ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು‌

ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು‌ ಮಾಡಲಾಗಿದೆ. ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ(B Nagendra) ಅವರ ನಿರ್ದೇಶನ ಹಿನ್ನೆಲೆ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ಜಮೀನಿಗೆ ಮಂಜೂರು ಮಾಡಲಾಗಿದೆ.

ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು‌
ಸಂತ್ರಸ್ತೆಗೆ 2 ಎಕರೆ ಜಮೀನು ನೀಡಿದ ಸರ್ಕಾರ
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 16, 2023 | 7:43 PM

ಬೆಳಗಾವಿ, ಡಿ.16: ವಂಟಮೂರಿ ಗ್ರಾಮದಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು‌ ಮಾಡಲಾಗಿದೆ. ಈ ಕುರಿತು ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ(B Nagendra) ಅವರ ನಿರ್ದೇಶನ ಹಿನ್ನೆಲೆ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು  2.03 ಎಕರೆ ಜಮೀನು ಮಂಜೂರಿಗೆ ಆದೇಶಿಸಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೇ ಸಂತ್ರಸ್ತ ಮಹಿಳೆಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದ ಸರ್ಕಾರ

ಇನ್ನು ಈ ಪ್ರಕರಣದ ಸಂಬಂಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ, ಅಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ, ಸಂತ್ರಸ್ತೆ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು. ಇದೀಗ ಮತ್ತೆ ಸರ್ಕಾರ 2 ಎಕರೆ ಜಮೀನು ನೀಡುವ ಮೂಲಕ ಸಂತ್ರಸ್ತೆಯ ಜೊತೆಗೆ ನಾವಿದ್ದೇವು ಎಂಬುದನ್ನು ಸರ್ಕಾರ ಸಾಭೀತುಪಡಿಸಿದೆ.

ಇದನ್ನೂ ಓದಿ:ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ನೀಡಿದ ಮಾನವ ಹಕ್ಕುಗಳ ಆಯೋಗ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us