AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪಾಲಿಗೆ ಕಹಿಯಾದ ಕಬ್ಬು: ದರ ನಿಗದಿಗೆ FRP ನೆಪ ಹೇಳಿ ಕೇಂದ್ರದೆಡೆಗೆ ಬೊಟ್ಟು ಮಾಡಿದ ಕಾರ್ಖಾನೆಗಳು

ರಾಜ್ಯ ಸರ್ಕಾರ ಮನವಿಗೆ ಸ್ಪಂದಿಸದ ಕಾರಣಕ್ಕೆ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಬೀದಿಗಿಳಿದಿದ್ದಾರೆ. ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂ. ಬೆಲೆ ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಆದರೆ ಎಫ್‌ಆರ್‌ಪಿ ಪ್ರಕಾರ ದರ ನಿಗದಿ ಮಾಡುವುದಾಗಿ ಸಕ್ಕರೆ ಕಾರ್ಖಾನೆಗಳು ಹೇಳುತ್ತಿವೆ. ಆ ಮೂಲಕ ಕೇಂದ್ರದ ಕಡೆಗೆ ಬೊಟ್ಟು ಮಾಡುತ್ತಿವೆ.

ರೈತರ ಪಾಲಿಗೆ ಕಹಿಯಾದ ಕಬ್ಬು: ದರ ನಿಗದಿಗೆ FRP ನೆಪ ಹೇಳಿ ಕೇಂದ್ರದೆಡೆಗೆ ಬೊಟ್ಟು ಮಾಡಿದ ಕಾರ್ಖಾನೆಗಳು
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗಿ
Sahadev Mane
| Edited By: |

Updated on:Nov 04, 2025 | 3:37 PM

Share

ಬೆಳಗಾವಿ, ನವೆಂಬರ್​​ 04: ಕಬ್ಬು ಬೆಳೆಗಾರರ (Sugarcane Farmers) ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂ. ಬೆಲೆ ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಆದರೆ ಕೇಂದ್ರ ಸರ್ಕಾರದ (central government) ಎಫ್‌ಆರ್‌ಪಿ (ನ್ಯಾಯಸಮ್ಮತ ದರ) ಪ್ರಕಾರ ದರ ನಿಗದಿ ಮಾಡುತ್ತೇವೆ ಎನ್ನುತ್ತಿರುವ ಸಕ್ಕರೆ ಕಾರ್ಖಾನೆಗಳು ಆ ಮೂಲಕ ದ್ವಂದ್ವ ನೀತಿ ಅನುಸರಿಸುತ್ತಿವೆ. ಸಸ್ಯ ಕಾರ್ಖಾನೆಗಳು ಟನ್​ಗೆ 2,700 ರಿಂದ 3,200 ರೂ. ಕೊಡಲು ಮುಂದಾಗಿದ್ದು, 3500 ರೂ. ನೀಡಲೇಬೇಕೆಂದು ಬೆಳೆಗಾರರ ಪಟ್ಟು ಹಿಡಿದಿದ್ದಾರೆ.

ಕೇಂದ್ರ ಸರ್ಕಾರ ಕಬ್ಬಿಗೆ ಎಫ್​​​ಆರ್​ಪಿ ನ್ಯಾಯಸಮ್ಮತ ದರ ನಿಗದಿ ಮಾಡಿದೆ. ಶೇಕಡಾ 10.25 ರಷ್ಟು ಇಳುವರಿ ಇರುವ ಕಬ್ಬಿಗೆ ಟನ್​ಗೆ 3,550 ರೂ. ನಿಗದಿ ಮಾಡಿದೆ. ಅದರ ಆಧಾರದ ಮೇಲೆ ಸಕ್ಕರೆ ಕಾರ್ಖಾನೆಗಳು ದರ ನೀಡಬೇಕು. ಆದರೆ ಕಾರ್ಖಾನೆಗಳು 2,700 ರಿಂದ 3,200 ರೂ. ಕೊಡಲು ಮುಂದಾಗಿವೆ.

ಇದನ್ನೂ ಓದಿ: ಬೆಳಗಾವಿ: ಕಬ್ಬು ಬೆಳೆಗಾರರ ಹೋರಾಟ ತೀವ್ರ, ಪ್ರಮುಖ ಭಾಗದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಜೊತೆಗೆ ಕಬ್ಬಿನ ಕಟಾವು ಮತ್ತು ಸಾಗಣೆ ವೆಚ್ಚ ಕಡಿತ ಮಾಡಿ ದರ ನಿಗದಿ ಮಾಡಿವೆ. ಹೀಗಾಗಿ ಒಂದು ಟನ್ ಕಬ್ಬಿನ ದರ ಮತ್ತಷ್ಟು ಕಡಿಮೆಯಾಗುತ್ತಿದೆ. ಇದರ ಜೊತೆ ರಾಜ್ಯದ ಹಲವು ಕಾರ್ಖಾನೆಗಳು ಬಾಕಿ ಹಣವನ್ನೂ ಕಟ್ಟಿಲ್ಲ. ಕಾರ್ಖಾನೆಗಳ ಈ ನಡೆಗಳೇ ರೈತರ ಆಕ್ರೋಶಕ್ಕೆ ಕಾರಣವಾಗಿವೆ. ಟನ್ ಕಬ್ಬಿಗೆ 3500 ರೂ ನೀಡಲೇಬೇಕೆಂದು ಕಬ್ಬು ಬೆಳೆಗಾರರ ಪಟ್ಟು ಹಿಡಿದಿದ್ದಾರೆ.

ಕರ್ನಾಟಕದಲ್ಲಿ ಹೀಗೆ ಬೆಲೆ ಕಡಿಮೆಯಾಗುತ್ತಿದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಪ್ರತಿ ಟನ್ ಕಬ್ಬಿಗೆ 300 ರಿಂದ 400 ರೂ. ಹೆಚ್ಚಿಗೆ ಸಿಗುತ್ತಿದೆ. ಇದ್ರಿಂದ ರಾಜ್ಯದ ಕಬ್ಬು ನೆರೆಯ ಮಹಾರಾಷ್ಟ್ರಕ್ಕೆ ಹೋಗುತ್ತಿದೆ. ಅಂದಾಜಿನ ಪ್ರಕಾರ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಮಹಾರಾಷ್ಟ್ರದ ಗಡಿಯಲ್ಲಿರುವ ರಾಜ್ಯ ಜಿಲ್ಲೆಗಳಿಂದ 10 ಲಕ್ಷಕ್ಕೂ ಟನ್ ಕಬ್ಬು ರವಾನೆಯಾಗುತ್ತಿದೆ.

ದರ ನಿಗದಿ ಮಾಡದಿದ್ದರೆ ಇಡೀ ರಾಜ್ಯಕ್ಕೆ ಕಿಚ್ಚು ಹತ್ತುತ್ತದೆ: ಬಿವೈ ವಿಜಯೇಂದ್ರ

ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಸಕ್ಕರೆ ಕಾರ್ಖಾನೆಗಳ ಪರ ವಕಾಲತ್ತು ವಹಿಸಿಕೊಂಡು ಬಂದಿಲ್ಲ. ರೈತನ ಬೆನ್ನೆಲುಬಾಗಿ ನಿಲ್ಲುವುದು ಪ್ರತಿಯೊಂದು ಪಕ್ಷದ ಕರ್ತವ್ಯ. ರೈತರ ಸ್ವಾಭಿಮಾನಕ್ಕೆ ಧಕ್ಕೆ ತಂದ್ರೇ ದೇವರು ಒಳ್ಳೆಯದು ಮಾಡಲ್ಲ. ಆರು ದಿನದಿಂದ ರೈತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದರೂ ಮುಖ್ಯಮಂತ್ರಿ, ಸಚಿವರಿಗೆ ನಿಮ್ಮ ಬಳಿ ಬರಲು ಸಮಯ ಸಿಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ವಿಕೋಪಕ್ಕೆ ತಿರಗಿದ ಕಬ್ಬು ಬೆಳೆಗಾರರ ಹೋರಾಟ: ಕಿಡಿಗೇಡಿಗಳಿಂದ ಕಲ್ಲು ತೂರಾಟ

ಇಂದು ಸಂಜೆ 5 ಗಂಟೆಯೊಳಗೆ ಸ್ಥಳಕ್ಕೆ ಅಧಿಕಾರಿಗಳು ಬರ್ತಾರೋ, ಉಸ್ತುವಾರಿ ಸಚಿವರು ಬರ್ತಾರೋ, ಸಿಎಂ ಬರ್ತಾರೋ ಗೊತ್ತಿಲ್ಲ. ಅವರು ಬಂದು ದರ ನಿಗದಿ ಮಾಡುವವರೆಗೂ ಇಲ್ಲೇ ಇರುತ್ತೇನೆ. ನಾಳೆ ನನ್ನ ಹುಟ್ಟು ಹಬ್ಬ ಬೆಂಗಳೂರಿಗೆ ಹೋಗಬೇಕಿತ್ತು. ಆದರೆ ದರ ನಿಗದಿ ಆಗುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ. ಕಬ್ಬಿಗೆ ದರ ನಿಗದಿ ಮಾಡದಿದ್ದರೆ ಇಡೀ ರಾಜ್ಯಕ್ಕೆ ಕಿಚ್ಚು ಹತ್ತುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:24 pm, Tue, 4 November 25

ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ