತ ಬಿಜೆಪಿ ಸದಸ್ಯರು ಗದ್ದಲ ಮಾಡಿದ್ದಾರೆ.

Belagavi session: ಕಲಾಪದಲ್ಲಿ ಬಿಜೆಪಿ ಸದಸ್ಯರ ಗದ್ದಲ: ಜಮೀರ್​​ಗೆ ಮುಖ ತೋರಿಸಲು ಹೇಳಿ ಎಂದ ಹೊರಟ್ಟಿ
ಸಚಿವ ಜಮೀರ್ ಅಹ್ಮದ್​
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Dec 06, 2023 | 1:02 PM

ಬೆಳಗಾವಿ, ಡಿಸೆಂಬರ್​ 06: ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ (zameer ahmed khan)​ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಸದ್ಯ ಈ ವಿಚಾರ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಸ್ವಲ್ಪ ಸಚಿವ ಜಮಿರ್ ಅಹ್ಮದ್​ ಖಾನ್​ಗೆ ಮುಖ ತೋರಿಸಲು ಹೇಳಿ. ಕಲಾಪಕ್ಕೆ ಬರುತ್ತಿಲ್ಲ ಎಂದು ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ಜಮೀರ್​ ಹೆಸರು ಪ್ರಸ್ತಾಪ ಆಗುತ್ತಿದ್ದಂತೆ ಬಿಜೆಪಿ ಸದಸ್ಯರು ಗದ್ದಲ ಸೃಷ್ಟಿಸಿದ್ದಾರೆ.

ಸಚಿವ ಜಮೀರ್​ಗೆ ಸ್ಪೀಕರ್ ಸ್ಥಾನದ ಮೇಲೆ ವಿಶ್ವಾಸ ಇಲ್ಲ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಜಮೀರ್ ಸ್ಪೀಕರ್ ಸ್ಥಾನಕ್ಕೆ ಧರ್ಮದ ಲೇಪನ ಮಾಡಿ ಮಾತನಾಡಿದ್ದಾರೆ. ಸ್ಪೀಕರ್, ಸಭಾಪತಿ ಸ್ಥಾನಕ್ಕೆ ಗೌರವ ಇಲ್ಲ ಅಂತಾ ಅವರು ಬಂದಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ: ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

ಈ ವೇಳೆ ಜಮೀರ್ ವೈಯಕ್ತಿಕ ಕೆಲಸಕ್ಕೆ ಹೋಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್​ ಹೇಳಿದ್ದಾರೆ. ಸಚಿವರು ಸದನಕ್ಕೆ ಗೈರಾಗುವುದು ಸರಿಯಲ್ಲ ಎಂದು ಸಭಾಪತಿ ಹೊರಟ್ಟಿ ಹೇಳಿದ್ದಾರೆ. ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಕ್ಕೆ ಸಭಾಪತಿ ಛಾಟಿ ಬೀಸಬೇಕು, ಮುಖ ತೋರಿಸಿ ಅಂತ ಮಾತ್ರ ಹೇಳಿದರೆ ಹೇಗೆ ಎಂದಿದ್ದಾರೆ.

ಇದನ್ನೂ ಓದಿ: Belagavi session: ಬಿಜೆಪಿ ಕಾಂಗ್ರೆಸ್​ಗೆ ರೆಬೆಲ್ ಸ್ಟಾರ್​ಗಳ ತಲೆನೋವು: ಸ್ವಪಕ್ಷದ ವಿರುದ್ಧವೇ ಈ ನಾಯಕರ ಆಕ್ರೋಶ!

ರಘುನಾಥ್ ರಾವ್ ಮಲ್ಕಾಪುರೆ ಮಾತನಾಡಿ, ಜಮೀರ್ ಅಹ್ಮದ್ ಖಾನ್ ಯಾವ ಕಾರಣಕ್ಕೆ ತಮ್ಮ ಅನುಮತಿ ಕೇಳಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಸದನ ನಡೆಯುವ ಸಂದರ್ಭದಲ್ಲಿ ಯಾರಿಗಾದರೂ ಅಪ್ಪಣೆ ಪಡೆಯುವಾಗ ಸೂಕ್ತ ಕಾರಣ ಬೇಕು. ಅವರ ಹೇಳಿಕೆ, ನಡವಳಿಕೆ ನೋಡಿದರೆ ಉದ್ದೇಶಪೂರ್ವಕವಾಗಿ ಸದನದಿಂದ ದೂರ ಉಳಿಯುತ್ತಿದ್ದಾರೆ. ತಮಗೆ ಜಮೀರ್ ಅಹ್ಮದ್ ಖಾನ್ ಕೊಟ್ಟ ಪತ್ರ ಸಭಾಪತಿಗಳು ಬಹಿರಂಗವಾಗಿ ಓದಲಿ ಎಂದು ಹೇಳಿದ್ದಾರೆ.

ಸಚಿವ ಜಮೀರ್ ಮಾತಿಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ನಾವು ಸ್ಪೀಕರ್​ ಸ್ಥಾನಕ್ಕೆ ಗೌರವ ಕೊಡುತ್ತೇವೆ ಅಂತ ಅಶೋಕ್​ ಹೇಳಿದ್ದರು. ಸಿಟಿ ರವಿಯಂತೂ ಸ್ಪೀಕರ್ ಸ್ಥಾನ ಮಸೀದಿ ಮೌಲ್ವಿಯ ಹುದ್ದೆ ಅಲ್ಲ ಅಂದಿದ್ದರು. ಇನ್ನು ಅಶ್ವತ್ಥ್​ ನಾರಾಯಣ ಆ ವಿಕೆಟ್​ ಉದುರಲೇಬೇಕು ಅಂತ ಖಾರವಾಗಿ ಕುಟುಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ