ವಕೀಲರ ಮೇಲಿನ ಹಿಂಸಾಚಾರ ನಿಷೇಧ ಸೇರಿದಂತೆ ಮೂರು ವಿಧೇಯಕಗಳ ಅಂಗೀಕಾರ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 14, 2023 | 9:27 PM

2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ-2023 ಸೇರಿದಂತೆ ಒಟ್ಟು ಮೂರು ವಿಧೇಯಕಗಳನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. 

ವಕೀಲರ ಮೇಲಿನ ಹಿಂಸಾಚಾರ ನಿಷೇಧ ಸೇರಿದಂತೆ ಮೂರು ವಿಧೇಯಕಗಳ ಅಂಗೀಕಾರ
ಬೆಳಗಾವಿ ಸುವರ್ಣ ಸೌಧ
Follow us on

ಬೆಳಗಾವಿ, ಡಿಸೆಂಬರ್​​​ 14: 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ-2023 (Karnataka Advocates Protection  Bill) ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2023ರನ್ನು ಇಂದು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.

ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ-2023

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಧರಣಿ ಮಧ್ಯೆಯೇ ಕರ್ನಾಟಕ ವಕೀಲರ ವಿರುದ್ಧದ ಹಿಂಸಾಚಾರ ತಡೆ ವಿಧೇಯಕ-2023ವನ್ನು ಕಾನೂನು ಸಚಿವ ಎಚ್​ಕೆ ಪಾಟೀಲ್ ಮಂಡನೆ ಮಾಡಿದ್ದರು.

ವಕೀಲರ ಮೇಲೆ ಹಲ್ಲೆ ಮಾಡಿದರೆ ಏನು ಶಿಕ್ಷೆ?

ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ಜಾರಿಯಾದರೆ ಯಾವುದೇ ವ್ಯಕ್ತಿ ವಕೀಲರ ಮೇಲೆ ಹಲ್ಲೆ ನಡೆಸುವಂತಿಲ್ಲ. ಒಂದು ವೇಳೆ ಹಲ್ಲೆ ಮಾಡಿದರೆ ಅಂತವರಿಗೆ 6 ತಿಂಗಳಿಂದ 3 ವರ್ಷಗಳವರೆಗೆ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿವರೆಗೆ ದಂಡಕ್ಕೆ ವಿಧಿಸುವ ವಿಧೇಯಕ ಇದಾಗಿದೆ.

ಇದನ್ನೂ ಓದಿ: ಕೊನೆಗೂ ಕರ್ನಾಟಕ ವಕೀಲರ ಸಂರಕ್ಷಣಾ ವಿಧೇಯಕ ಮಂಡನೆ: ನುಡಿದಂತೆ ನಡೆದ ಸಿದ್ದರಾಮಯ್ಯ

ಅಪರಾಧ ಸಂಬಂಧ ವಕೀಲರನ್ನು ಪೊಲೀಸರು ಬಂಧಿಸಿದ್ದಲ್ಲಿ ಲಾಯರ್ ಅಸೋಸಿಯೇಷನ್‌ಗೆ ಪೊಲೀಸರು ಮಾಹಿತಿ ನೀಡಬೇಕು ಎಂಬುದು ಇದರಲ್ಲಿದೆ.

ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ

ಟೆಂಡರ್ ಪ್ರಕ್ರಿಯೆಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಹಾಗೂ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಧರ್ಮಾದಾಯ ದತ್ತಿಗಳ(ತಿದ್ದುಪಡಿ)ವಿಧೇಯಕ-2023 

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇತ್ತೀಚೆಗೆ 2023ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದರು.

ಗದ್ದಲದ ನಡುವೆ ವಿಧಾನಪರಿಷತ್‌ನಲ್ಲಿ ಧನ ವಿನಿಯೋಗ ವಿಧೇಯಕಕ್ಕೆ ಅನುಮೋದನೆ ಮಾಡಲಾಗಿದೆ. ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಧನ ವಿನಿಯೋಗ ವಿಧೇಯಕ.

ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ (ಹಂಚಿಕೆ ಮಾಡಬಹುದಾದ ಆಯವ್ಯಯ ರೂಪಿಸುವುದು,ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ತಿದ್ದುಪಡಿ ವಿಧೇಯಕ 2023 ಪರಿಷತ್​ನಲ್ಲಿ ಅಂಗೀಕರಿಸಲಾಗಿದೆ. ಅದೇ ರೀತಿಯಾಗಿ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಿಸುವ 2ನೇ ತಿದ್ದುಪಡಿ ವೀಧೇಯಕ 2023 ಅಂಗೀಕಾರ ಮಾಡಲಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ತಿದ್ದುಪಡಿ ವಿಧೇಯಕ 2023 ಅಂಗೀಕರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:46 pm, Thu, 14 December 23