ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ, ಇಲ್ಲಾಂದ್ರೆ ಹಿಂದೂ ಸಮಾಜ ಒಡೆದು ಹಾಕುತ್ತೆ: KS ಈಶ್ವರಪ್ಪ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶ್ರೀ ರಾಮಸೇನೆಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಮುಖಂಡ ಕೆಎಸ್​ ಈಶ್ವರಪ್ಪ, ಹಿಂದೆ ಮುಸ್ಲಿಮರು ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದಾರೆ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ, ಇಲ್ಲಾಂದ್ರೆ ಹಿಂದೂ ಸಮಾಜ ಒಡೆದು ಹಾಕುತ್ತೆ: KS ಈಶ್ವರಪ್ಪ
K.S.ಈಶ್ವರಪ್ಪ
Follow us
ಸದಾಶಿವ ಜಾಧವ್‌, ಚಿಕ್ಕೋಡಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2023 | 2:54 PM

ಚಿಕ್ಕೋಡಿ, ಡಿಸೆಂಬರ್​​ 31: ಹಿಂದೆ ಮುಸ್ಲಿಮರು ದೇವಸ್ಥಾನ ಒಡೆದು ಮಸೀದಿ ನಿರ್ಮಿಸಿದ್ದಾರೆ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದರೆ ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಜೆಪಿ ಮುಖಂಡ ಕೆಎಸ್​ ಈಶ್ವರಪ್ಪ (KS Eshwarappa) ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಶ್ರೀ ರಾಮಸೇನೆಯಿಂದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಹಿಜಾಬ್ ಧರಿಸಿ ಬಂದರೇ ಹಿಂದೂ ಸಮಾಜ‌ದ ವಿದ್ಯಾರ್ಥಿಗಳು ಕೇಸರಿ ಶಾಲ್ ಧರಿಸಿ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಕೋರ್ಟ್​ ಆದೇಶ ತಿರಸ್ಕರಿಸಿ ಹಿಜಾಬ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆ.ಎಸ್​.ಈಶ್ವರಪ್ಪ ವಾಗ್ದಾಳಿ

ಪ್ರಧಾನಿ ಮೋದಿ ಸೂರ್ಯ ಇದ್ದ ಹಾಗೆ, ನಾಯಿಗಳು ಬೊಗಳುತ್ತಿರುತ್ತವೆ. ಪ್ರಿಯಾಂಕ್ ಖರ್ಗೆ ಎಂಬ ರಾಜಕಾರಣಿ ಮೋದಿ ಬಗ್ಗೆ ಟೀಕೆ ಮಾಡ್ತಾರೆ. ಸೂರ್ಯನಿಗೆ ಊಗಿದರೇ ಉಗಿದಿದ್ದು ಪ್ರಿಯಾಂಕಾ ಖರ್ಗೆ ಅವರಿಗೆ ಮರಳಿ ಬರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿವೈ ವಿಜಯೇಂದ್ರರನ್ನ ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ: ಗೋವಿಂದ ಕಾರಜೋಳ

ಪಾಕಿಸ್ತಾನ ಸೇರಿ ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ. ಪಾಕಿಸ್ತಾನ ದೇಶದವರು ಮೋದಿ ಪ್ರಧಾನಿ ಆಗಿ ಬರಲಿ ಎಂದು ಬಯಸುತ್ತಿದ್ದಾರೆ. ಮೋದಿ ಭಾರತೀಯ ಸಂಸ್ಕೃತಿಯನ್ನ ವಿಶ್ವಕ್ಕೆ ಸಾರಿದರು. ದೇಶವನ್ನ ಲೂಟಿ ಮಾಡಿದವರಿಗೆ ಭಾರತೀಯ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ. ಕಾಂಗ್ರೆಸ್ ಅವರ ಅಧಿಕಾರದ ಆಸೆಯಿಂದ ದೇಶ ತುಂಡು ತುಂಡಾಯಿತು ಎಂದು ಹರಿಹಾಯ್ದರು.

ಜನೇವರಿ 22 ರಾಮ ಮಂದಿರ ಉದ್ಘಾಟನೆ ದಿನದಂದು ಸ್ವತಂತ್ರ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ. ಕಾಂಗ್ರೆಸ್ ನಾಯಕರು ಹಿಂದೂಗಳ ನಡುವೆ ಬೆಂಕಿ ಹಚ್ಚಿದರು. ಕಾಂಗ್ರೆಸ್ ನಾಯಕರಿಗೆ ರಾಮ‌ ಮಂದಿರ ಉದ್ಘಾಟನೆಯ ಪಾಸ್ ಶೋ ಆಫ್ ಮಾಡಲು ಕೇಳುತ್ತಿದ್ದಾರೆ. ಮೋದಿ ಕಾಲಾವಧಿಯಲ್ಲಿ ಸಂತೋಷದಿಂದ ಸೈನಿಕರು ದೇಶ ಕಾಯುತ್ತಿದ್ದಾರೆ.

ಇದನ್ನೂ ಓದಿ: ವಿಕ್ರಂ ಸಿಂಹ ಬಂಧನ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಸಿದ್ದರಾಮಯ್ಯ ಅವರು 1 ಸಾವಿರ ಕೋಟಿ ಮುಸ್ಲಿಂರಿಗೆ ಇವರ ಅಪ್ಪನ‌ಮನೆ ದುಡ್ಡು ಕೊಡತಾರಾ? ಹಮ್ ದೋ ಹಮಾರೆ ದೋ ಎಂದು ಮೋದಿ ಕಾನೂನು ತಂದಿದ್ದಾರೆ. ಆದರೆ ಮುಸ್ಲಿಂಮರು ಹಮ್ ಪಾಂಚ್ ಹಮಾರಾ ಪಚ್ಚಿಸ್ ಎನ್ನುವದು ಮೋದಿ ಕಾಲಾವಧಿಯಲ್ಲಿ ಸಾಧ್ಯವಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ನ್ಯಾಯಾಲಯದ ಸೂಚನೆ ಮೇರೆಗೆ ಮಥುರಾ, ಕಾಶಿ ದೇವಸ್ಥಾನಗಳ ಸರ್ವೆ ಕಾರ್ಯ ನಡೆಯುತ್ತಿದೆ. ಶೀಘ್ರ ಕಾಶಿಯಲ್ಲಿ ವಿಶ್ವನಾಥ, ಮಥುರಾದಲ್ಲಿ ಕೃಷ್ಣ ದೇಗುಲ ನಿರ್ಮಾಣವಾಗಲಿದೆ. ಶ್ರೀರಾಮನ ಬಗ್ಗೆ ಚರ್ಚಿಸುತ್ತಿರುವುದಕ್ಕೆ ಕೆಲವರ ಹೊಟ್ಟೆಯಲ್ಲಿ ಕಸಿವಿಸಿ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ