AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿ ಅಂತ ರೂಮ್​​ನಲ್ಲಿ ಬೆಂಕಿ ಹಾಕಿಕೊಂಡು ನಿದ್ರೆಗೆ ಜಾರಿದ ಯುವಕರು: ಉಸಿರುಗಟ್ಟಿ ಮೂವರು ಸಾವು

ಬೆಳಗಾವಿಯ ಅಮನ್ ನಗರದಲ್ಲಿ ಮನಕಲಕುವ ದುರಂತವೊಂದು ಸಂಭವಿಸಿದೆ. ರಾತ್ರಿ ರೂಮ್​​ನಲ್ಲಿ ಮಲಗಿದ್ದ ಮೂವರು ಯುವಕರು ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿರುವಂತಹ ದುರಂತ ಸಂಭವಿಸಿದೆ. ಮತ್ತೊಬ್ಬ ಯುವಕ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾನೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸದ್ಯ ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ಚಳಿ ಅಂತ ರೂಮ್​​ನಲ್ಲಿ ಬೆಂಕಿ ಹಾಕಿಕೊಂಡು ನಿದ್ರೆಗೆ ಜಾರಿದ ಯುವಕರು: ಉಸಿರುಗಟ್ಟಿ ಮೂವರು ಸಾವು
ಮೃತ ಯುವಕರು
ಸಹದೇವ್​ ಮಾನೆ
| Edited By: |

Updated on: Nov 18, 2025 | 9:04 PM

Share

ಬೆಳಗಾವಿ, ನವೆಂಬರ್ 18: ರಾತ್ರಿ ರೂಮ್​​ನಲ್ಲಿ ಮಲಗಿದ್ದ ನಾಲ್ವರ ಪೈಕಿ ಮೂವರು ಯುವಕರು (boys) ಹೊಗೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದು (death), ಮತ್ತೊಬ್ಬ ಯುವಕ ಅಸ್ವಸ್ಥನಾಗಿರುವಂತಹ ಘಟನೆ ಅಮನ್ ನಗರದಲ್ಲಿ ನಡೆದಿದೆ. ರಿಹಾನ್ ಮತ್ತಿ(22), ಸರ್ಫರಾಜ್(22), ಮೊಯಿನ್‌ ನಲಬಂದ್‌(22) ಮೃತರು. ಗಂಭೀರವಾಗಿ ಅಸ್ವಸ್ಥಗೊಂಡಿರುವ ಮತ್ತೊಬ್ಬನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಡೆದದ್ದೇನು?

ನಿನ್ನೆ ರಾತ್ರಿ ನಾಮಕರಣ ಕಾರ್ಯಕ್ರಮ ಮುಗಿಸಿಕೊಂಡು ನಾಲ್ವರು ಯುವಕರು ಬಂದಿದ್ದಾರೆ. ಚಳಿ ಹಿನ್ನೆಲೆ ರೂಮ್‌ನಲ್ಲಿ ಬೆಂಕಿ ಹಾಕಿಕೊಂಡು ಮಲಗಿದ್ದಾರೆ. ಸೊಳ್ಳೆ ಕಾಟ ಹಿನ್ನೆಲೆ ನಾಲ್ಕೈದು ಮಸ್ಕಿಟೋ ಕಾಯಿಲ್ ಹಾಕಿ ಮಲಗಿದ್ದಾರೆ. ಹೊಗೆ ಹೊರಹೋಗಲು ಕಿಟಕಿ ಓಪನ್ ಮಾಡದ ಹಿನ್ನೆಲೆ ಇಡೀ ಕೊಠಡಿ ತುಂಬಾ ಹೊಗೆ ಆವರಿಸಿದ್ದು, ಉಸಿರುಗಟ್ಟಿ ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಬೆಂಗಳೂರು: ಒಬ್ಬನನ್ನೇ ಮದುವೆಯಾಗಿದ್ದ ಶಿರಸಿಯ ಅಕ್ಕ-ತಂಗಿ! ಭೀಕರವಾಗಿ ಕೊಲೆಯಾದ ಎರಡನೇ ಹೆಂಡತಿ

ಇನ್ನು ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸ್ಥಳ ಪಂಚನಾಮೆ ಬಳಿಕ ಮೃತದೇಹಗಳನ್ನ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಜೊತೆಗೆ ಬೂದಿಯ ಸ್ಯಾಂಪಲ್ಸ್ ಅನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ. ಇಂದು ರಾತ್ರಿಯೇ ಮರಣೋತ್ತರ ಪರೀಕ್ಷೆ ನಡೆಸಿ ಶವಸಂಸ್ಕಾರ ಸಾಧ್ಯತೆ ಇದೆ.

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಬಳಿಕ ಆರೋಪಿ ತಾನೂ ಆತ್ಮಹತ್ಯೆಗೆ ಯತ್ನ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಬಳಿಕ ಆರೋಪಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಳಗಾವಿ ನಗರದ ಖಾಸಬಾಗ್ ಬಾರ್​ವೊಂದರ ಬಳಿ ನಡೆದಿದೆ. ಚಾಕುವಿನಿಂದ ಇರಿದುಕೊಂಡು ರಫೀಕ್​  ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಗಾಯಗೊಂಡ ರಫೀಕ್​ಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರಫೀಕ್, ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದಾಗ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್​ನಲ್ಲಿ ಎಂಜಿನಿಯರ್​ ಮರ್ಡರ್​

ನ.12ರಂದು ಯಲ್ಲಾಪುರದ ಉಮ್ಮಚಗಿಯ ಕೆವಿಜಿ ಬ್ಯಾಂಕ್ ದರೋಡೆ ಮುಂದಾಗಿದ್ದ ರಫೀಕ್​, ದರೋಡೆ ವಿಫಲ ಹಿನ್ನೆಲೆ ಕಟ್ಟಡಕ್ಕೆ ಬೆಂಕಿಯಿಟ್ಟಿದ್ದರು. ಕೇಸ್​ ದಾಖಲಿಸಿದ್ದ ಯಲ್ಲಾಪುರ ಠಾಣೆ ಪೊಲೀಸರು ಆರೋಪಿ ಬೆನ್ನುಬಿದ್ದಿದ್ದರು. ಬೆಳಗಾವಿಯಲ್ಲಿ ಇರೋ ಮಾಹಿತಿ ಹಿನ್ನೆಲೆ ಯಲ್ಲಾಪುರ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ PSI ಸಿದ್ದಪ್ಪ ಗುಡಿ, ಪಿಸಿ ಶಫಿ ಶೇಖ್ ಮೇಲೆ‌ ಹಲ್ಲೆಗೆ ಯತ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ