ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದವನು ಯಾರು? ಆತನ ಕ್ರೈಂ ಹಿಸ್ಟರಿ ಇಲ್ಲಿದೆ ನೋಡಿ

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದವನು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಂಗಳೂರಿನ ಕೈದಿ ಜಯೇಶ್ ಪೂಜಾರಿ. ಈತನ ಕ್ರೈಂ ಹಿಸ್ಟಡಿ ಕೂಡ ಹಾಗೇ ಇದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದವನು ಯಾರು? ಆತನ ಕ್ರೈಂ ಹಿಸ್ಟರಿ ಇಲ್ಲಿದೆ ನೋಡಿ
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಕೈದಿ ಜಯೇಶ್ ಪೂಜಾರಿ ಇರುವ ಹಿಂಡಲಗಾ ಜೈಲು
Follow us
TV9 Web
| Updated By: Rakesh Nayak Manchi

Updated on:Jan 15, 2023 | 3:58 PM

ಬೆಳಗಾವಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಜೀವ ಬೆದರಿಕೆ ಹಾಕಿದ ಕೈದಿ ಮಂಗಳೂರಿನ ಜಯೇಶ್ ಪೂಜಾರಿ (Prisoner Jayesh Poojary) ಎಂದು ತಿಳಿದುಬಂದಿದ್ದು, ಈತನ ಕ್ರೈಮ್ ಹಿಸ್ಟರಿ ಕೂಡ ಅದೇ ರೀತಿಯಲ್ಲಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಜಯೇಶ್ ಪೂಜಾರಿ (Jayesh Poojary Crime History) ಆರೇಳು ವರ್ಷಗಳ ಹಿಂದೆ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ. ನಾಲ್ಕು ವರ್ಷಗಳ ಹಿಂದೆ ಅಂದು ಉತ್ತರ ವಲಯ ಐಜಿಪಿಯಾಗಿದ್ದ ಇಂದಿನ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್​ಗೆ (Alok Kumar) ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದನು.

ಮೂಲತಃ ಕಡಬಾ ತಾಲೂಕು ಶಿರಾಡಿ ನಿವಾಸಿಯಾಗಿರುವ ಜಯೇಶ್ ಪೂಜಾರಿ 2008ರಲ್ಲಿ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಮತ್ತು ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದನು. 2016ರ ಆಗಸ್ಟ್ 12ರಂದು ಮಂಗಳೂರಿನ ಐದನೇ ಸೆಷನ್ಸ್ ನ್ಯಾಯಾಲಯವು ಜಯೇಶ್ ಪೂಜಾರಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2017ರಲ್ಲಿ ಮರಣ ದಂಡನೆ ಶಿಕ್ಷೆ ಜೀವಾವಧಿ ಶಿಕ್ಷೆಯಾಗಿ ಮಾರ್ಪಾಡಾಗಿತ್ತು.

ಇದನ್ನೂ ಓದಿ: Threat to Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ 3 ಬಾರಿ ಜೀವ ಬೆದರಿಕೆ ಕರೆ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜಯೇಶ್​ ಪೂಜಾರಿ 2018ರಲ್ಲಿ ಅಂದಿನ ಉತ್ತರ ವಲಯ ಐಜಿಪಿಯಾಗಿದ್ದ ಇಂದಿನ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೆ ದೂರವಾನಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. 2019ರ ಮೇ 1ರಂದು ಮೈಸೂರು ಜೈಲಿಗೆ ಸ್ಥಳಾಂತರಗೊಂಡಿದ್ದ ಜಯೇಶ್ ಪೂಜಾರಿ, 2021ರ ಸೆಪ್ಟೆಂಬರ್ 14ರಂದು ಮರಳಿ ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರಗೊಂಡಿದ್ದನು.

ಎಟಿಎಸ್ ಅಧಿಕಾರಿಗಳಿಂದ ಕೈದಿ ಜಯೇಶ್​ ಪೂಜಾರಿ ವಿಚಾರಣೆ

ಹಿಂಡಲಗಾ ಜೈಲಿನ ಕೈದಿಯಿಂದ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ ಸಂಬಂಧ ಎಟಿಎಸ್ ಅಧಿಕಾರಿಗಳಿಂದ ಕೈದಿ ಜಯೇಶ್​ ಪೂಜಾರಿ ವಿಚಾರಣೆ ನಡೆದಿದೆ. ಎಟಿಎಸ್​ನ ಎಪಿಐ ಶಿಲ್ಪಾ ಯಮಗಾರ ನೇತೃತ್ವದಲ್ಲಿ ಮಹಾರಾಷ್ಟ್ರದ ATS ಅಧಿಕಾರಿಗಳು ವಿಚಾರಣೆ ನಡೆಸಿ ತೆರಳಿದ್ದಾರೆ. ಜಯೇಶ್ ಪೂಜಾರಿ ಬಳಿ ಇದ್ದ ಡೈರಿ ಜಪ್ತಿ ಮಾಡಿದ್ದು, ಅದರಲ್ಲಿ ಕೇಂದ್ರ ಸಚಿವರು, ಪೊಲೀಸ್ ಅಧಿಕಾರಿಗಳ ನಂಬರ್ ಪತ್ತೆಯಾಗಿದೆ.

ನಾಗ್ಪುರದ ಧನತೋಲಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲು

ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ ಸಂಬಂಧ ನಾಗ್ಪುರದ ಧನತೋಲಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದೆ. ಗಡ್ಕರಿ ಕಚೇರಿ ಸಿಬ್ಬಂದಿ ಜಿತೇಂದ್ರ ಶರ್ಮಾ ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 1860ರ ಕಲಂ 385, 387, 506/2, 507 ಅಡಿ ಎಫ್​ಐಆರ್ ದಾಖಲಾಗಿದೆ. ನಿನ್ನೆ ಬೆಳಗ್ಗೆ 11.29ಕ್ಕೆ ನಿತಿನ್​ ಗಡ್ಕರಿ ಕಚೇರಿ ದೂರವಾಣಿ ಸಂಖ್ಯೆಗೆ ಕರೆ ಮಾಡಿ ‘ನಾನು ದಾವೂದ್​ ಗ್ಯಾಂಗ್​ನಿಂದ ಮಾತನಾಡುತ್ತಿದ್ದೇನೆ, ಕೇಂದ್ರ ಸಚಿವ ನಿತಿನ್​ ಗಡ್ಕರಿಗೆ ಹೇಳಿ 100 ಕೋಟಿ ಹಣ ಕಳುಹಿಸಿ. ಇಲ್ಲದಿದ್ದರೆ ಗಡ್ಕರಿ ಎಲ್ಲಿ ಸಿಗುತ್ತಾರೋ ಅಲ್ಲಿ ಬಾಂಬ್​ ಸ್ಫೋಟಿಸಿ ಕೊಲ್ಲುತ್ತೇನೆ. ನನಗೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಕಚೇರಿ ಗೊತ್ತು, ಬೆಂಗಳೂರಿಗೆ ಹಣ ಕಳುಹಿಸಿ ಎಂದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಚಾರವನ್ನು ಸಿಬ್ಬಂದಿ ಗಡ್ಕರಿ ಗನ್​ಮ್ಯಾನ್ ದೀಪಕ್‌ಗೆ ತಿಳಿಸಿದ್ದಾರೆ. ನಿನ್ನೆ ಬೆಳಗ್ಗೆ 11.37ಕ್ಕೆ ಮತ್ತೆ ಕರೆ ಮಾಡಿ ಬೆದರಿಕೆ ಹಾಕಿದ್ದ ಕೈದಿ ಜಯೇಶ್, ಈ ವೇಳೆ 8139923258 ನಂಬರ್ ನೀಡಿದ್ದನು. ಮಧ್ಯಾಹ್ನ 12.29ಕ್ಕೆ ಮತ್ತೊಮ್ಮೆ ಕರೆ ಮಾಡಿದ್ದ ಜಯೇಶ್ ಪೂಜಾರಿ, ನನ್ನ ಸಂದೇಶವನ್ನು ನಿತಿನ್​ ಗಡ್ಕರಿಗೆ ಹೇಳಿದ್ದೀರಾ ಎಂದು ಪ್ರಶ್ನಿಸಿದ್ದಾನೆ. ಆಗ ಸಾಹೇಬರು ಬ್ಯುಸಿ ಇದ್ದಾರೆ ಅಂತಾ ಸಿಬ್ಬಂದಿ ಹೇಳಿದ್ದಾರೆ. ನಿನ್ನ ಹೆಸರು, ವಿಳಾಸ ತಿಳಿಸು ಎಂದಾಗ ನೀವು ಕ್ಯಾಶ್ ಕರ್ನಾಟಕಕ್ಕೆ ಕಳುಹಿಸಿ ಅಲ್ಲಿಂದ ಹೇಳುತ್ತೇವೆ ಎಂದಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Sun, 15 January 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ