AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಅರೆಸ್ಟ್​​

17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೋಕ್ಸೋ ಕೇಸ್​ ಅಡಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಸ್ವಾಮೀಜಿಯನ್ನು ಜೈಲಿಗಟ್ಟಲಾಗಿದೆ.

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಅರೆಸ್ಟ್​​
ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ
ಸಹದೇವ್​ ಮಾನೆ
| Edited By: |

Updated on:May 24, 2025 | 10:58 AM

Share

ಬೆಳಗಾವಿ, ಮೇ 24: ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು (Swamiji) ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ (POCSO case) ದಾಖಲಿಸಿ ​ಜೈಲಿಗಟ್ಟಿದ್ದಾರೆ.

ನಡೆದದ್ದೇನು?

ಮೇ 13ರಂದು ಮನೆಗೆ ಬಿಡುವುದಾಗಿ ಬಾಲಕಿಯನ್ನು ಸ್ವಾಮೀಜಿ ರಾಯಚೂರಿಗೆ ಕರೆದೊಯ್ದಿದ್ದಾರೆ. ಮೇ 13, 14ರಂದು ರಾಯಚೂರಿನಲ್ಲಿ ಎರಡು ದಿನ ಇದ್ದರು. ಬಳಿಕ ಮೇ 15ರಂದು ರಾತ್ರಿ ಬಾಗಲಕೋಟೆಯಲ್ಲಿ  ವಾಸ್ತವ್ಯ ಹೂಡಿದ್ದರು. 2 ಕಡೆ ವಾಸ್ತವ್ಯ ಇದ್ದಾಗ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.

ಇದನ್ನೂ ಓದಿ: ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಇದನ್ನೂ ಓದಿ
Image
ಬೆಳಗಾವಿ: ಮಕ್ಕಳಾಗಲಿಲ್ಲವೆಂದು ಸೊಸೆಯನ್ನ ಕೊಂದ ಅತ್ತೆ-ಮಾವ
Image
ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
Image
IPL ಹೆಸರಿನಲ್ಲಿ ಬೆಳಗಾವಿಯ ಕ್ರಿಕೆಟ್ ಪಟುವಿಗೆ ಪಂಗನಾಮ: 23 ಲಕ್ಷ ವಂಚನೆ
Image
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣದ ಎ3 ಪೊಲೀಸಪ್ಪನ ಮಗ ಪರಾರಿ

ಮೇ 16ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಸ್ವಾಮೀಜಿ ಬಿಟ್ಟು ಹೋಗಿದ್ದಾರೆ. ಈ ಬಗ್ಗೆ ಮೇ 17ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಬಳಿಕ ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣದ ಎ3 ಪೊಲೀಸಪ್ಪನ ಮಗ ಪರಾರಿ

ಇನ್ನು ಆರಾಮ ಇಲ್ಲದೇ ಇದ್ದಾಗ ಬಾಲಕಿಯ ತಂದೆ-ತಾಯಿಯೇ ಬಾಲಕಿಯನ್ನು ವಾರಗಟ್ಟಲೇ ಮಠದಲ್ಲೇ ಮಠದಲ್ಲಿ ಬಿಟ್ಟು ಹೋಗುತ್ತಿದ್ದರು. ಅದನ್ನೇ ಸ್ವಾಮೀಜಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದ ಆರೋಪ ಕೂಡ ಇದೆ. 2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಇದೀಗ ಅತ್ಯಾಚಾರ ಆರೋಪ ಹಿನಲ್ಲೆ ಸ್ವಾಮೀಜಿಯನ್ನು ಯಾವುದೇ ಕಾರಣಕ್ಕೂ ಬಿಡದಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:40 am, Sat, 24 May 25

Follow Us
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!
ಗೋಮಾತೆಗೆ ಅದ್ಧೂರಿ ಸೀಮಂತ ಮಾಡಿ ಹೋಳಿಗೆ ಊಟ ಹಾಕಿಸಿದ ರೈತ!