AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ ಚಳಿಗಾಲದ ಅಧಿವೇಶನ; ಜಿ.ಎಸ್​.ಪಾಟೀಲ್, ಸಲೀಂ ಜಂಟಿ ಸುದ್ದಿಗೋಷ್ಠಿ

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 2ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್ ಜಿ.ಎಸ್. ಪಾಟೀಲ್ ಮತ್ತು ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ. ಈ ಬಾರಿ ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಶಾಸಕರ ಭವನ ನಿರ್ಮಾಣ, ಪುಸ್ತಕ ಮೇಳ, ಯೋಗ ಚಟುವಟಿಕೆಗಳಿಗೂ ಸಿದ್ಧತೆ ನಡೆಯುತ್ತಿದೆ. ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಲು ಆಡಳಿತ ಮತ್ತು ವಿರೋಧ ಪಕ್ಷಗಳ ಸಹಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ ಚಳಿಗಾಲದ ಅಧಿವೇಶನ; ಜಿ.ಎಸ್​.ಪಾಟೀಲ್, ಸಲೀಂ ಜಂಟಿ ಸುದ್ದಿಗೋಷ್ಠಿ
ಜಿ.ಎಸ್​.ಪಾಟೀಲ್, ಸಲೀಂ ಜಂಟಿ ಸುದ್ದಗೋಷ್ಠಿ!
ಸಹದೇವ್​ ಮಾನೆ
| Edited By: |

Updated on: Nov 21, 2026 | 5:59 PM

Share

ಮುಖ್ಯಾಂಶಗಳು

  • ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 2ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
  • ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
  • ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಸಿಎಂ ಜೊತೆ ಚರ್ಚಿಸಲು ಸ್ಪೀಕರ್ ನಿರ್ಧಾರ.

ಬೆಳಗಾವಿ, ನವೆಂಬರ್ 21: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದೊಂದಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 2ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನದ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿರುವ ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಅಧಿವೇಶನಕ್ಕೆ ಅಗತ್ಯವಿರುವ ಸಭಾಂಗಣ, ಊಟ, ವಸತಿ, ವಾಹನ ಸೌಲಭ್ಯ, ಸ್ವಚ್ಛತೆ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಾರಿಯ ಅಧಿವೇಶನವನ್ನು ಅರ್ಥಪೂರ್ಣವಾಗಿ ನಡೆಸಲು ಆಡಳಿತ ಮತ್ತು ವಿರೋಧ ಪಕ್ಷಗಳು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರಕ್ಕೆ ಹೆಚ್ಚಿನ ಆದ್ಯತೆ

ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಈ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆ ನಡೆಸಲಾಗುವುದು ಎಂದು ಸ್ಪೀಕರ್ ಮತ್ತು ಸಭಾಪತಿ ತಿಳಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸುವುದಷ್ಟೇ ಅಲ್ಲದೆ, ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಚರ್ಚೆಯಲ್ಲಿ ಭಾಗವಹಿಸಿ ರಾಜ್ಯದ ಹಲವು ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕು ಎಂದು ಸಭಾಪತಿ ಸಲೀಂ ಅಹ್ಮದ್ ಹೇಳಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ನಡೆಯುವ ಪ್ರತಿಭಟನೆಗಳಿಗೂ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಹೋರಾಟಗಳು ಸದಾ ಇದ್ದೇ ಇರುತ್ತವೆ. ಆ ಹೋರಾಟಗಳಿಗೆ ಸ್ಪಂದಿಸುವ ಕೆಲಸವೂ ಆಗಬೇಕು ಎಂದು ತಿಳಿಸಿದ್ದಾರೆ.

ಶಾಸಕರ ಭವನ ನಿರ್ಮಾಣಕ್ಕೆ ಚಿಂತನೆ

ಬೆಳಗಾವಿಯಲ್ಲಿ ಶಾಸಕರಿಗಾಗಿ ಪ್ರತ್ಯೇಕ ಹಾಸ್ಟೆಲ್ ಹಾಗೂ ಶಾಸಕರ ಭವನ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ. ಅಲ್ಲದೆ, ಪ್ರತಿ ತಿಂಗಳು ಶಾಸಕರ ನೇತೃತ್ವದ ಸಮಿತಿ ಸಭೆಯನ್ನು ಬೆಳಗಾವಿಯಲ್ಲಿ ನಡೆಸುವ ಉದ್ದೇಶವಿದೆ.

ಪುಸ್ತಕ ಮೇಳ, ಯೋಗಕ್ಕೂ ವ್ಯವಸ್ಥೆ

ಈ ಬಾರಿಯ ಅಧಿವೇಶನದ ವಿಶೇಷವಾಗಿ ಪುಸ್ತಕ ಮೇಳ ಹಾಗೂ ಯೋಗ ದಿನದ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಸಚಿವರು ಮತ್ತು ಶಾಸಕರು ತಂಗುವ ವಸತಿ ಸ್ಥಳಗಳಲ್ಲಿ ಯೋಗಾಭ್ಯಾಸಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಧಿವೇಶನ ವೀಕ್ಷಿಸಲು ಬರುವ ಮಕ್ಕಳಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಅಧಿವೇಶನದ ಆರಂಭದಲ್ಲಿ ಕೆಲವು ಮಸೂದೆಗಳು ಮಂಡನೆಯಾಗುವ ಸಾಧ್ಯತೆಯಿದ್ದು, ಈಗಾಗಲೇ ಒಂದು ಮಸೂದೆ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ, ಉತ್ತರ ಕರ್ನಾಟಕದ ಅಭಿವೃದ್ಧಿ, ಶಾಸಕರ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸಮಸ್ಯೆಗಳ ಚರ್ಚೆಗೆ ಈ ಬಾರಿಯ ಅಧಿವೇಶನ ವೇದಿಕೆಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಠಾಣೆಗಳಲ್ಲಿ ಇನ್ಮುಂದೆ ನೋ ಸೆಟ್ಲ್‌ಮೆಂಟ್: ನೂತನ ಚೀಫ್ ಕಮಿಷನರ್ ಹಿತೇಂದ್ರ
ಠಾಣೆಗಳಲ್ಲಿ ಇನ್ಮುಂದೆ ನೋ ಸೆಟ್ಲ್‌ಮೆಂಟ್: ನೂತನ ಚೀಫ್ ಕಮಿಷನರ್ ಹಿತೇಂದ್ರ
"ಸನ್ಯಾಸಿ, ಸಿಎಂ ಎಲ್ಲವೂ ಹೊರಗಷ್ಟೇ, ಅಮ್ಮನ ಮುಂದೆ ಕೇವಲ ಮಗ
ಕಿಚ್ಚನ ಪಂಚಾಯ್ತಿ: ಅಧಿಕಾರದ ಉಪಯೋಗ, ದುರುಪಯೋಗದ ಚರ್ಚೆ
ಕಿಚ್ಚನ ಪಂಚಾಯ್ತಿ: ಅಧಿಕಾರದ ಉಪಯೋಗ, ದುರುಪಯೋಗದ ಚರ್ಚೆ
ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ವಿದ್ಯಾಭ್ಯಾಸಕ್ಕೆ ನೆರವಾಗಿದ್ದವನಿಂದಲೇ ಕೃತ್ಯ
ಹಿರಿಯೂರು ಉಪಚುನಾವಣೆ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ವಿಜಯೇಂದ್ರ
ಹಿರಿಯೂರು ಉಪಚುನಾವಣೆ: ಅಮಿತ್​ ಶಾ ಭೇಟಿಯಾಗಿ ರಿಪೋರ್ಟ್​ ಕೊಟ್ಟ ವಿಜಯೇಂದ್ರ
ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ
ಬಸವ ಮಂಟಪ ಕೃತಿ ವಿವಾದ: ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ವಶಕ್ಕೆ
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?