AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ಲೀಕ್ ! ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಬೆಳಗಾವಿಯ SSLC ಸಮಾಜ ವಿಜ್ಞಾನ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. 'Delta SSLC' ಇನ್ಸ್ಟಾಗ್ರಾಮ್ ಖಾತೆಯಿಂದ ಇದು ವೈರಲ್ ಆಗಿದ್ದು, ಕಳೆದ ವರ್ಷವೂ ಇದೇ ರೀತಿ ನಡೆದಿತ್ತು. ಪರೀಕ್ಷಾ ಮಂಡಳಿಯು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಗೊಂದಲ ಮೂಡಿಸಿದೆ. ನಕಲಿ ಪ್ರಶ್ನೆಪತ್ರಿಕೆಗಳ ಕುರಿತು ಶಿಕ್ಷಣ ಇಲಾಖೆಯ ಎಚ್ಚರಿಕೆಯನ್ನೂ ನೀಡಿದ್ದು, ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಶಿಕ್ಷಣ ಇಲಾಖೆ ಮೇಲಿನ ಒತ್ತಡ ಹೆಚ್ಚಿದೆ.

ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ಲೀಕ್ ! ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಸೋರಿಕೆಯಾದ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ
Vinay Kashappanavar
| Edited By: |

Updated on: Jan 10, 2026 | 2:53 PM

Share

ಬೆಳಗಾವಿ, ಜನವರಿ 10: 2026ರ ರಾಜ್ಯಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ–1ಕ್ಕೆ ಸಂಬಂಧಿಸಿದ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂದು ನಡೆಯುತ್ತಿರುವ ಪೂರ್ವಭಾವಿ ಪರೀಕ್ಷೆಯ ವೇಳೆ ಬೆಳಗಾವಿ ಕೇಂದ್ರದಿಂದ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಆತಂಕ ಮೂಡಿಸಿದೆ.

Delta SSLC ಇನ್‌ಸ್ಟಾಗ್ರಾಮ್ ಖಾತೆಯಿಂದ ಪ್ರಶ್ನೆಪತ್ರಿಕೆ ಲೀಕ್

ಸಮಾಜ ವಿಜ್ಞಾನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಕ್ಕೂ ಮುನ್ನವೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಉಂಟಾಗಿದೆ. “Delta SSLC” ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಪ್ರಶ್ನೆಪತ್ರಿಕೆ ವೈರಲ್ ಆಗಿರುವುದು ಬೆಳಕಿಗೆ ಬಂದಿದೆ. ಈ ಖಾತೆ ಪ್ರತಿವರ್ಷವೂ ಪರೀಕ್ಷೆ ಸಮಯದಲ್ಲಿ ಸಕ್ರಿಯವಾಗುತ್ತಿದ್ದು, ಕಳೆದ ವರ್ಷವೂ ಇದೇ ಖಾತೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪಗಳು ಕೇಳಿಬಂದಿದ್ದವು. ಆದರೂ, ಈ ಬಗ್ಗೆ ಪರೀಕ್ಷಾ ಮಂಡಳಿ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ.

ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಪರೀಕ್ಷಾ ವ್ಯವಸ್ಥೆಯ ಭದ್ರತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವಂತಹ ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ವಿಷಯದ ಕುರಿತು ಇನ್ನೂ ಪರೀಕ್ಷಾ ಮಂಡಳಿಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚುವಂತೆ ಶಿಕ್ಷಣ ಇಲಾಖೆ ಮೇಲೆ ಒತ್ತಡ ಹೆಚ್ಚುತ್ತಿದೆ.

ಇದನ್ನೂ ಓದಿ SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ

ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಇಲಾಖೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ, ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದಾರೆ. 100 ರೂಪಾಯಿಗೆ ನಕಲಿ ಪತ್ರಿಕೆ ನೀಡಿ, ವಿದ್ಯಾರ್ಥಿಗಳ ಹಣ ಹಾಗೂ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಮತ್ತು ತಜ್ಞರು ಈ ವದಂತಿಗಳಿಗೆ ಬಲಿಯಾಗದಂತೆ ಮಕ್ಕಳಿಗೆ ಎಚ್ಚರಿಕೆ ನೀಡಿದ್ದು, ಅಧಿಕೃತ ಮಾಹಿತಿಗಳನ್ನಷ್ಟೇ ನಂಬಲು ಮನವಿ ಮಾಡಿದ್ದಾರೆ. ವಂಚಕರ ವಿರುದ್ಧ ದೂರು ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ