Belagavi Session: ಬೆಳಗಾವಿ ಅಧಿವೇಶನದ ವೇಳೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ; ಅಥಣಿ ಬಂದ್

ಬೆಳಗಾವಿ ಅಧಿವೇಶನ ಹಿನ್ನೆಲೆ ಅನೇಕ ಸಂಘಟನೆಗಳು ಇಂದು ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ಜೊತೆಗೆ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿ ಬಂದಿದ್ದು ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಇಂದು ಅಥಣಿ ಬಂದ್​ಗೆ ಕರೆ ಕೊಡಲಾಗಿದೆ.

Belagavi Session: ಬೆಳಗಾವಿ ಅಧಿವೇಶನದ ವೇಳೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ; ಅಥಣಿ ಬಂದ್
ಅಥಣಿ ಬಂದ್
Follow us
TV9 Web
| Updated By: ಆಯೇಷಾ ಬಾನು

Updated on:Dec 11, 2023 | 9:38 AM

ಬೆಳಗಾವಿ, ಡಿ.11: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ (Belagavi Session). ಅಧಿವೇಶನದ ಆರನೇ ದಿನವೂ ಸುವರ್ಣಸೌಧ ಹೊರಗೆ ಪ್ರತಿಭಟನೆ ಕಾವು ಕಡಿಮೆ ಆಗಿಲ್ಲ. ಇದೀಗ ಸಾಲು ಸಾಲು 13 ಪ್ರತಿಭಟನೆಗಳು ಸರ್ಕಾರಕ್ಕೆ ಬಿಸಿ ಮುಟ್ಟಿಸಲಿವೆ. ಅನೇಕ ಸಂಘಟನೆಗಳು ಇಂದು ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಂಡಿವೆ. ಜೊತೆಗೆ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿ ಬಂದಿದ್ದು ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಇಂದು ಅಥಣಿ ಬಂದ್​ಗೆ ಕರೆ ಕೊಡಲಾಗಿದೆ.

ಸರ್ಕಾರಕ್ಕೆ ಬಿಸಿ ಮುಟ್ಟಿಸಲಿರುವ ಪ್ರತಿಭಟನೆಗಳು

  • ಕರ್ನಾಟಕ ರಾಜ್ಯ ರೈತ ಸಂಘಟನೆಗಳ ರೈತ ಒಕ್ಕೂಟ ಪ್ರತಿಭಟನೆ ನಡೆಸಲಿದೆ. ರೈತರ ಸಾಲಮನ್ನಾ, 10 ಗಂಟೆ ವಿದ್ಯುತ್, ಮೂರು ರೈತ ವಿರೋಧಿ ಕಾನೂನು ವಾಪಸ್ ಪಡೆಯುವಂತೆ ರೈತರು ಗಾಂಧಿನಗರದಿಂದ ಸುವರ್ಣಸೌಧದ ವರೆಗೂ ಪಾದಯಾತ್ರೆ ಮಾಡಲಿದ್ದಾರೆ.
  • ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸಿಗೆ ಒತ್ತಾಯಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಪ್ರತಿಭಟನೆ.
  • ಪರಿಶಿಷ್ಟ ಜಾತಿ, ಒಳ ಮೀಸಲಾತಿ, ವರ್ಗೀಕರಣ ಪರಿಷ್ಕೃತ ಶಿಫಾರಸ್ಸು ಆದೇಶ ಕೇಂದ್ರಕ್ಕೆ ಕಳುಹಿಸಲು ಒತ್ತಾಯಿಸಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮಿತಿಯಿಂದ ಪ್ರತಿಭಟನೆ.
  • ಉದ್ಯೋಗ, ಯೋಜನೆಗಳಲ್ಲಿ ಮೀಸಲಾತಿಗೆ ಒತ್ತಾಯಿಸಿ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿ ಸಂಘದಿಂದ ಪ್ರತಿಭಟನೆ.
  • ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ವಕ್ಫ್ ಬೋರ್ಡ್ ಸ್ಥಾಪಿಸಲು ಆಗ್ರಹಿಸಿ ಹುಬ್ಬಳ್ಳಿಯ ಉತ್ತರ ಕರ್ನಾಟಕ ಅಂಜುಮನ್ -ಎ-ಇಸ್ಲಾಮ್ ದಿಂದ ಹೋರಾಟ.
  • ಸರ್ಕಾರದಿಂದ ತರಬೇತಿ ನೀಡಿ ಮಾನ್ಯತೆ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮೀಣ ಪ್ರಥಮ ಚಿಕಿತ್ಸಾ ವೈದರ ಸಂಘದಿಂದ ಪ್ರತಿಭಟನೆ.
  • ಖಾಸಗಿ ಶಾಲೆಗಳಲ್ಲಿ ಶೇ.25 ರಷ್ಟು ಆರ್​ಟಿಐ ಮಕ್ಕಳ ದಾಖಲಾತಿ ಮರು ಅನುಷ್ಠಾನಕ್ಕೆ ಒತ್ತಾಯಿಸಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದಿಂದ ಹೋರಾಟ.
  • ವಿವಿಧ ಬೇಡಿಕೆಗೆ ಒತ್ತಾಯಿಸಿ ಛಲವಾದಿ ಮಹಾಸಭಾ, ಕರ್ನಾಟಕ ಸಮತಾ ಸೈನಿಕ ದಳ, ಕರ್ನಾಟಕ ಛಾಯಾ ಚಿತ್ರಗ್ರಾಹಕರ ಸಂಘದಿಂದ ಮನವಿ ಸಲ್ಲಿಕೆ.ಇದನ್ನೂ ಓದಿ: Belagavi Session: ಇಂದಿನಿಂದ ಮತ್ತಷ್ಟು ಕಾವೇರಲಿದೆ ಬೆಳಗಾವಿ ಅಧಿವೇಶನ, ವಿಪಕ್ಷ ತಂತ್ರ, ತಿರುಗೇಟಿಗೆ ಸರ್ಕಾರ ಪ್ರತಿತಂತ್ರ

ಸ್ವಯಂ ಪ್ರೇರಿತರಾಗಿ ಅಥಣಿ ಬಂದ್

ಇನ್ನು ಮತ್ತೊಂದೆಡೆ ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಕೇಳಿ ಬಂದಿದ್ದು ಅಥಣಿ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಇಂದು ಅಥಣಿ ಬಂದ್​ಗೆ ಕರೆ ಕೊಡಲಾಗಿದೆ. ಅಥಣಿಯ ಅಂಬೇಡ್ಕರ್ ವೃತ್ತದಲ್ಲಿ ಟಾಯರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಲಾಗುತ್ತಿದೆ. ಅಥಣಿ ಜಿಲ್ಲಾ ಹೋರಾಟ ಸಮಿತಿ ಸ್ವಯಂ ಪ್ರೇರಿತ ಬಂದ್​ಗೆ ಕರೆ ಕೊಟ್ಟಿದ್ದು ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡ್ಕರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.  ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿಗೆ ಹೋರಾಟಗಾರರು ಮನವಿ ಸಲ್ಲಿಸಲಿದ್ದಾರೆ. ಲಕ್ಷ್ಮಣ ಸವದಿ ಅವರು ಅಥಣಿ ಜಿಲ್ಲೆ ರಚನೆ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿದ್ದಾರೆ. ಪಕ್ಷಾತೀತವಾಗಿ ಹೋರಾಟಕ್ಕೆ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಅಥಣಿ ಬಂದ್ ಹಿನ್ನೆಲೆ ಬೀಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:36 am, Mon, 11 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ