ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಪ್ರಾಣ ಪ್ರತಿಷ್ಠೆಯ ಮುಹೂರ್ತ ನಿಗದಿಪಡಿಸಿದ್ದು ಯಾರು? ಎಲ್ಲಿಯವರು? ಇಲ್ಲಿದೆ ಮಾಹಿತಿ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ
ವಿಜಯೇಂದ್ರ ಶರ್ಮಾ, ಮುಹೂರ್ತ ಪತ್ರ
Edited By: ವಿವೇಕ ಬಿರಾದಾರ

Updated on: Jan 20, 2024 | 1:41 PM

ಬೆಳಗಾವಿ, ಜನವರಿ 20: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಜನವರಿ 22 ರಂದು ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನಂತರ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಸಮಯದಲ್ಲಿ ಅಭಿಜಿನ್ ಮುಹೂರ್ತವಿರುತ್ತದೆ. ಇದೇ ಸಮಯದಲ್ಲಿ ರಾಮನ ಜನನವಾಯಿತು ಎಂಬ ಕಾರಣದ ಜತೆಗೆ, ಈ ವೇಳೆ ಅಮೃತ ಸಿದ್ಧಿಯೋಗ, ಸರ್ವಾರ್ಥ ಸಿದ್ಧಿಯೋಗಗಳಿವೆ ಎಂಬುದನ್ನೂ ಗಮನದಲ್ಲಿಟ್ಟುಕೊಳ್ಳಬೇಕು. ಇನ್ನು ಈ ಮುಹೂರ್ತವನ್ನು ನಿಗದಿಪಡಿಸಿದ್ದು ಯಾರು? ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ಬೆಳಗಾವಿಯ ನವ ಬೃಂದಾವನ ನಿವಾಸಿಯಾಗಿರುವ ವಿಜಯೇಂದ್ರ ಶರ್ಮಾ ಅವರು ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದಾರೆ. ವಿಜಯೇಂದ್ರ ಶರ್ಮಾ ಅವರು ವಿದ್ಯಾವಿಹಾರ ವಿದ್ಯಾಲಯ ಕುಲಪತಿಯಾಗಿದ್ದಾರೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠೆಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ ಕೋಶ್ಯಾಧ್ಯಕ್ಷ ಸ್ವಾಮಿ ಗೋವಿಂದ್ ದೇವಗಿರಿ ಅವರು, ವಿಜಯೇಂದ್ರ ಶರ್ಮಾ ಅವರ ಬಳಿ ಮುಹೂರ್ತ ಕೇಳಿದ್ದರು.

ಇದನ್ನೂ ಓದಿ: Watch: ಅಯೋಧ್ಯೆ ರಾಮಮಂದಿರ ಹೇಗಿದೆ?; ಇಲ್ಲಿದೆ ರಾಮನ ಭವ್ಯ ದೇಗುಲದ ಒಂದು ನೋಟ

ಬಳಿಕ ವಿಜಯೇಂದ್ರ ಶರ್ಮಾ ಅವರು ದೇವಾಲಯದ ಒಳಗೆ ಮೂರ್ತಿ ಪ್ರವೇಶ (ಜ.18) ಮತ್ತು ಪ್ರಾಣ ಪ್ರತಿಷ್ಠೆಗೆ (ಜ.22) ಈ ಎರಡು ದಿನದ ಮುಹೂರ್ತವನ್ನು ನಿಗದಿಪಡಿಸಿ 2023ರ ಏ.15ರಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ಗೆ ಪತ್ರದ ಮೂಲಕ ಕಳುಹಿಸುತ್ತಾರೆ.

ಶಂಕುಸ್ಥಾಪನೆಗೂ ಮುಹೂರ್ತ ನಿಗದಿ ಮಾಡಿದ್ದು ಇವರೆ

ಹೌದು 2020ರ ಆಗಸ್ಟ್​ 5 ರಂದು ಭದ್ರಯೋಗದಲ್ಲಿ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ನೆರವೇರಿದೆ. ಈ ಶಂಕುಸ್ಥಾಪನೆಯ ಮುಹೂರ್ತವನ್ನು ವಿಜಯೇಂದ್ರ ಶರ್ಮಾ ಅವರೇ ನೀಡಿದ್ದಾರೆ. ಬಳಿಕ ರಾಮಮಂದಿರ ಭೂಮಿ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸುತ್ತಾರೆ. ಆದರೆ ಇದೀಗ ಅನಾರೋಗ್ಯದ ಕಾರಣ ವಿಜಯೇಂದ್ರ ಶರ್ಮಾ ಅವರು ಅಯೋಧ್ಯೆಗೆ ಹೋಗುತ್ತಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 20 January 24

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us