AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಣಕಾಸು, ಆಸ್ತಿ ಮತ್ತು ಪ್ರೇಮ ಸಂಬಂಧಿತ ಕಾರಣಗಳಿಂದ ಈ ಹತ್ಯೆ ನಡೆದಿರಬಹುದೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ, ಬೆಳಗಾವಿ ತಾಲೂಕಿನಲ್ಲಿ ತಾಯಿ ನಿಧನದಿಂದ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ರಕ್ಷಿಸಲಾಗಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!
ಸಹದೇವ್​ ಮಾನೆ
| Edited By: |

Updated on:Feb 22, 2026 | 12:51 PM

Share

ಬೆಳಗಾವಿ, ಫೆಬ್ರವರಿ 22: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಅವರ ಶವ ಪತ್ತೆಯಾಗಿದ್ದು,ಕಿತ್ತೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹತ್ಯೆಗೆ ಕಾರಣವೇನು?

ತುಮಕೂರಿನಲ್ಲಿ ಹೋಮ್ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಕಲ್ಮೇಶ್, ಸುಮಾರು ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು. ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಕೊಲೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳು ಕಲ್ಮೇಶ್​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು, ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.

ಹತ್ತು ವರ್ಷಗಳ ಹಿಂದೆ ಕಲ್ಮೇಶ್ ಪತ್ನಿ ದೂರವಾಗಿದ್ದ ಕಾರಣ ತಮ್ಮ ವೃದ್ಧ ತಾಯಿಯೊಂದಿಗೆ ವಾಸವಿದ್ದರು. ಘಟನೆ ತಿಳಿದು ಪತ್ನಿ ಹಾಗೂ ಪುತ್ರ ಗ್ರಾಮಕ್ಕೆ ಆಗಮಿಸಿದ್ದಾರೆ. ಪ್ರಕರಣ ಸಂಬಂಧ ಎಸ್‌ಪಿ ರಾಮರಾಜನ್ ಸೇರಿದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣಕಾಸು, ಆಸ್ತಿ ಹಾಗೂ ಮಹಿಳೆ ಸಂಬಂಧಿತ ವಿಚಾರಗಳಿಗೆ ಕೊಲೆ ಆಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಒಂಟಿ ಸಲಗ

ತಾಯಿ ಕಳೆದುಕೊಂಡ ದುಃಖದಲ್ಲಿ ಮಗನಿಂದ ಆತ್ಮಹತ್ಯೆ ಯತ್ನ

ಇನ್ನೊಂದೆಡೆ ತಾಯಿ ನಿಧನದಿಂದ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಬಾಬು ಪಾಂಡು ಸಾಂಬರೇಕರ (41) ಬಾವಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವೇಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾವಿಗೆ ಜಿಗಿದ ತಕ್ಷಣ ಕೇಬಲ್ ಅಡಿಯಲ್ಲಿ ಸಿಲುಕಿಕೊಂಡಿದ್ದ ಅವರನ್ನು ಗಮನಿಸಿದ ಸ್ಥಳೀಯರು ತಕ್ಷಣ ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್ ಮುಖ್ಯಸ್ಥ ಬಸವರಾಜ್ ಹಿರೇಮಠ ಅವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ದೌಡಾಯಿಸಿದ ತಂಡ ಬಾವಿಯೊಳಗೆ ಇಳಿದು ಬಾಬು ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿತು. 15 ದಿನಗಳ ಹಿಂದೆ ಅನಾರೋಗ್ಯದಿಂದ ತಾಯಿ ಮೃತಪಟ್ಟಿದ್ದರಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:09 pm, Sun, 22 February 26

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?