AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ವಿಮಾನಗಳ ಇಂಧನ ಉತ್ಪಾದನೆ ಮಾಡುವ ಕೇಂದ್ರವಾಗಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವು ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬೆಳಗಾವಿ ಮುಂದಿನ ದಿನಗಳಲ್ಲಿ ಎಥೆನಾಲ್‌ ಉತ್ಪಾದನೆ ಅಷ್ಟೇ ಅಲ್ಲ, ವಿಮಾನಗಳ ಇಂಧನ ಉತ್ಪಾದನೆ ಮಾಡುವ ಕೇಂದ್ರವಾಗಲಿದೆ. ಲೋಕೋಪಯೋಗಿ ಸಚಿವರು ಕರ್ನಾಟಕದಲ್ಲಿ ಇಥೆನಾಯಿಲ್ ಬಳಕೆಗೆ ಪ್ರೋತ್ಸಾಹ ಕೊಡಿ ಎಂದು ಹೇಳಿದ್ದಾರೆ.

ಬೆಳಗಾವಿ ವಿಮಾನಗಳ ಇಂಧನ ಉತ್ಪಾದನೆ ಮಾಡುವ ಕೇಂದ್ರವಾಗಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಸಚಿವ ನಿತಿನ್ ಗಡ್ಕರಿ
Sahadev Mane
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 22, 2024 | 3:57 PM

Share

ಬೆಳಗಾವಿ, ಫೆಬ್ರವರಿ 22: 6,975 ಕೋಟಿ ರೂ. ಮೌಲ್ಯದ 400 ಕಿ.ಮೀ. ರಸ್ತೆ ಕಾಮಗಾರಿ ಮತ್ತು ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವು ಯೋಜನೆಗಳಿಗೆ ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಬೆಳಗಾವಿ ಮುಂದಿನ ದಿನಗಳಲ್ಲಿ ಎಥೆನಾಲ್‌ ಉತ್ಪಾದನೆ ಅಷ್ಟೇ ಅಲ್ಲ, ವಿಮಾನಗಳ ಇಂಧನ ಉತ್ಪಾದನೆ ಮಾಡುವ ಕೇಂದ್ರವಾಗಲಿದೆ. ಲೋಕೋಪಯೋಗಿ ಸಚಿವರು ಕರ್ನಾಟಕದಲ್ಲಿ ಇಥೆನಾಯಿಲ್ ಬಳಕೆಗೆ ಪ್ರೋತ್ಸಾಹ ಕೊಡಿ. ಇದರಿಂದ ಪೆಟ್ರೋಲ್ ಗಿಂತಲೂ ಕಡಿಮೆ ದರದಲ್ಲಿ ಎಥೆನಾಲ್‌ ಲಭ್ಯವಾಗಲಿದೆ. ಪೆಟ್ರೋಲ್​ನಲ್ಲಿ ಎಥೆನಾಲ್ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಥೆನಾಲ್​ನ್ನು ಡೀಸೆಲ್​ನಲ್ಲಿ ಉಪಯೋಗಿಸಲಾಗುವುದು ಎಂದು ಹೇಳಿದ್ದಾರೆ.

ಬೆಳಗಾವಿ ಮೇಲ್ಸೇತುವೆ ಕಾಮಗಾರಿ ಆರಂಭಿಸುವುದಾಗಿ ಘೋಷಣೆ

ಬೆಳಗಾವಿ ಮೇಲ್ಸೇತುವೆ ಕಾಮಗಾರಿಯನ್ನೂ ಸಹ ಆರಂಭಿಸಲಾಗುವುದು ಎಂದಿದ್ದಾರೆ. 6,900 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ ಕೊಟ್ಟಿದ್ದೇವೆ. ಬೆಳಗಾವಿ-ಸಂಕೇಶ್ವರ ಮಧ್ಯೆ 6 ಲೈನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಇದರಿಂದ ಕರ್ನಾಟಕ-ಮಹಾರಾಷ್ಟ್ರ ನಡುವೆ ಉತ್ತಮ ಸಂಪರ್ಕ ಸಿಗುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ 6,975 ಕೋಟಿ ರೂ. ಮೌಲ್ಯದ ಕಾಮಗಾರಿಗೆ ಚಾಲನೆ: ನಿತಿನ್ ಗಡ್ಕರಿಯನ್ನು ಕೊಂಡಾಡಿದ ಸತೀಶ್ ಜಾರಕಿಹೊಳಿ

ಸುರೇಶ್ ಅಂಗಡಿ ಇದ್ದಾಗ ಬೆಳಗಾವಿಯಲ್ಲಿ ರಿಂಗ್ ರಸ್ತೆ ಕನಸು ಇತ್ತು. ಈಗ ಬೆಳಗಾವಿಯಲ್ಲಿ ರಿಂಗ್ ರಸ್ತೆ ಯೋಜನೆಗೆ ಚಾಲನೆ ಕೊಟ್ಟಿದ್ದೇವೆ. ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ಕಾಮಗಾರಿ ಮಾಡುವ ಯೋಜನೆ ಇತ್ತು. ನಾವು ಗ್ರೀನ್ ಫೀಲ್ಡ್ ಎಕ್ಸ್​ಪ್ರೆಸ್​ ಹೈವೇ ನಿರ್ಮಿಸುತ್ತಿದ್ದೇವೆ. ಮುಳ್ಳಯ್ಯನಗಿರಿ, ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ಕರ್ನಾಟಕದಲ್ಲಿ ಕಬ್ಬು ಹೆಚ್ಚಿನ‌ ಸಂಖ್ಯೆಯಲ್ಲಿ ಬೆಳೆಯುತ್ತಾರೆ. ಬೆಳಗಾವಿಯಲ್ಲಿ 28 ಸಕ್ಕರೆ ಕಾರ್ಖಾನೆಗಳಿವೆ ಎಂದರು.

ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದ 8 ಜಿಲ್ಲೆಗಳಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್; 376 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಶಂಕು ಸ್ಥಾಪನೆ

ಬೆಂಗಳೂರಿನ ಟ್ರಾಫಿಕ್ ನಿವಾರಿಸಲು ಬೆಂಗಳೂರು ರಿಂಗ್ ರೋಡ್ ಅನುಕೂಲ ಆಗಲಿದೆ. ಮೋನಾಲಿಯಲ್ಲಿ ಅಟಲ್ ಟನಲ್ ನಿರ್ಮಿಸಲಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಏಕ್ಸಪ್ರೆಸ್ ಹೈವೆ ಕನೆಕ್ಟ್ ಆಗಲಿದೆ. ಇದೇ ವರ್ಷಾಂತ್ಯದಲ್ಲಿ ಈ ಮಹತ್ವದ ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿ ಮುಗಿಯುತ್ತೆ ಎಂದು ತಿಳಿಸಿದರು.

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿದಂತೆ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಎಲ್ಲ ಜಿಲ್ಲೆಗಳ‌ 376 ಕಿ.ಮೀ ಉದ್ದದ ರಸ್ತೆಗಳಿಗೆ 6975 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ