ನಾಗರಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ದುರಂತ ಸಾವು

ಬೆಳಗಾವಿಯ ರಾಯಬಾಗದಲ್ಲಿ ನಾಗರಪಂಚಮಿ ದಿನ ವಿಷಾದಕರ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸತ್ಯವ್ವ ಶಿಂಗೆ (43) ಅವರನ್ನು ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿದ್ದು, ಆಸ್ಪತ್ರೆಗೆ ಸಾಗಿಸುವಾಗ ನಿಧನರಾಗಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಊರಿನಲ್ಲಿ ಈ ದುರಂತ ಸೂತಕದ ಛಾಯೆ ಮೂಡಿಸಿದೆ. ಹಾವು ಕಡಿತದಿಂದ ಸಾವನ್ನಪ್ಪಿದ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ನಾಗರಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ದುರಂತ ಸಾವು
ಬೆಳಗಾವಿ ಹಾವು ಕಡಿತ

Updated on: Aug 17, 2026 | 4:49 PM

ಬೆಳಗಾವಿ, ಆ.17: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರಪಂಚಮಿ ಹಬ್ಬದ ದಿನವೇ ಅತ್ಯಂತ ವಿಷಾದಕರ ಘಟನೆಯೊಂದು ಸಂಭವಿಸಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅತ್ಯಂತ ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿ ಸತ್ಯವ್ವ ಶಿಂಗೆ (43) ಎಂಬ ಮಹಿಳೆ ಅಸಹಾಯಕರಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಸತ್ಯವ್ವ ಅವರು ತಮ್ಮ ಜಮೀನಿನಲ್ಲಿ ಕಸ ತೆಗೆಯುವ ಕೆಲಸದಲ್ಲಿ ನಿರತರಾಗಿದ್ದಾಗ ಅಡಗಿದ್ದ ವಿಷಕಾರಿ ಕೊಳಕುಮಂಡಲ ಹಾವು ಏಕಾಏಕಿ ಕಚ್ಚಿದೆ. ಹಾವಿನ ವಿಷ ದೇಹಕ್ಕೆ ವ್ಯಾಪಿಸಿ ತೀವ್ರವಾಗಿ ಅಸ್ವಸ್ಥಗೊಂಡ ಸತ್ಯವ್ವ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ದುರದೃಷ್ಟವಶಾತ್ ಆಸ್ಪತ್ರೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಇಡೀ ಊರು ನಾಗರಪಂಚಮಿ ಹಬ್ಬದ ಸಂಭ್ರಮದಲ್ಲಿದ್ದಾಗಲೇ ಈ ದುರಂತ ಸಂಭವಿಸಿದ್ದು, ರಾಯಬಾಗ ಪಟ್ಟಣದಲ್ಲಿ ಸೂತಕದ ಛಾಯೆ ಆವರಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯ ಚಾಲುಕ್ಯರ ಕಾಲದ ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ: ಹಿಂದೂಪರ ಸಂಘಟನೆಗಳ ಆಕ್ರೋಶ

ಶಿವಮೊಗ್ಗ: ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಬೃಹತ್ ಹೆಬ್ಬಾವು ಸೆರೆ

ಶಿವಮೊಗ್ಗ ತಾಲೂಕಿನ ಉಂಬಳಬೈಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬೃಹತ್ ಆಕಾರದ ಹೆಬ್ಬಾವೊಂದು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ. ಉಂಬಳಬೈಲು ಗ್ರಾಮದ ನಿವಾಸಿ ಪ್ರಮೋದ್ ಎಂಬುವರ ತೋಟದಲ್ಲಿ ದಿಢೀರನೆ ಬೃಹದಾಕಾರದ ಹೆಬ್ಬಾವು ಕಾಣಿಸಿಕೊಂಡಿದೆ. ಇದನ್ನು ಕಂಡು ತೋಟದ ಕಾರ್ಮಿಕರು ಹಾಗೂ ಸ್ಥಳೀಯರು ಆತಂಕಗೊಂಡಿದ್ದರು.

ವಿಷಯ ತಿಳಿಯುತ್ತಿದ್ದಂತೆ ಆರ್‌ಎಫ್‌ಒ (RFO) ಪ್ರದೀಪ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದರು. ಆರ್‌ಎಫ್‌ಒ ಪ್ರದೀಪ್ ಅವರ ನೇತೃತ್ವದಲ್ಲಿ ಸಮಯಪ್ರಜ್ಞೆಯಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಹೆಬ್ಬಾವಿಗೆ ಯಾವುದೇ ಗಾಯವಾಗದಂತೆ ಸುರಕ್ಷಿತವಾಗಿ ಸೆರೆಹಿಡಿದು ನಂತರ ದಟ್ಟ ಅರಣ್ಯಕ್ಕೆ ರವಾನಿಸಿದ್ದಾರೆ. ಅರಣ್ಯಾಧಿಕಾರಿ ಪ್ರದೀಪ್ ಹಾಗೂ ಅವರ ತಂಡದ ತ್ವರಿತ ಸ್ಪಂದನೆ ಮತ್ತು ಸಮಯಪ್ರಜ್ಞೆಗೆ ಉಂಬಳಬೈಲು ಗ್ರಾಮಸ್ಥರು ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us