ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಚಾಕು ಇರಿತ: ಘಟನೆಗೆ ಕಾರಣ ಏನು?
ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಬೆಳಗಾವಿಯಲ್ಲಿ ಚಾಕು ಇರಿತ ಘಟನೆ ಸಂಬಂಧ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮಾಹಿತಿ ನೀಡಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ, ನವೆಂಬರ್ 02: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಳಗಾವಿಯ (Belagavi) ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿ ನಡೆದಿತ್ತು. ಗುರುನಾಥ್ ವಕ್ಕುಂದ, ಸಚಿನ್ ಕಾಂಬಳೆ, ಲೋಕೇಶ್ ಬೆಟಗೇರಿ, ವಿನಾಯಕ್ ಮತ್ತು ನಜೀರ್ ಪಠಾಣ್ ಎಂಬುವರಿಗೆ ಚಾಕು ಇರಿಯಲಾಗಿತ್ತು. ಘಟನೆ ಬಗ್ಗೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮಾಹಿತಿ ನೀಡಿದ್ದು, ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂವರು ಈಗಾಗಲೇ ಡಿಸ್ಚಾರ್ಜ್ ಆಗಿದ್ದು, ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ನಿಖರ ಕಾರಣ ಏನು ಎಂಬ ಬಗ್ಗೆ ಮಾಹಿತಿ ಇಲ್ಲ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 02, 2025 09:33 AM
