ಸೋಶಿಯಲ್ ಮೀಡಿಯಾದಲ್ಲಿ​ ಧಾರ್ಮಿಕ ಭಾವನೆ ಕೆರಳಿಸುವ ಸಂದೇಶ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಬೆಳಗಾವಿ ಎಸ್ಪಿ ಎಚ್ಚರಿಕೆ

ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್​ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ​ ಧಾರ್ಮಿಕ ಭಾವನೆ ಕೆರಳಿಸುವ ಸಂದೇಶ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಬೆಳಗಾವಿ ಎಸ್ಪಿ ಎಚ್ಚರಿಕೆ
ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಎಸ್ಪಿ ಡಾ.ಸಂಜೀವ್ ಪಾಟೀಲ್
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 07, 2023 | 9:17 PM

ಬೆಳಗಾವಿ: ವಿವಾದಾತ್ಮಕ ವಾಟ್ಸಪ್ ಸ್ಟೇಟಸ್‌ನಿಂದ ನೆರೆಯ ಕೊಲ್ಹಾಪುರ (Kolhapur)ದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್​ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ. ಐಪಿಸಿ ಕಲಂ 153ಎ, 295 ಎ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿಪ್ಪಾಣಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಎಸ್ಪಿ ಡಾ. ಸಂಜೀವ್ ಪಾಟೀಲ್​​, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.

ಬೂದಿ ಮುಚ್ಚಿದ ಕೆಂಡವಾದ ಕೊಲ್ಹಾಪುರ  

ಔರಂಗಜೇಬ್​​ ಮತ್ತು ಟಿಪ್ಪು ಸುಲ್ತಾನ್​ರನ್ನು ಹೊಗಳಿ ವಾಟ್ಸಪ್‌ ಸ್ಟೇಟಸ್​ ಹಾಕಿದ್ದಕ್ಕೆ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳ ಕೃತ್ಯ ಸದ್ಯ ಆಕ್ರೋಶಕ್ಕೆ ಕಾರಣವಾಗಿದ್ದು, ಕೊಲ್ಹಾಪುರದಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಇದನ್ನೂ ಓದಿ: ಔರಂಗಜೇಬ್​​, ಟಿಪ್ಪು​ ಹೊಗಳಿ ವಾಟ್ಸಾಪ್​ ಸ್ಟೇಟಸ್ ಹಾಕಿದ್ದಕ್ಕೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್, 144 ಸೆಕ್ಷನ್ ಜಾರಿ

ಅಶ್ರುವಾಯು ಪ್ರಯೋಗಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರ ಹರಸಾಹಸ ಪಟ್ಟಿದ್ದು, ಕೊಲ್ಹಾಪುರ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಸದ್ಯ ಕೊಲ್ಹಾಪುರ ನಗರದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹಿಂದೂಪರ ಸಂಘಟನೆಗಳಿಂದ ಬಂಧನಕ್ಕೆ ಆಗ್ರಹ

ಬುಧವಾರ ಹಿಂದೂಪರ ಸಂಘಟನೆಗಳು ಕೊಲ್ಹಾಪುರ ನಗರ ಬಂದ್‌ಗೆ ಕರೆ ನೀಡಿದ್ದರು. ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜ ಚೌಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದ ಹಿಂದೂಪರ ಸಂಘಟನೆಗಳು, ಆಕ್ಷೇಪಾರ್ಹ ಪೋಸ್ಟ್ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಸುಲ್ತಾನ್ ಬಗ್ಗೆ ಪೋಸ್ಟ್ ವಿವಾದ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಂಘರ್ಷ, ಕಲ್ಲು ತೂರಾಟ

ಕಿಡಿಗೇಡಿಗಳಿಂದ ಕಲ್ಲು ತೂರಾಟ: ಸಾರ್ವಜನಿಕ ಆಸ್ತಿಪಾಸ್ತಿ ನಾಶ

ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ಉಂಟಾಗಿದೆ. ಇದೇ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಮಾಡಿದ್ದು, ಇಬ್ಬರಿಗೆ ಗಾಯಗಳಾಗಿವೆ. ಅಂಗಡಿ ಮುಂಗಟ್ಟು ಮೇಲೆಯೂ ಕಲ್ಲು ತೂರಿ ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಲಾಗಿದೆ.

ಇತ್ತೀಚೆಗೆ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಶಾಸಕ ಆಸೀಫ್ ಸೇಠ್​ ಗೆಲುವು ಸಾಧಿಸಿದ್ದರು. ಈ ಹಿನ್ನಲೆ ಅವರ ಸಂಭ್ರಮದಲ್ಲಿ ಯಾರೋ ಕಿಡಿಗೇಡಿಗಳು ‘ಪಾಕಿಸ್ತಾನ್​ ಜಿಂದಾಬಾದ್’ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:14 pm, Wed, 7 June 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್