
ಬೆಳಗಾವಿ, ಡಿಸೆಂಬರ್ 17: ಕಬ್ಬು ಕಟಾವು ವೇಳೆ ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಬಾರವ್ವ ಕೋಬಡಿ(60), ಲಕ್ಷ್ಮೀಬಾಯಿ ರುದ್ರಗೌಡರ್(65) ಮೃತರು. ಸದ್ಯ ಸ್ಥಳದಲ್ಲಿ ಮೃತರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಬ್ಬಿನ ಗದ್ದೆಗೆ ಕೂಲಿ ಕೆಲಸಕ್ಕೆಂದು ಇಬ್ಬರು ಮಹಿಳೆಯರು ಬಂದಿದ್ದರು. ಕಬ್ಬು ಕಟಾವು ವೇಳೆ ಮುಂದೆ ನೋಡದೇ ಚಾಲಕ ವಾಹನ ಚಲಾಯಿಸಿದ್ದಾನೆ. ಈ ವೇಳೆ ಇಬ್ಬರು ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ.
ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ. ರಚನಾ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹೊಸನಗರದ ಕೊಡಚಾದ್ರಿ ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತಿದ್ದಳು. ಕಾಲೇಜಿನಿಂದ ಮನೆಗೆ ಬಂದ ಬಳಿಕ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಡಿ.12ರಂದು ಘಟನೆ ನಡೆದಿತ್ತು. ಸುರೇಶ್(28) ಮೃತ ಯುವಕ.
ಇದನ್ನೂ ಓದಿ: Dharwad: ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟ ಯುವತಿ; ಸಿಕ್ಕಿದ್ದು ಎರಡೆರಡು ಡೆತ್ನೋಟ್!
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಟ್ಟು 8 ಜನರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಸುರೇಶ್ ಕೊನೆಯುಸಿರೆಳೆದಿದ್ದಾರೆ.
ಗಾಂಜಾ ಮತ್ತಿನಲ್ಲಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಮೈಸೂರಿನ ಹೆಚ್.ಡಿ ಕೋಟೆಯ ಶಿವಾಜಿ ರಸ್ತೆಯಲ್ಲಿ ಘಟನೆ ನಡೆದಿದೆ. ಹೆಚ್.ಡಿ ಕೋಟೆ ಪಟ್ಟಣದ ನಿವಾಸಿ ಮಹಮದ್ ರಫಿಕ್ (24) ಮೃತ ದುರ್ದೈವಿ. ಔಹಿದ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಹೆಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಿತ್ರ ದ್ರೋಹ: ತಂಗಿ ಜೊತೆ ಲವ್ವಿಡವ್ವಿ; ಗೆಳೆಯನಿಗೆ ಚಟ್ಟ ಕಟ್ಟಿದ ಸ್ನೇಹಿತರು
ಮೊದಲು ಹಣದ ವಿಚಾರವಾಗಿ ಗಲಾಟೆ ಆರಂಭವಾಗಿದೆ. ಪರಸ್ಪರ ಅವಾಚ್ಯ ಶಬ್ದಗಳಿಂದ ಇಬ್ಬರು ನಿಂದಿಸಿದ್ದಾರೆ. ಈ ವೇಳೆ ಒಬ್ಬರಿಗೊಬ್ಬರು ಎದುರು ಸಿಕ್ಕಿದ್ದು, ರಫಿಕ್ ತಲೆಗೆ ಔಹಿದ್ ದೊಣ್ಣೆಯಿಂದ ಹೊಡೆದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫಿಕ್ನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:20 pm, Wed, 17 December 25